ಹಠ ಸಾಧಿಸಿದ ರಮೇಶ್ ಜಾರಕಿಹೊಳಿ, ಶಿವಾಜಿ ಪ್ರತಿಮೆ ಅನಾವರಣಕ್ಕೆ ಮುಹೂರ್ತ ಫಿಕ್ಸ್!

ರಾಜ್ಯ ಸರ್ಕಾರದ ವತಿಯಿಂದ ರಾಜಹಂಸಗಡ ಶಿವಾಜಿ ಪ್ರತಿಮೆ ಅನಾವರಣಕ್ಕೆ ಸಮಯ ನಿಗದಿ ಮಾಡಲಾಗಿದ್ದು ಸಿಎಂ ಬೊಮ್ಮಾಯಿ ಪ್ರತಿಮೆ ಉದ್ಘಾಟಿಸಲಿದ್ದಾರೆ. ಹೀಗಾಗಿ ಮಾ. 5ರಂದು ಮತ್ತೊಮ್ಮೆ ಕಾಂಗ್ರೆಸ್ ಕಾರ್ಯಕರ್ತರನ್ನು ಸೇರಿಸಿ ಪ್ರತಿಮೆ ಉದ್ಘಾಟನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ.

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ವಿಚಾರವಾಗಿ ಗೋಕಾಕ್ ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ  ಮತ್ತು ಬೆಳಗಾವಿ ಗ್ರಾಮಾಂತರ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ನ ಡುವೆ ಕದನ ಶುರುವಾಗಿತ್ತು. ಸದ್ಯ ರಾಜಹಂಸಗಡ ಶಿವಾಜಿ ಪ್ರತಿಮೆ ಅನಾವರಣಕ್ಕೆ ಮುಹೂರ್ತ ನಿಗದಿಯಾಗಿದೆ. ನಾಳೆ (ಮಾ.2ರಂದು) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಪ್ರತಿಮೆ ಅನಾವರಣ ಮಾಡಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೆಆರ್‌ಐಡಿಎಲ್ ಬೆಳಗಾವಿ ಸಹಯೋಗದಲ್ಲಿ ಕೋಟೆ ಅಭಿವೃದ್ಧಿ ಹಾಗೂ 43 ಅಡಿ ಎತ್ತರದ ಬೃಹತ್ ಶಿವಾಜಿ ಪ್ರತಿಮೆ ಅನಾವರಣ ಮಾಡಲಾಗುತ್ತಿದೆ. 4.5 ಕೋಟೆ ವೆಚ್ಚದಲ್ಲಿ ರಾಜಹಂಸಗಡ ಕೋಟೆಯಲ್ಲಿ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ. ಕೋಟೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಕ್ರೆಡಿಟ್ ಫೈಟ್ ನಡೆಯುತ್ತಿದ್ದು ಜಿಲ್ಲಾಡಳಿತದಿಂದಲೇ ಪ್ರತಿಮೆ ಅನಾವರಣಕ್ಕೆ ರಮೇಶ್ ಜಾರಕಿಹೊಳಿ‌ ಪಟ್ಟು ಹಿಡಿದಿದ್ದರು. ಕೆಲ ದಿನದ ಹಿಂದೆ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜಹಂಸಗಡಕ್ಕೆ ಭೇಟಿ ನೀಡಿದ್ದರು. ಭೇಟಿ ಬಳಿಕ ಸಿಎಂಗೆ ಮನವಿ ಮಾಡಿ ಸರ್ಕಾರದಿಂದ ಪ್ರತಿಮೆ ಉದ್ಘಾಟನೆ ಮಾಡುವಂತೆ ರಮೇಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದರು. ಸದ್ಯ ನಾಳೆ ಪ್ರತಿಮೆ ಅನಾವರಣಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ. ಸಿಎಂ ಬೊಮ್ಮಾಯಿ, ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ, ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಕುತೂಹಲಕ್ಕೆ ಕಾರಣವಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡೆ

ರಾಜ್ಯ ಸರ್ಕಾರದ ವತಿಯಿಂದ ರಾಜಹಂಸಗಡ ಶಿವಾಜಿ ಪ್ರತಿಮೆ ಅನಾವರಣಕ್ಕೆ ಸಮಯ ನಿಗದಿ ಮಾಡಲಾಗಿದ್ದು ಸಿಎಂ ಬೊಮ್ಮಾಯಿ ಪ್ರತಿಮೆ ಉದ್ಘಾಟಿಸಲಿದ್ದಾರೆ. ಹೀಗಾಗಿ ಮಾ. 5ರಂದು ಮತ್ತೊಮ್ಮೆ ಕಾಂಗ್ರೆಸ್ ಕಾರ್ಯಕರ್ತರನ್ನು ಸೇರಿಸಿ ಪ್ರತಿಮೆ ಉದ್ಘಾಟನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಗಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಹಲವು ಕಡೆಗಳಲ್ಲಿ ಬ್ಯಾನರ್​ಗಳು ರಾರಾಜಿಸುತ್ತಿವೆ. 20 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಮತ್ತೊಮ್ಮೆ ಅನಾವರಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಟಕ್ಕರ್ ಕೊಡಲು ತಯಾರಿ ನಡೆದಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿ ಮರಾಠ ಸಮುದಾಯದವರಿದ್ದಾರೆ. ಹೀಗಾಗಿ ಶಿವಾಜಿ ಹೆಸರಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಭರ್ಜರಿ ರಾಜಕೀಯ ನಡೆಯುತ್ತಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಹಿನ್ನಲೆ.

Wed Mar 1 , 2023
  ಸಾಸಲು ಗ್ರಾಮದಲ್ಲಿ ನೂರಾರು ಯುವಕರು ಕಾಂಗ್ರೆಸ್ ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರೂ ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಹಿನ್ನಲೆಯಲ್ಲಿ ಪ್ರತಿನಿತ್ಯವು ಒಂದಲ್ಲ ಒಂದು ಹಳ್ಳಿಯಲ್ಲಿ ಅನ್ಯ ಪಕ್ಷವನ್ನು ತೊರೆದು ಜೆಡಿಎಸ್ ಅಭ್ಯರ್ಥಿ ಎಚ್ ಟಿ ಮಂಜು ಅವರ ಪರ ಜೈಕಾರ ಮೊಳಗುತ್ತಿವೆ.ಅದರಂತೆಯೇ ಇಂದು ಸಾಸಲು ಗ್ರಾಮದಲ್ಲಿ ಸಿಂಗಮ್ಮ ದೇವಿ ಜಾತ್ರೆಯಲ್ಲಿ ಅಂಬೇಡ್ಕರ್ ಯುವಕರ ಸಂಘದ ವತಿಯಿಂದ […]

Advertisement

Wordpress Social Share Plugin powered by Ultimatelysocial