ವ್ಯಕ್ತಿ ಹತ್ಯೆ: ದಂಪತಿ ಸೆರೆ

ಬೆಂಗಳೂರು,ಜ.೮- ಕೊಲೆ ಮಾಡಿ ದ್ವಿಚಕ್ರ ವಾಹನದಲ್ಲಿ ಮೃತದೇಹವನ್ನು ಸಾಗಿಸಿ ಮೃತದೇಹವನ್ನು ನಿರ್ಜನ ಪ್ರದೇಶದ ರಸ್ತೆಯ ಬದಿ ಬಂದಿದ್ದ ಪ್ರಕರಣವನ್ನು ಬೇಧಿಸಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ದಂಪತಿ ಸೇರಿದಂತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ರೀನಾ, ಗಂಗೇಶ್ ಹಾಗೂ ಬಿಜೋಯ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ದಂಪತಿ ನಿಬಾಶೀಶ್ ಪಾಲ್ ಎಂಬಾತನನ್ನು ಕೊಲೆ ಮಾಡಿದ ನಂತರ ಹೆಣ ಸಾಗಿಸಲು ಮತ್ತೊಬ್ಬ ಆರೋಪಿ ಬಿಜೋಯ್ ನ ಸಹಾಯ ಪಡೆದಿದ್ದರು ಎನ್ನುವುದು ತನಿಖೆ ವೇಳೆ ಪತ್ತೆಯಾಗಿದೆ ಎಂದು ಡಿಸಿಪಿ ಚಂದ್ರಶೇಖರ ಬಾಬಾ ತಿಳಿಸಿದರು.
ರೀನಾ ಮತ್ತು ಗಂಗೇಶ್ ಗಂಡ ಹೆಂಡತಿಯಾಗಿದ್ದಾರೆ. ಆದರೂ ರೀನಾ ಮತ್ತು ಕೊಲೆಯಾದ ನಿಬಾಶೀಶ್ ಪಾಲ್ ಅಕ್ರಮ ಸಂಬಂಧ ಹೊಂದಿದ್ದರು. ಒಂದು ದಿನ ರೀನಾ ಪತಿ ಗಂಗೇಶ್ ಸ್ವಂತ ರಾಜ್ಯ ಉತ್ತರ ಪ್ರದೇಶಕ್ಕೆ ಹೋಗಿದ್ದ. ಈ ನಡುವೆ ರೀನಾಗೆ ನಿಬಾಶೀಶ್ ಕಿರುಕುಳ ಕೊಡಲು ಶುರು ಮಾಡಿದ್ದಾನೆ. ಹಣಕ್ಕಾಗಿ ಬೇರೆಯವರ ಜೊತೆ ಮಲಗಲು ರೀನಾಗೆ ಒತ್ತಾಯ ಮಾಡುತ್ತಿದ್ದ. ಹೀಗಾಗಿ ತನ್ನ ಪತಿ ಗಂಗೇಶ್‌ಗೆ ಕರೆ ಮಾಡಿದ ರೀನಾ, ವಾಪಸ್ ಬರುವಂತೆ ಸೂಚಿಸಿದ್ದಾಳೆ.ಪತಿಯನ್ನು ಕರೆಸಿಕೊಂಡ ರೀನಾ, ನಿಬಾಶೀಶ್ ಕಿರುಕುಳವನ್ನು ಹೇಳಿಕೊಂಡಿದ್ದಾಳೆ. ಹೀಗಾಗಿ ದಂಪತಿ ಸೇರಿಕೊಂಡು ನಿಬಾಶೀಶ್ ಕೊಲೆ ಮಾಡಲು ಸಂಚು ರೂಪಿಸುತ್ತಾರೆ. ಅದರಂತೆ ನಿಬಾಶೀಶ್‌ಗೆ ಕಂಠಪೂರ್ತಿ ಕುಡಿಸಿ ಸೀರೆಯಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಇದಕ್ಕೂ ಮುನ್ನ ಪಾಲ್‌ಗೆ ಊಟದಲ್ಲಿ ಗಾಂಜಾದ ಬೀಜವನ್ನು ಹಾಕಿ ಅಮಲು ಬರುವಂತೆ ಮಾಡಿದ್ದರು. ಅಮಲು ಬಂದ ಬಳಿಕೆ ಸೀರೆಯಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾರೆ.
