ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿನ ಸಂಪತ್ತನ್ನು ಲೂಟಿ ಮಾಡುವ ಸಂಚು ಮಾಡಿದೆ: ಸಿಎಂ ಚರಣ್ ಜಿತ್ ಸಿಂಗ್ ಚನ್ನಿ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ, ಈ ಪಕ್ಷ ಆಧುನಿಕ ಈಸ್ಟ್ ಇಂಡಿಯಾ ಕಂಪನಿ ಎಂದು ಆರೋಪಿಸಿದ್ದಾರೆ.ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿನ ಸಂಪತ್ತನ್ನು ಲೂಟಿ ಮಾಡುವ ಸಂಚು ಮಾಡಿದೆ.ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಹಸುವಿನ ಹಾಲು ಕರೆಯುವುದು ಹೇಗೆಂಬುದು ಕೂಡಾ ತಿಳಿದಿಲ್ಲ ಎಂದು ಚನ್ನಿ ಟೀಕಿಸಿದ್ದಾರೆ.ಪಂಜಾಬ್ ನಲ್ಲಿ ತಮ್ಮದೇ ಪಕ್ಷದ ಸಂಸದರು ವಿಶ್ವಾಸ ಕಳೆದುಕೊಂಡು ವಲಸೆ ಹೋಗುತ್ತಿದ್ದಾರಲ್ಲ ಈ ಬಗ್ಗೆ ಕೇಜ್ರಿವಾಲ್ ವಿವರಣೆ ನೀಡುತ್ತಾರಾ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಚನ್ನಿ, 2014ರ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ನಾಲ್ವರು ಆಪ್ ಸಂಸದರಲ್ಲಿ ಮೂವರು ಪಕ್ಷವನ್ನು ತ್ಯಜಿಸಿದ್ದಾರೆ. ಅದೇ ರೀತಿ 2017ರಲ್ಲಿ ಆಯ್ಕೆಯಾದ 20 ಮಂದಿ ಶಾಸಕರಲ್ಲಿ 11 ಮಂದಿ ಪಕ್ಷವನ್ನು ತೊರೆದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.ಆಮ್ ಆದ್ಮಿ ಪಕ್ಷ ನಿಧಾನಕ್ಕೆ ಕಣ್ಮರೆಯಾಗುತ್ತಿರುವುದರ ಸಂಕೇತವಾಗಿದೆ ಎಂದು ಚನ್ನಿ ಆರೋಪಿಸಿದ್ದಾರೆ. ರಾಜ್ಯದ ಬಗ್ಗೆ ಕೇಜ್ರಿವಾಲ್ ಗೆ ಯಾವುದೇ ತಿಳಿವಳಿಕೆ ಇಲ್ಲ. ಪಂಜಾಬ್ ನ ಪ್ರತಿಯೊಬ್ಬ ಯುವಕನು ತಮ್ಮ ಮನೆಯನ್ನು ನಿರ್ವಹಿಸಲು ವಿವಿಧ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದು ಚನ್ನಿ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕ- ಮಹಾರಾಷ್ಟ್ರದ ನಡುವೆ ಸಂಘರ್ಷ ಮಾಡುವ ಸಂಚು ಮಾಡಲಾಗುತ್ತಿದೆ:ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ.ರವಿ

Sat Dec 18 , 2021
ಕರ್ನಾಟಕ- ಮಹಾರಾಷ್ಟ್ರದ ನಡುವೆ ಸಂಘರ್ಷ ಮಾಡುವ ಸಂಚು ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ಸಂಘರ್ಷ ಮಾಡುವ ಉದ್ದೇಶದಿಂದ, ಅರಾಜಕತೆವಾದಿಗಳು ಸೃಷ್ಟಿ ಮಾಡಿರುವ ಸಾಧ್ಯತೆಯಿದೆ. ಅರಾಜಕತವಾದಿಗಳ ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.ಸುದ್ದಿಗಾರರೊದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರ ಪುಂಡಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ. ಕೊಲ್ಲಾಪುರದಲ್ಲಿ ಕನ್ನಡ ಭಾವುಟ ಸುಟ್ಟರು, ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? […]

Advertisement

Wordpress Social Share Plugin powered by Ultimatelysocial