ನವೆಂಬರ್​ 4ರಿಂದ ಇಂದಿನ ತನಕ ಇಂಧನ ದರ ಸ್ಥಿರವಾಗಿದೆ.

ದೇಶದ ಸರ್ಕಾರಿ ತೈಲ ಕಂಪನಿಗಳು ಇಂದು ಸೋಮವಾರ ಫೆಬ್ರವರಿ 14 ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ಪ್ರಮುಖ ನಗರಗಳಲ್ಲಿಯೂ ಸಹ ಕಳೆದ 101 ದಿನಗಳಿಂದ(ನವೆಂಬರ್​ 4ರಿಂದ ಇಂದಿನ ತನಕ) ಇಂಧನ ದರ ಸ್ಥಿರವಾಗಿದೆ.ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​- ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.ಸಾಮಾನ್ಯ ಹಣದುಬ್ಬರದ ಹಿನ್ನೆಲೆಯಿಂದಾಗಿ ಭಾರತದಲ್ಲಿ ತೈಲ ಬೆಲೆಗೆ ಇನ್ನಷ್ಟು ಉತ್ತೇಜನ ನೀಡಬಹುದು. ಅದರಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಕಾರಣ ಆಗುತ್ತದೆ. ಅಂದಹಾಗೆ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಆದರೆ ಹೊಸ ವರ್ಷದ ಶುರುವಿನಿಂದಲೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇದೆ. ಒಂದು ವರದಿಗಳ ಪ್ರಕಾರ, ಕಳೆದ ನಾಲ್ಕು ವಾರದಲ್ಲಿ ಶೇ.25ರಷ್ಟು ಹೆಚ್ಚಳವಾಗಿದೆ.ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)ಪೆಟ್ರೋಲ್ ದರ (ಪ್ರತಿ ಲೀಟರ್)ಫೆ. 14: 100.58 ರೂ.ಫೆ. 13: 100.58 ರೂ.ಫೆ. 12: 100.58 ರೂ.ಫೆ. 11: 100.58 ರೂ.ಫೆ. 10: 100.58 ರೂ.ಡೀಸೆಲ್ (ಪ್ರತಿ ಲೀಟರ್)ಫೆ. 14:85.01 ರೂ.ಫೆ. 13: 85.01 ರೂ.ಫೆ. 12: 85.01 ರೂ.ಫೆ. 11: 85.01 ರೂ.ಫೆ. 10: 85.01 ರೂ.ಫೆ. 09: 85.01 ರೂ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪುಲ್ವಾಮಾ ದಾಳಿಯ 3 ವರ್ಷಗಳು: ಭಯೋತ್ಪಾದನೆಯ ಬೆದರಿಕೆಯನ್ನು ಎತ್ತಿ ತೋರಿಸುವ ಚಲನಚಿತ್ರ ಮತ್ತು ವೆಬ್ ಸರಣಿ;

Mon Feb 14 , 2022
ಪುಲ್ವಾಮಾದಲ್ಲಿ ಹುತಾತ್ಮರಾದವರನ್ನು ಸ್ಮರಿಸುವುದಕ್ಕಾಗಿ ಈ ಸಿನಿಮಾಗಳು ಮೂರು ವರ್ಷಗಳ ಹಿಂದೆ ಇದೇ ದಿನ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ದೇಶದ ಭದ್ರತಾ ಪಡೆಗಳ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ವೀರ ಹೃದಯಿಗಳು ಹುತಾತ್ಮರಾಗಿದ್ದರು. ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಗುಂಪಿನ ಆತ್ಮಹತ್ಯಾ ಬಾಂಬರ್ ಸಿಆರ್‌ಪಿಎಫ್ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಿದ್ದು, 40 ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಹೇಡಿತನದ ಭಯೋತ್ಪಾದನಾ ದಾಳಿಯ ಹುತಾತ್ಮರನ್ನು ನಾವು […]

Advertisement

Wordpress Social Share Plugin powered by Ultimatelysocial