35 ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ಮತ್ತೊಂದು ವಿಮಾನ.

ಅಜಾಗರೂಕತೆಯಿಂದ ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರುತ್ತಿರುವ ಘಟನೆಗಳು ಹೆಚ್ಚುತ್ತಿದ್ದು, ಅಮೃತಸರ-ಸಿಂಗಪುರ ಮಾರ್ಗದ ಸ್ಕೂಟ್ ಏರ್‌ಲೈನ್ಸ್ ವಿಮಾನವು ಬುಧವಾರ 35 ಪ್ರಯಾಣಿಕರನ್ನು ಬಿಟ್ಟು ಟೇಕಾಫ್‌ ಆಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಅಮೃತಸರದಿಂದ ಸಿಂಗಪುರ ಮಾರ್ಗದ ಸ್ಕೂಟ್ ಏರ್‌ಲೈನ್ಸ್ ವಿಮಾನವು ಬುಧವಾರ 35 ಪ್ರಯಾಣಿಕರನ್ನು ಬಿಟ್ಟು ಹೊರಟಿದೆ ಎಂದು ವರದಿಯಾಗಿದ್ದು, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ವೈಫಲ್ಯದ ಬಗ್ಗೆ ತನಿಖೆಗೆ ಆದೇಶಿಸಿದೆ.

ಅಮೃತಸರ ವಿಮಾನ ನಿಲ್ದಾಣದಿಂದ ವಿಮಾನವು ಬುಧವಾರ ರಾತ್ರಿ 7.55 ಕ್ಕೆ ಹೊರಡಬೇಕಿತ್ತು, ಆದರೆ 35 ಪ್ರಯಾಣಿಕರನ್ನು ಬಿಟ್ಟು 3 ಗಂಟೆಗೆ ಟೇಕ್ ಆಫ್ ಆಗಿತ್ತು. ಘಟನೆಗೆ ಕಾರಣ ತಿಳಿದುಬಂದಿಲ್ಲ.

ಘಟನೆಯಿಂದ ಕೆರಳಿದ ಪ್ರಯಾಣಿಕರು ಅಮೃತಸರ ವಿಮಾನ ನಿಲ್ದಾಣದಲ್ಲಿಯೇ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ದಾಖಲಿಸಿದ್ದಾರೆ.

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಗೋ ಫಸ್ಟ್ ವಿಮಾನವು 55 ಪ್ರಯಾಣಿಕರನ್ನು ಬಿಟ್ಟು ಹಾರಿದ್ದು ಇತ್ತೀಚೆಗೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟ್ರಕ್ ಚಾಲಕರಿಗೆ ನಿರ್ದಿಷ್ಟ ಕಾಲಾವಧಿ ದುಡಿಮೆಯನ್ನು ನಿಗದಿಗೊಳಿಸುವ ಕಾನೂನು ಜಾರಿ.

Thu Jan 19 , 2023
ಹೊಸದಿಲ್ಲಿ: ಟ್ರಕ್ ಚಾಲಕರಿಗಾಗಿ  ನಿರ್ದಿಷ್ಟ ಕಾಲಾವಧಿ ದುಡಿಮೆಯನ್ನು ನಿಗದಿಗೊಳಿಸುವ ಕಾನೂನನ್ನು ಜಾರಿಗೆ ತರಲಾಗುವುದು ಮತ್ತು 2025ರೊಳಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೇ. 50ರಷ್ಟು ತಗ್ಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ಎಂದು   ವರದಿ ಮಾಡಿದೆ. ಸುರಕ್ಷತಾ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿದ್ದ ‘ರಸ್ತೆ ಸುರಕ್ಷತಾ ಅಭಿಯಾನ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಸ್ತೆ ಸಾರಿಗೆ ಸಚಿವಾಲಯವು ರಸ್ತೆ ಅಫಘಾತಗಳಲ್ಲಿನ ಸಾವು ಹಾಗೂ […]

Advertisement

Wordpress Social Share Plugin powered by Ultimatelysocial