ಟ್ರೇಲರ್ ಮೂಲಕ ಮೆಚ್ಚುಗೆ ಪಡೆದ್ದ “ಫಿಸಿಕ್ಸ್ ಟೀಚರ್”. ಮೇ 27ಕ್ಕೆ ಚಿತ್ರಮಂದಿರಕ್ಕೆ ಆಗಮನ.

ಕಿರುತೆರೆಯಲ್ಲಿ ಸುಮಾರು ವರ್ಷಗಳಿಂದ ಗುರುತಿಸಿಕೊಂಡಿರುವ ಶಶಿಕುಮಾರ್ ಹಾಗೂ ನಂದಿತಾ ಅವರ ಪುತ್ರ ಸುಮುಖ.

ಸುಮುಖ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ ” ಫಿಸಿಕ್ಸ್ ಟೀಚರ್” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಜನಮನಸೂರೆಗೊಂಡಿದೆ.‌ ಇದೇ ಇಪ್ಪತ್ತೇಳರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನಗೊಂಡು, ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.

ನಾನು ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಚಿತ್ರ ನೋಡಿದೆ. ತುಂಬಾ ಚೆನ್ನಾಗಿದೆ. ಸಾಮಾನ್ಯ ಸಿನಿಮಾ ಸೂತ್ರಗಳನ್ನು ಹೊರತುಪಡಿಸಿದ್ದ ಸಿನಿಮಾ. ಸುಮುಖ ಆಯ್ಕೆ ಮಾಡಿಕೊಂಡಿರುವ ಕಥೆ ವಿಭಿನ್ನವಾಗಿದೆ. ಮಾಮೂಲಿ ಚಿತ್ರಗಳಿಗಿಂತ ಭಿನ್ನವಾಗಿರುವ ಈ ಚಿತ್ರವನ್ನು ನೀವೆಲ್ಲಾ ನೋಡಿ ಹರಸಿ ಎಂದರು ಖ್ಯಾತ ವಿಮರ್ಶಕ ಮನು ಚಕ್ರವರ್ತಿ.

ಟ್ರೇಲರ್ ಗೆ ಸಿಕ್ಕ ಪ್ರಶಂಸೆ ಕಂಡು ಖುಷಿಯಾಗಿದೆ. ಬೇರೆಯದೇ ರೀತಿಯ ಸಿನಿಮಾ ಅಂದ ಕೂಡಲೇ ಆರ್ಟ್ ಸಿನಿಮಾ ತರಹವೂ ಅಲ್ಲ. ಸಾಕಷ್ಟು ಕಮರ್ಷಿಯಲ್ ಎಲಿಮೆಂಟ್ ಈ ಚಿತ್ರದಲ್ಲಿದೆ. ಎಲ್ಲಾ ನಟರ ಅಭಿನಯ ಚೆನ್ನಾಗಿದೆ . ಮೇ 27 ತೆರೆಗೆ ಬರುತ್ತಿದೆ. ನೋಡಿ ಹಾರೈಸಿ ಎಂದರು ನಿರ್ದೇಶಕ – ನಟ ಸುಮುಖ.

ಬಿಡುಗಡೆಗೂ ಮುನ್ನವೇ ನಮ್ಮ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಸಂತೋಷವಾಗಿದೆ. ಈಗ ಟ್ರೇಲರ್ ಬಂದಿದೆ. ಸದ್ಯ ಹಾಡೊಂದು ಸಹ ಬಿಡುಗಡೆಯಾಗಲಿದೆ. 27ರಂದು ಚಿತ್ರ ತೆರೆ ಕಾಣಲಿದೆ. ನೋಡಿ ಬೆಂಬಲ ನೀಡಿ ಎಂದರು ನಾಯಕಿ ಪ್ರೇರಣ ಕಂಬಂ.

ಸುಮುಖನನ್ನು ಹುಟ್ಟಿದ ದಿನದಿಂದ ನೋಡಿದ್ದೀನಿ. ಅವನ ಜೊತೆ ಕೆಲಸ ಮಾಡಿದ್ದು ಖುಷಿ. ಆತ ಉತ್ತಮ ನಿರ್ದೇಶಜ. ಆದರೆ ಅದಕ್ಕಿಂತ ಆತ ಉತ್ತಮ ನಟ ಎನ್ನುತ್ತೇನೆ. ಈ ಸಿನಿಮಾ ಜನರ ಮೆಚ್ಚುಗೆ ಪಡೆಯಲಿ ಎಂದರು ನಟ ರಾಜೇಶ್ ನಟರಂಗ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

*"ಬೆಲ್ ಬಟನ್" ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ನವರಸ ನಾಯಕ !

Wed May 11 , 2022
ಜಗ್ಗೇಶ್ ರವವರು ಚಿತ್ರಕ್ಕೆ ಚಾಲನೆ ನೀಡಿದರು.ನಟ ಪ್ರತಾಪ್ ರೆಡ್ಡಿ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು, ತಾಯಿ ಬಂಡೆ ಮಹಾ ಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬೆಲ್ ಬಟನ್ ಚಿತ್ರದ ಮಹೂರ್ತ ಇತ್ತೀಚಿಗೆ ನಡೆಯಿತುಕನ್ನಡದ ಖ್ಯಾತ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ, ಹಾಗು ರಂಗಭೂಮಿ ನಟರಾಗಿ ಅನುಭವವಿರುವ ಲ‌ಕ್ಷ್ಮಿನರಸಿಂಹ. ಎಂ “ಬೆಲ್ ಬಟನ್” ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಲವ್ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, […]

Advertisement

Wordpress Social Share Plugin powered by Ultimatelysocial