ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಜಾಗತಿಕವಾಗಿ ಕಚ್ಚಾತೈಲ ಬೆಲೆ!

 

ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಜಾಗತಿಕವಾಗಿ ಕಚ್ಚಾತೈಲ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಿದ್ದವು.

ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದ ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಮತ್ತೆ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದವು.

ಈ ಪರಿಷ್ಕರಣೆಯ ವೇಳೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಏರಿಕೆ ಆಗುತ್ತಿದೆ. ದೇಶದಲ್ಲಿ ಕಳೆದ 22 ದಿನಗಳಲ್ಲಿ 14 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿದೆ. ಆದರೆ ಇಂದು (ಏಪ್ರಿಲ್ 13, ಬುಧವಾರ) ಪೆಟ್ರೋಲ್‌, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ ಎಂಟು ದಿನಗಳಿಂದ ಇಂಧನ ದರ ಸ್ಥಿರವಾಗಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಬಳಿಕ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು, ಕಳೆದ ಆರು ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆಯು ಏರಿಕೆ ಕಂಡಿದೆ. ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಆಮದು ಅಗುತ್ತಿದ್ದು, ಮುಂದಿನ ದಿನಗಳಲ್ಲಿ ಇಂಧನ ದರ ಕಡಿಮೆಯಾಗುವ ಸಾಧ್ಯತೆ ಇದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಏಳು ದಿನ ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.

ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಏ.13: 111.09 ರೂ.
ಏ.12: 111.09 ರೂ.
ಏ.11: 111.09 ರೂ.
ಏ.10: 111.09 ರೂ.
ಏ.9: 111.09 ರೂ.

ಡೀಸೆಲ್ (ಪ್ರತಿ ಲೀಟರ್)
ಏ.13: 94.79 ರೂ.
ಏ.12: 94.79 ರೂ.
ಏ.11: 94.79 ರೂ.
ಏ.10: 94.79 ರೂ.
ಏ.9: 94.79 ರೂ.

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಏ.13: 105.41 ರೂ.
ಏ.12: 105.41 ರೂ.
ಏ.11: 105.41 ರೂ.
ಏ.10: 105.41 ರೂ.
ಏ.9: 105.41 ರೂ.

ಡೀಸೆಲ್ (ಪ್ರತಿ ಲೀಟರ್)
ಏ.13: 96.67 ರೂ.
ಏ.12: 96.67 ರೂ.
ಏ.11: 96.67 ರೂ.
ಏ.10: 96.67 ರೂ.
ಏ.9: 96.67 ರೂ.

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಏ.13: 120.51 ರೂ.
ಏ.12: 120.51 ರೂ.
ಏ.11: 120.51 ರೂ.
ಏ.10: 120.51 ರೂ.
ಏ.9: 120.51 ರೂ.

ಡೀಸೆಲ್ (ಪ್ರತಿ ಲೀಟರ್)
ಏ.13: 104.77 ರೂ.
ಏ.12: 104.77 ರೂ.
ಏ.11: 104.77 ರೂ.
ಏ.10: 104.77 ರೂ.
ಏ.9: 104.77 ರೂ.

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಏ.13: 110.85 ರೂ.
ಏ.12: 110.85 ರೂ.
ಏ.11: 110.85 ರೂ.
ಏ.10: 110.85 ರೂ.
ಏ.9: 110.85 ರೂ.

ಡೀಸೆಲ್ (ಪ್ರತಿ ಲೀಟರ್)
ಏ.13: 100.94 ರೂ.
ಏ.12: 100.94 ರೂ.
ಏ.11: 100.94 ರೂ.
ಏ.10: 100.94 ರೂ.
ಏ.9: 100.94 ರೂ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಬುಧವಾರ, ಏಪ್ರಿಲ್ 13) ಕೂಡ ಇಂಧನ ಏರಿಕೆ ಕಂಡಿದೆ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 104.6 ಯುಎಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಣಬೀರ್​ ಹಾಗೂ ಆಲಿಯಾ ಭಟ್​ ವಿವಾಹ ದಿನಾಂಕ ಬದಲಿಸಿದ್ದೇವೆ ಎಂದಿದ್ದ ಕುಟುಂಬ !

Wed Apr 13 , 2022
  ಮುಂಬೈ: ರಣಬೀರ್​ ಹಾಗೂ ಆಲಿಯಾ ಭಟ್​ ವಿವಾಹ ದಿನಾಂಕ ಬದಲಿಸಿದ್ದೇವೆ ಎಂದಿದ್ದ ಕುಟುಂಬ ಇದೀಗ ಕೊನೆಗೂ ದಿನಾಂಕವನ್ನು ಅಧಿಕೃತಗೊಳಿಸಿದೆ ಎನ್ನಲಾಗಿದೆ. ಏ.14ರಂದೇ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ಬುಧವಾರವ ಮಧ್ಯಾಹ್ನದಿಂದಲೇ ಮೆಹೆಂದಿ ಶಾಸ್ತ್ರ ಪ್ರಾರಂಭವಾಗಿದೆ ಎಂದು ಮೂಲಗಳು ತಿಳಿಸಿವೆ.ವಿವಾಹ ಕುರಿತು ಭಾರಿ ಸುದ್ದಿಯಾದ ಹಿನ್ನಲೆಯಲ್ಲಿ ತೀರಾ ಖಾಸಗಿಯಾಗಿಡಲು ಕೇವಲ ಕುಟುಂಬಸ್ಥರು ಹಾಗೂ ಬಾಲಿವುಡ್​ನ ಅತ್ಯಾಪ್ತರನ್ನಷ್ಟೇ ಕರೆಯಲಾಗಿದೆ ಎಂದು ತಿಳಿದುಬಂದಿದೆ. ಇದಕ್ಕಾಗಿ ರಣಬೀರ್ ಕಪೂರ್​ ಅವರ ವಾಸ್ತು ಹಾಗೂ ಕೃಷ್ಣರಾಜ್​ಕುಮಾರ್ […]

Advertisement

Wordpress Social Share Plugin powered by Ultimatelysocial