ಇಂದು ಪೆಟ್ರೋಲ್ ದರ;

ದೇಶದ ಸರ್ಕಾರಿ ತೈಲ ಕಂಪನಿಗಳು ಇಂದು ಬುಧವಾರ (ಜನವರಿ 26) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಹೊಸ ವರ್ಷದ ದಿನದಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್​ 4ರಿಂದ ಇಂಧನ ದರ ಸ್ಥಿರವಾಗಿದೆ.

ಜಾರ್ಖಂಡ್​ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸುವುದಾಗಿ ಘೋಷಿಸಿದೆ. ಇದು ಜನವರಿ 26ರಿಂದ ಜಾರಿಗೆ ಬರಲಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ, ಜಾಗತಿಕ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 88 ಡಾಲರ್ ಆಗಿದೆ. ಬ್ರೆಂಟ್ ಕಚ್ಚಾ ಫ್ಯೂಚರ್ಸ್ 87 ಸೆಂಟ್ಸ್​ ಅಥವಾ ಶೇ.1ರಷ್ಟು ಮೇಲೇರಿ, 0543 GMTಯಲ್ಲಿ ಪ್ರತಿ ಬ್ಯಾರೆಲ್​ಗೆ 88.38 ಡಾಲರ್​ನಂತೆ ವ್ಯವಹಾರ ನಡೆಸುತ್ತಿತ್ತು. ಈ ಹಿಂದಿನ ಸೆಷನ್​ಗೆ ಹೋಲಿಸಿದರೆ ಶೇ.1.2ರಷ್ಟು ಹೆಚ್ಚಳ ಆಗಿತ್ತು.

ಸಾಮಾನ್ಯ ಹಣದುಬ್ಬರದ ಹಿನ್ನೆಲೆಯಿಂದಾಗಿ ಭಾರತದಲ್ಲಿ ತೈಲ ಬೆಲೆಗೆ ಇನ್ನಷ್ಟು ಉತ್ತೇಜನ ನೀಡಬಹುದು. ಅದರಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಕಾರಣ ಆಗುತ್ತದೆ. ಅಂದಹಾಗೆ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಆದರೆ ಹೊಸ ವರ್ಷದ ಶುರುವಿನಿಂದಲೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇದೆ. ಒಂದು ವರದಿಗಳ ಪ್ರಕಾರ, ಕಳೆದ ನಾಲ್ಕು ವಾರದಲ್ಲಿ ಶೇ.25ರಷ್ಟು ಹೆಚ್ಚಳವಾಗಿದೆ.

ಕೆಲ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ಅನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ. ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದಲ್ಲಿ CBR650R ಬಿಡುಗಡೆ ಮಾಡಿದ ಹೋಂಡಾ;

Wed Jan 26 , 2022
ತನ್ನ ಪ್ರೀಮಿಯಂ ಬೈಕ್‌ಗಳ ಬಿಗ್‌ವಿಂಗ್ ಶೋರೂಂ ಮೂಲಕ CBR300R ಬೈಕುಗಳ ಮಾರಾಟ ಆರಂಭಿಸಿರುವ ಹೋಂಡಾ, ಇದರ ಬೆನ್ನಿಗೇ 2022 ಹೋಂಡಾ CBR650R ಮಾಡೆಲ್ ‌ಅನ್ನೂ ಸಹ ಲಾಂಚ್‌ ಮಾಡಿದೆ. ಮಧ್ಯಮಗಾತ್ರದ ಸ್ಪೋರ್ಟ್ ವರ್ಗದ ಗ್ರಾಹಕರಿಗೆ ಈ ಬೈಕ್ ಅಭಿವೃದ್ಧಿ ಮಾಡಲಾಗಿದೆ. ಇದೇ ವೇಳೆ ತನ್ನ ಹೊಸ ಬೈಕ್‌ಗಳ ಲಾಂಚ್‌ ಆದ ಬೆನ್ನಿಗೇ ಅವುಗಳಿಗೆ ಬುಕಿಂಗ್ ಗವಾಕ್ಷಿಯನ್ನೂ ಹೋಂಡಾ ತೆರೆದಿದೆ. 2022 CBR650R ಬೈಕ್‌ನಲ್ಲಿ ಕಿತ್ತಳೆ ಬಣ್ಣದ ಹೊಸ ಹೈಲೈಟ್‌ಗಳು ಇದ್ದು, […]

Advertisement

Wordpress Social Share Plugin powered by Ultimatelysocial