ನಿಬಾಶೀಶ್ ಕೊಲೆ ನಂತರ ಹೆಣ ಸಾಗಿಸಲು ಗಂಗೇಶ್ ತನ್ನ ಸ್ನೇಹಿತ ಬಿಜೋಯ್ ಸಹಾಯ ಪಡೆದಿದ್ದಾನೆ. ಗಂಗೇಶ್ ಹಾಗೂ ಬಿಜೋಯ್ ನಿಬಾಶೀಶ್ ಮೃತದೇಹವನ್ನು ಬೈಲ್‌ನ ಮಧ್ಯ ಕೂರಿಸಿಕೊಂಡು ಒಂದು ಕಿಲೋ ಮೀಟರ್ ದೂರದವರೆಗೆ ತ್ರಿಬಲ್ ರೈಡ್ ಹೋಗಿ ರಸ್ತೆ ಬದಿ ಹೆಣ ಎಸೆದು ಬಂದಿದ್ದರು. ಬಳಿಕ ಆರೋಪಿಗಳು ಮನೆಯನ್ನೇ ಖಾಲಿ ಮಾಡಿ ಟಾಟಾ ಎಸಿ ಅಟೋದಲ್ಲಿ ಪರಾರಿಯಾಗಿದ್ದರು.
ಪ್ರಕರಣ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ನಿಬಾಶೀಶ್ ಮನೆಯ ಹತ್ತಿರದ ಸಿಸಿಟಿವಿಯನ್ನು ಪರಿಶೀಲನೆ ಮಾಡುತ್ತಾರೆ. ಈ ವೇಳೆ ದಂಪತಿ ವಾಹನದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಹೀಗಾಗಿ ಟಾಟಾ ಎಸಿ ಡ್ರೈವರ್‌ನನ್ನು ಪೊಲೀಸರು ವಿಚಾರಣೆ ಮಾಡಿದಾಗ ದಂಪತಿಯನ್ನು ಶಿಕಾರಿಪುರಕ್ಕೆ ಬಿಟ್ಟು ಬಂದಿರುದಾಗಿ ಹೇಳಿದ್ದಾನೆ. ಮಾಹಿತಿ ಆಧರಿಸಿ ಕಾರ್ಯಾಚರಣೆಗೆ ಇಳಿದ ಪೊಲೀಸರು ಶಿಕಾರಿಪುರದಲ್ಲಿ ರೀನಾ ಹಾಗೂ ಗಂಗೇಶ್‌ನನ್ನು ಬಂಧಿಸಿ ಕರೆತಂದಿದ್ದಾರೆ. ಹೆಣ ಸಾಗಿಸಲು ನೆರವಾಗಿದ್ದ ಬಿಜೋಯ್ ಕೂಡ ಬಂಧಿಸಿ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿದ್ದುಗೆ ಮನೆ ದೇವರ ಗುದ್ದು

Fri Jan 13 , 2023
ಜ.೧೩:- ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಕಡೆ ಸ್ಪರ್ಧಿಸಿದರೆ ಭವಿಷ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮನೆ ದೇವರು ಭವಿಷ್ಯ ನುಡಿದಿದೆ. ಇತ್ತಿಚೆಗಷ್ಟೇ ಕೋಲಾರದಿಂದಲೇ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಪ್ರಕಟಿಸಿದ್ದರು. ಈಗ ಅವರ ಮನೆ ದೇವರು ಎರಡೂ ಕಡೆ ಸ್ಪರ್ಧಿಸುವಂತೆ ಹೇಳಿರುವುದು ಸಿದ್ದರಾಮಯ್ಯ ಅವರನ್ನು ಮತ್ತಷ್ಟು ಗೊಂದಲಕ್ಕೆ ಸಿಲುಕಿಸಿದೆ. ಸಿದ್ದರಾಮಯ್ಯ ಒಂದೇ ಕಡೆ ನಿಂತರೆ ಬಲವಿಲ್ಲ. ಎರಡು ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಮಳವಳ್ಳಿ ತಾಲೂಕಿನ […]

Advertisement

Wordpress Social Share Plugin powered by Ultimatelysocial