ಪಾವಗಡದಲ್ಲಿ ಬಸ್​ ಅಪಘಾತ: ಕಂಬನಿ ಮಿಡಿಯುತ್ತಲೇ ಹೆಚ್ಚಿನ ಪರಿಹಾರ ಕೊಡುವಂತೆ ಆಗ್ರಹಿಸಿದ ಎಚ್​ಡಿಕೆ

ಬೆಂಗಳೂರು: ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಪ್ರಯಾಣಿಕರು ಸಾವನ್ನಪ್ಪಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದ್ದು, ಬಸ್ಸಿನ ಟಾಪ್ ಮೇಲೆಯೇ 40ಕ್ಕೂ ಹೆಚ್ಚು ಪ್ರಯಾಣಿಕರು ಕೂತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

 

ಇದು ಸಾರಿಗೆ ಇಲಾಖೆ ನಿರ್ಲಕ್ಷ್ಯದ ಪರಮಾವಧಿ. ಈ ಬಗ್ಗೆ ಸರ್ಕಾರ ಕಠಿಣ ಕ್ರಮ ವಹಿಸಬೇಕು. ಕರ್ತವ್ಯ ಲೋಪ ಎಸಗಿರುವ ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ದುರಂತದಲ್ಲಿ ಜೀವ ಕಳೆದುಕೊಂಡ ಎಲ್ಲ ಅಮೂಲ್ಯ ಜೀವಗಳಿಗೆ ನನ್ನ ಶ್ರದ್ಧಾಂಜಲಿ ಹಾಗೂ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸರಣಿ ಟ್ವೀಟ್​ ಮೂಲಕ ಎಚ್​ಡಿಕೆ ಸಂತಾಪ ಸೂಚಿಸಿದ್ದಾರೆ. ಜತೆಗೆ ಚನ್ನಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಎಚ್​ಡಿಕೆ, ಪಾವಗಡ ಅತ್ಯಂತ ಬರಗಾಲ ಇರುವ ತಾಲೂಕು. ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ನೀಡಬೇಕಾದದ್ದು ರಾಜ್ಯ ಸರ್ಕಾರದ ಕರ್ತವ್ಯ. ಸಾರಿಗೆ ಸಚಿವರು ಹಾಗೂ ಸರ್ಕಾರ ಕೂಡಲೇ ಮಾಹಿತಿ ಪಡೆದು ಪರಿಹಾರ ನೀಡುವ ಕಾರ್ಯವಾಗಬೇಕು ಎಂದು ಆಗ್ರಹಿಸಿದ್ದಾರೆ. ಬಸ್ ಅವಘಡದಲ್ಲಿ ಯಾರ ತಪ್ಪಿದೆ? ಎಂದು ಪರಿಶೀಲನೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನವಾಬ್ ಮಲಿಕ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಬಿಜೆಪಿ ಒತ್ತಾಯಿಸುತ್ತಲೇ ಇದೆ!

Sat Mar 19 , 2022
ಮಹಾ ವಿಕಾಸ್ ಅಘಾಡಿ ಅವರು ಹಿರಿಯ ಸಚಿವ ನವಾಬ್ ಮಲಿಕ್ ಅವರ ಖಾತೆಗಳನ್ನು ಕೈಬಿಟ್ಟಿದ್ದರೂ ಸಹ, ಪ್ರತಿಪಕ್ಷ ಬಿಜೆಪಿ ಶನಿವಾರ ಎನ್‌ಸಿಪಿ ನಾಯಕನ ಸಚಿವ ಸಂಪುಟದಿಂದ ರಾಜೀನಾಮೆ ಬೇಡಿಕೆಯನ್ನು ಮುಂದುವರಿಸುತ್ತದೆ ಎಂದು ಸ್ಪಷ್ಟಪಡಿಸಿದೆ. ಮಾಫಿಯಾ ಡಾನ್ ಮತ್ತು ಭಯೋತ್ಪಾದಕ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಜನರೊಂದಿಗೆ ಆಸ್ತಿ ವ್ಯವಹಾರಗಳನ್ನು ಒಳಗೊಂಡಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಲಿಕ್ (62) ಅವರನ್ನು ಫೆಬ್ರವರಿ 23 ರಂದು ಬಂಧಿಸಲಾಯಿತು ಮತ್ತು ಪ್ರಸ್ತುತ ಅವರನ್ನು ನ್ಯಾಯಾಂಗ […]

Advertisement

Wordpress Social Share Plugin powered by Ultimatelysocial