ಖುರ್ಚಿಯ ಮೇಲೆ ಕಣ್ಣಿಟ್ಟಿದ್ದ ಸಿಧು ಕೆಂಡಾಮಂಡಲ ;ಪಂಜಾಬ್‌ ಸಿಎಂ ಅಭ್ಯರ್ಥಿ ಘೋಷಿಸಿದ ರಾಹುಲ್‌ ಗಾಂಧಿ

ಲುಧಿಯಾನ: ಪಂಜಾಬ್ ವಿಧಾನಸಭಾ ಚುನಾವಣೆ ಇನ್ನೇನು ಹತ್ತಿರವಾಗುತ್ತಿದೆ. ಇದೇ 20ರಂದು ಚುನಾವಣೆ ನಡೆಯಲಿದ್ದು, ಈ ಹಂತದಲ್ಲಿ ಕಾಂಗ್ರೆಸ್‌ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಲುಧಿಯಾನದಲ್ಲಿ ನಡೆದ ಸಮಾವೇಶದಲ್ಲಿ ರಾಹುಲ್ ಗಾಂಧಿ ಈ ಘೋಷಣೆ ಮಾಡಿದ್ದು, ಪಂಜಾಬ್ ಮುಖ್ಯಮಂತ್ರಿ ಚರಣ್​​ಜಿತ್ ಸಿಂಗ್ ಚನ್ನಿ ಅವರೇ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಎಂದಿದ್ದಾರೆ.

 

ಸಿಎಂ ಖುರ್ಚಿಯ ಮೇಲೆ ಭಾರಿ ಕಣ್ಣು ಇಟ್ಟಿದ್ದ ಪಂಜಾಬ್​ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧುಗೆ ಈ ಘೋಷಣೆಯಿಂದ ಭಾರಿ ಶಾಕ್‌ ಆಗಿದೆ. ತಾವೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಕನಸು ಕಂಡು ಹಲವಾರು ರೀತಿಯಲ್ಲಿ ಪ್ರಯತ್ನಿಸಿದ್ದ ಸಿಧುಗೆ ಇದು ನುಂಗಲಾಗದ ತುತ್ತಾಗಿದ್ದು, ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ಪಕ್ಷವು ಪ್ರಾಮಾಣಿಕ ಮತ್ತು ಕ್ಲೀನ್ ಟ್ರ್ಯಾಕ್ ರೆಕಾರ್ಡ್ ಅನ್ನು ಆಯ್ಕೆ ಮಾಡಬೇಕು, ಯಾವುದೇ ಮುಖ್ಯಮಂತ್ರಿ ಆಯ್ಕೆಗೆ ಕನಿಷ್ಠ 60 ಶಾಸಕರ ಬೆಂಬಲ ಇರಬೇಕು ಎಂದು ಇತ್ತೀಚೆಗೆ ಅವರು ಹೇಳಿದ್ದರು.

ಜನವರಿ 27 ರಂದು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಸಾಮಾನ್ಯವಾಗಿ, ನಾವು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರು ಬಯಸಿದರೆ, ನಾವು ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ. ನಾವು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಮಾಲೋಚಿಸುತ್ತೇವೆ, ಅವರು ನಿರ್ಧರಿಸುತ್ತಾರೆ ಎಂದು ಹೇಳಿದ್ದರು.

ಇದೀಗ ಇವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ನಿರ್ಧಾರದ ಕುರಿತು ಸ್ಪಷ್ಟನೆ ನೀಡಿರುವ ರಾಹುಲ್ ಗಾಂಧಿ, ‘ಇದು ನನ್ನೊಬ್ಬನ ನಿರ್ಧಾರವಲ್ಲ. ಪಂಜಾಬ್‌ನ ಜನರು, ಯುವಕರು, ಕಾರ್ಯಕಾರಿ ಸಮಿತಿಯ ಸದಸ್ಯರಿಗೆ ಈ ಬಗ್ಗೆ ಪ್ರಶ್ನಿಸಿ ಅವರಿಂದಲೂ ನಿರ್ಧಾರ ಕೇಳಿದ್ದೇನೆ. ಬಡವರನ್ನು ಅರ್ಥಮಾಡಿಕೊಳ್ಳಬಲ್ಲ ವ್ಯಕ್ತಿಯೊಬ್ಬರು ನಮಗೆ ಬೇಕು ಎಂದು ಅವರು ಹೇಳಿದ್ದರು. ಚನ್ನಿಯವರು ಬಡ ಕುಟುಂಬದವರು. ಆದ್ದರಿಂದ ಅವರೇ ಸೂಕ್ತ ವ್ಯಕ್ತಿ ಎಂದು ನಿರ್ಧರಿಸಲಾಗಿದೆ’ ಎಂದರು. ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಚರಣ್​ಜಿತ್​ ಸಿಂಗ್ ಚನ್ನಿ ಸ್ಪರ್ಧಿಸಲಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹೆಸರು ಘೋಷಣೆ ಆದ ನಂತರ ಎಎನ್‌ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಚನ್ನಿ ‘ಇದು ನಾನು ಒಬ್ಬಂಟಿಯಾಗಿ ಹೋರಾಡಲು ಸಾಧ್ಯವಾಗದ ದೊಡ್ಡ ಯುದ್ಧ. ನನ್ನಲ್ಲಿ ಹಣವಿಲ್ಲ, ಹೋರಾಡಲು ಧೈರ್ಯವಿಲ್ಲ. ಪಂಜಾಬ್‌ನ ಜನರು ಈ ಯುದ್ಧದಲ್ಲಿ ಹೋರಾಡುತ್ತಾರೆ, ಎಲ್ಲರಿಗೂ ಧನ್ಯವಾದಗಳು’ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದಲ್ಲಿ ಮಹಾಮಾರಿ ಕೊರೋನಾ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಒಂದು ಲಕ್ಷಕ್ಕಿಂತ ಕಡಿಮೆ ಕೇಸ್ ದಾಖಲು,

Mon Feb 7 , 2022
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,99,054 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 895 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,22,72,014ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,02,874ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,08,938ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ […]

Advertisement

Wordpress Social Share Plugin powered by Ultimatelysocial