PETROL RATE:2022ಜನವರಿ 29ರ ಇಂಧನ ದರ;

ನವದೆಹಲಿ, ಜನವರಿ 29: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಜನವರಿ 29, ಶನಿವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಆಗುತ್ತಿದ್ದರೂ, ಭಾರತದಲ್ಲಿ ಇಂಧನ ದರ ಸ್ಥಿರತೆ ಕಾಪಾಡಿಕೊಂಡಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ, ಜಾಗತಿಕ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 88 ಡಾಲರ್ ಆಗಿದೆ. ಬ್ರೆಂಟ್ ಕಚ್ಚಾ ಫ್ಯೂಚರ್ಸ್ 87 ಸೆಂಟ್ಸ್​ ಅಥವಾ ಶೇ.1ರಷ್ಟು ಮೇಲೇರಿ, 0543 GMTಯಲ್ಲಿ ಪ್ರತಿ ಬ್ಯಾರೆಲ್​ಗೆ 88.38 ಡಾಲರ್​ನಂತೆ ವ್ಯವಹಾರ ನಡೆಸುತ್ತಿತ್ತು. ಈ ಹಿಂದಿನ ಸೆಷನ್​ಗೆ ಹೋಲಿಸಿದರೆ ಶೇ.1.2ರಷ್ಟು ಹೆಚ್ಚಳ ಆಗಿತ್ತು.

ಸಾಮಾನ್ಯ ಹಣದುಬ್ಬರದ ಹಿನ್ನೆಲೆಯಿಂದಾಗಿ ಭಾರತದಲ್ಲಿ ತೈಲ ಬೆಲೆಗೆ ಇನ್ನಷ್ಟು ಉತ್ತೇಜನ ನೀಡಬಹುದು. ಅದರಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಕಾರಣ ಆಗುತ್ತದೆ. ಅಂದಹಾಗೆ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಆದರೆ ಹೊಸ ವರ್ಷದ ಶುರುವಿನಿಂದಲೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇದೆ. ಒಂದು ವರದಿಗಳ ಪ್ರಕಾರ, ಕಳೆದ ನಾಲ್ಕು ವಾರದಲ್ಲಿ ಶೇ.25ರಷ್ಟು ಹೆಚ್ಚಳವಾಗಿದೆ.

ಜಾರ್ಖಂಡ್​ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸುವುದಾಗಿ ಘೋಷಿಸಿದ್ದು, ಇದು ಜನವರಿ 26ರಿಂದ ಜಾರಿಗೆ ಬಂದಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

Xiaomi 2 ವರ್ಷಗಳಲ್ಲಿ ಭಾರತದಲ್ಲಿ 8% ಮಾರುಕಟ್ಟೆ ಪಾಲನ್ನು ಕಳೆದುಕೊಂಡಿದೆ

Sat Jan 29 , 2022
ಗ್ಲೋಬಲ್ ಸ್ಮಾರ್ಟ್‌ಫೋನ್ ಬ್ರ್ಯಾಂಡ್ Xiaomi ಭಾರತದಲ್ಲಿ ಸತತ 17 ತ್ರೈಮಾಸಿಕಗಳಲ್ಲಿ ಸ್ಮಾರ್ಟ್‌ಫೋನ್ ಸಾಗಣೆಯಲ್ಲಿ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ, ಭಾರತದಲ್ಲಿ ಮಾರುಕಟ್ಟೆ ಪಾಲನ್ನು ವೇಗವಾಗಿ ಕಳೆದುಕೊಳ್ಳುತ್ತಿದೆ ಮತ್ತು Q1 2020 ರಿಂದ, ಏರುತ್ತಿರುವ ಸ್ಪರ್ಧೆ ಮತ್ತು ಪೂರೈಕೆ ಸರಪಳಿ ನಿರ್ಬಂಧಗಳ ನಡುವೆ ಇದು 8 ಶೇಕಡಾ ಮಾರುಕಟ್ಟೆ ಪಾಲನ್ನು ಕಳೆದುಕೊಂಡಿದೆ. Q1 2020 ರಲ್ಲಿ, ಕೌಂಟರ್ಪಾಯಿಂಟ್ ರಿಸರ್ಚ್ ಡೇಟಾ ಪ್ರಕಾರ, ಹೆಚ್ಚು ಸ್ಪರ್ಧಾತ್ಮಕ ಭಾರತೀಯ ಮಾರುಕಟ್ಟೆಯಲ್ಲಿ Xiaomi 29 ಪ್ರತಿಶತದಷ್ಟು ಮಾರುಕಟ್ಟೆ […]

Advertisement

Wordpress Social Share Plugin powered by Ultimatelysocial