ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಆರ್ಥಿಕತೆಯನ್ನು ಗಮನಿಸಿದ ನಂತರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಮೇಲಿನ ತೆರಿಗೆಯನ್ನು ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬುಧವಾರ ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಎಂದು ಹೇಳಿದ್ದರು.

ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ನೋಡೋಣ. ನಾವು ನಮ್ಮ ಆರ್ಥಿಕತೆಯನ್ನು ಗಮನಿಸಬೇಕು. ಅದರ ಆಧಾರದ ಮೇಲೆ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತು ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮೇ 1, 2 ರಂದು ದೇವನಹಳ್ಳಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮ!

Thu Apr 28 , 2022
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಭಾಗಿ ಕೇಂದ್ರ ಸರ್ಕಾರದ ವಿರುದ್ಧ ಶಾಸಕ ನಾರಾಯಣಸ್ವಾಮಿ ವಾಗ್ದಾಳಿ ಆಂಕರ್: ಮೇ 1 ಹಾಗೂ 2 ರಂದು ದೇವನಹಳ್ಳಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಿಎಂ ಇಬ್ರಾಹಿಂ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದ್ರು.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲ್ಲೂಕಿನಲ್ಲಿ ಜೆಡಿಎಸ್ ಭವನದಲ್ಲಿ ನಡೆದ ಜನತಾ ಜಲಧಾರೆ […]

Advertisement

Wordpress Social Share Plugin powered by Ultimatelysocial