(ಫೆಬ್ರವರಿ 13) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ.

ದೇಶದ ಸರ್ಕಾರಿ ತೈಲ ಕಂಪನಿಗಳು ಇಂದು ಭಾನುವಾರ (ಫೆಬ್ರವರಿ 13) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ 100 ದಿನಗಳಿಂದ(ನವೆಂಬರ್​ 4ರಿಂದ ಇಂದಿನ ತನಕ) ಇಂಧನ ದರ ಸ್ಥಿರವಾಗಿದೆ.ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​- ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.ಸಾಮಾನ್ಯ ಹಣದುಬ್ಬರದ ಹಿನ್ನೆಲೆಯಿಂದಾಗಿ ಭಾರತದಲ್ಲಿ ತೈಲ ಬೆಲೆಗೆ ಇನ್ನಷ್ಟು ಉತ್ತೇಜನ ನೀಡಬಹುದು. ಅದರಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಕಾರಣ ಆಗುತ್ತದೆ. ಅಂದಹಾಗೆ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಆದರೆ ಹೊಸ ವರ್ಷದ ಶುರುವಿನಿಂದಲೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇದೆ. ಒಂದು ವರದಿಗಳ ಪ್ರಕಾರ, ಕಳೆದ ನಾಲ್ಕು ವಾರದಲ್ಲಿ ಶೇ.25ರಷ್ಟು ಹೆಚ್ಚಳವಾಗಿದೆ.ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ತಿಂಗಳು ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ ಶೇ 3.03ರಷ್ಟು ಏರಿಕೆಯಾಗಿ 94.44 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)ಪೆಟ್ರೋಲ್ ದರ (ಪ್ರತಿ ಲೀಟರ್)ಫೆ. 13: 100.58 ರೂ.ಫೆ. 12: 100.58 ರೂ.ಫೆ. 11: 100.58 ರೂ.ಫೆ. 10: 100.58 ರೂಫೆ. 09: 100.58 ರೂ.ಡೀಸೆಲ್ (ಪ್ರತಿ ಲೀಟರ್)ಫೆ. 13: 85.01 ರೂ.ಫೆ. 12: 85.01 ರೂ.ಫೆ. 11: 85.01 ರೂ.ಫೆ. 10: 85.01 ರೂ.ಫೆ. 09: 85.01 ರೂ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹ್ಯಾಪಿ ಕಿಸ್ ಡೇ 2022: ಶುಭಾಶಯಗಳು, SMS, WhatsApp ಫಾರ್ವರ್ಡ್‌ಗಳು, Facebook ಸ್ಥಿತಿ, ನಿಮ್ಮ ವ್ಯಾಲೆಂಟೈನ್‌ಗೆ ಕಳುಹಿಸಿ

Sun Feb 13 , 2022
    ಪ್ರೇಮಿಗಳ ದಿನವು ಕೇವಲ ಮೂಲೆಯಲ್ಲಿದೆ, ಮತ್ತು ಗಾಳಿಯಲ್ಲಿ ಉತ್ಸಾಹವು ಸ್ಪಷ್ಟವಾಗಿದೆ. ಫೆಬ್ರವರಿ 14 ರಂದು ಪ್ರೇಮಿಗಳ ದಿನದಂದು ವಿಶೇಷ ದಿನಗಳೊಂದಿಗೆ ಆಚರಣೆಗಳು ಈಗಾಗಲೇ ಪ್ರಾರಂಭವಾಗಿವೆ. ಪ್ರಪಂಚದಾದ್ಯಂತ ಜನರು ಫೆಬ್ರವರಿ 7 ರಂದು ರೋಸ್ ಡೇಯೊಂದಿಗೆ ಪ್ರೇಮಿಗಳ ದಿನಾಚರಣೆಯನ್ನು ಪ್ರಾರಂಭಿಸುತ್ತಾರೆ. ಇದರ ನಂತರ ಪ್ರಪೋಸ್ ಡೇ, ಚಾಕೊಲೇಟ್ ಡೇ, ಟೆಡ್ಡಿ ಡೇ, ಪ್ರಾಮಿಸ್ ಡೇ, ಹಗ್ ಡೇ. ಮತ್ತು ಅಂತಿಮವಾಗಿ, ಫೆಬ್ರವರಿ 13 ರಂದು ಕಿಸ್ ಡೇ. ಈ […]

Advertisement

Wordpress Social Share Plugin powered by Ultimatelysocial