ಸಾಮಾಜಿಕ ಸುಧಾರಣೆ, ಜೀವನ ಗುಣಮಟ್ಟ ಮತ್ತು ಸಾಮರಸ್ಯದ ಸಮಾಜವನ್ನು ಆನಂದಿಸುತ್ತಾರೆ.

ಬೆಂಗಳೂರು: ‘ಉತ್ತರ ಪ್ರದೇಶವು ಕೇರಳವಾಗಿ ಬದಲಾದರೆ ಅಲ್ಲಿನ ಜನರು ಉತ್ತಮ ಶಿಕ್ಷಣ, ಆರೋಗ್ಯ ಸೇವೆ, ಸಾಮಾಜಿಕ ಸುಧಾರಣೆ, ಜೀವನ ಗುಣಮಟ್ಟ ಮತ್ತು ಸಾಮರಸ್ಯದ ಸಮಾಜವನ್ನು ಆನಂದಿಸುತ್ತಾರೆ. ಜಾತಿ, ಧರ್ಮದ ಹೆಸರಿನಲ್ಲಿ ಕೊಲೆಗಳು ಸಂಭವಿಸುವುದಿಲ್ಲ.ಉತ್ತರ ಪ್ರದೇಶದ ಜನತೆಗೆ ಬೇಕಿರುವುದೇ ಇದು’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.’ಮತದಾರರು ತಪ್ಪು ಮಾಡಿದರೆ, ಉತ್ತರ ಪ್ರದೇಶವು ಮತ್ತೊಂದು ಕಾಶ್ಮೀರ, ಕೇರಳ ಅಥವಾ ಪಶ್ಚಿಮ ಬಂಗಾಳವಾಗಿ ಬದಲಾಗುತ್ತದೆ’ ಎಂಬ ಸಿಎಂ ಯೋಗಿ ಆದಿತ್ಯನಾಥ ಅವರ ಹೇಳಿಕೆಗೆ ಸಂಬಂಧಿಸಿ ಪಿಣರಾಯಿ ವಿಜಯನ್‌ ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡ ಹಿನ್ನೆಲೆ ಮತದಾರರನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೊವನ್ನು ಯೋಗಿ ಆದಿತ್ಯನಾಥ ಅವರು ಹಂಚಿಕೊಂಡಿದ್ದರು. ‘ಮತದಾರರು ಮೈಮರೆತರೆ 5 ವರ್ಷಗಳ ದುಡಿಮೆ ವ್ಯರ್ಥವಾಗುತ್ತದೆ. ಉತ್ತರ ಪ್ರದೇಶವು ಕಾಶ್ಮೀರ, ಕೇರಳ ಅಥವಾ ಬಂಗಾಳವಾಗಿ ಬದಲಾಗಲು ಹೆಚ್ಚು ಸಮಯ ಬೇಕಾಗುವುದಿಲ್ಲ’ ಎಂದು ಎಚ್ಚರಿಕೆ ನೀಡಿರುವುದು ವಿಡಿಯೊದಲ್ಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಹಿಜಾಬ್‌ ಕರ್ನಾಟಕ ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆ ಮಾಡಲಾಗಿದೆ.

Thu Feb 10 , 2022
ಬೆಂಗಳೂರು, ಫೆಬ್ರವರಿ 10: ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿದೆ.ಈ ಕುರಿತು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆ ಮಾಡಲಾಗಿದೆ.ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು.ಈಗ ಅರ್ಜಿಗಳ ವಿಚಾರಣೆಗೆ ವಿಶೇಷ […]

Advertisement

Wordpress Social Share Plugin powered by Ultimatelysocial