ಜನರಿಗೆ ನ್ಯಾಯ ಕೊಡದ ಜೆಡಿಎಸ್-ಕಾಂಗ್ರೆಸ್

ಕರ್ನಾಟಕದೆಲ್ಲೆಡೆ ಬಿಜೆಪಿ ಗಾಳಿ ಬೀಸುತ್ತಿದೆ. 2023ರಲ್ಲಿ ಅದು ಸುನಾಮಿಯಾಗಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಮಂಡ್ಯದ ಎಂ.ಸಿ. ರಸ್ತೆ, ಪ್ರವಾಸಿ ಮಂದಿರ ಹತ್ತಿರದ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಬಿಜೆಪಿ ‘ಜನಸಂಕಲ್ಪ ಸಮಾವೇಶ’ದಲ್ಲಿ ಮಾತನಾಡಿದರು.ಮೋದಿ ಅವರ ನೇತೃತ್ವದಲ್ಲಿ ಭಾರತವು ವಿಶ್ವಮಾನ್ಯ ರಾಷ್ಟ್ರವಾಗಿದೆ. ಭಾರತದ ಕಾಶ್ಮೀರದ ಸಮಸ್ಯೆ, ನಕ್ಸಲೈಟ್ ಸಮಸ್ಯೆ ಸೇರಿ ಎಲ್ಲ ಸಮಸ್ಯೆಗಳನ್ನೂ ಅಮಿತ್ ಶಾ ಅವರು ಬಗೆಹರಿಸಿದ್ದಾರೆ. ಅಮಿತ್ ಶಾ ಅವರ ನೇತೃತ್ವದಲ್ಲಿ ಚುನಾವಣಾ ತಂತ್ರಗಾರಿಕೆಗೆ ಸದಾ ಯಶಸ್ಸು ಸಿಕ್ಕಿದೆ. 2023ರ ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ.ಕಾಂಗ್ರೆಸ್- ಜೆಡಿಎಸ್ ಈ ಭಾಗಕ್ಕೆ ನ್ಯಾಯ ಕೊಟ್ಟಿಲ್ಲ. ಜನರು ಈ ಪಕ್ಷಗಳ ಬಗ್ಗೆ ಬೇಸತ್ತಿದ್ದಾರೆ. ಈ ಬಾರಿ ಮಂಡ್ಯದಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಪಡೆಯಲಿದೆ. ಈ ಭಾಗದ ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ ಕಾಯಕಲ್ಪ ನೀಡಲಿದೆ. ಮೈಶುಗರ್ ಕಾರ್ಖಾನೆಯನ್ನು ಸರ್ಕಾರವೇ ಮತ್ತೆ ಪ್ರಾರಂಭಿಸಿದೆ. ರೈತರು, ಕಬ್ಬು ಬೆಳೆಗಾರರಿಗೆ ಆತ್ಮವಿಶ್ವಾಸ ತುಂಬಿದ್ದೇವೆ. ಕಾರ್ಖಾನೆಯಲ್ಲಿ ಮುಂದೆ ಎಥೆನಾಲ್ ತೆಗೆಯಲಿದ್ದೇವೆ.ಎಥೆನಾಲ್ ಇಲ್ಲದ ಕಾರ್ಖಾನೆಗಳಲ್ಲೂ ಕಬ್ಬು ಪ್ರತಿ ಟನ್‍ಗೆ 100 ರೂ. ಹೆಚ್ಚಳ ಮಾಡುವ ಆದೇಶ ಹೊರಡಿಸಿದ್ದೇನೆ. ಯೋಗ್ಯ ಬೆಲೆ ಕೊಟ್ಟು ಬಂದಿದ್ದೇನೆ. ಮಾತು ಕೊಟ್ಟಂತೆ ನಡೆಯುವ ಸರಕಾರ ನಮ್ಮದು. ಇಡೀ ಕರ್ನಾಟಕದ ಅಭಿವೃದ್ಧಿ ನಮ್ಮ ಸಂಕಲ್ಪ ಎಂದು ತಿಳಿಸಿದರು.ರೈತ ವಿದ್ಯಾನಿಧಿಯಿಂದ 10 ಲಕ್ಷ ಕುಟುಂಬಗಳಿಗೆ ಪ್ರಯೋಜನವಾಗಿದೆ. ಗ್ರಾಮೀಣ ಕರಕುಶಲಕರ್ಮಿಗಳಿಗೆ ನೆರವಾಗಿದ್ದೇವೆ. ಸ್ತ್ರೀಶಕ್ತಿ ಸಂಘಗಳಿಗೆ ಸ್ವಾವಲಂಬನೆಗೆ ನೆರವು ಕೊಟ್ಟಿದ್ದೇವೆ. ಕಾಂಗ್ರೆಸ್ಸಿಗರ ಕೇವಲ ಭಾಷಣದಿಂದ ಸಾಮಾಜಿಕ ನ್ಯಾಯ ಲಭಿಸುವುದಿಲ್ಲ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಳಸಾ ಬಂಡೂರಿ ಯೋಜನೆಯ ಡಿಪಿಆರ್ ಕುರಿತ ಆದೇಶದಲ್ಲಿ ದಿನಾಂಕವೇ ಇಲ್ಲ

Sat Dec 31 , 2022
ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬಿಡುಗಡೆ ಮಾಡಿದ ಆದೇಶದಲ್ಲಿ ದಿನಾಂಕವೇ ಇಲ್ಲ…. ಹುಬ್ಬಳ್ಳಿ: ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬಿಡುಗಡೆ ಮಾಡಿದ ಆದೇಶದಲ್ಲಿ ದಿನಾಂಕವೇ […]

Advertisement

Wordpress Social Share Plugin powered by Ultimatelysocial