ಚೀನೀಯರ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಮೌನವು, ಸತ್ಯವಂತನೆಂಬ ಅವರ ಖ್ಯಾತಿಗೆ ಧಕ್ಕೆ ತರುತ್ತದೆ:ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ

ಚೀನೀಯರ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ಮೌನವು, ಸತ್ಯವಂತನೆಂಬ ಅವರ ಖ್ಯಾತಿಗೆ ಧಕ್ಕೆ ತರುತ್ತದೆ ಎಂದು ರಾಜ್ಯಸಭೆಯ ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.ಈ ಬಗ್ಗೆ ಸಾಮಾಜಿಕ ಮಾಧ್ಯಮ ‘ಕೂ’ನಲ್ಲಿ ಅವರು ಸೋಮವಾರ ರಾತ್ರಿ ಪೋಸ್ಟ್‌ ಪ್ರಕಟಿಸಿದ್ದಾರೆ.ಯಾರೂ ಬಂದಿಲ್ಲ  ಎಂದ ನಂತರವೂ, ಗಡಿ ನಿಯಂತ್ರಣಾ ರೇಖೆಯ ಬಳಿ ಹಲವು ಪ್ರದೇಶಗಳನ್ನು ಚೀನಾ ವಶಕ್ಕೆ ಪಡೆದ ಬಳಿಕವೂ ಪ್ರಧಾನಿ ನರೇಂದ್ರ ಮೋದಿ ಅವರು ಲಡಾಖ್ ಮತ್ತು ಅರುಣಾಚಲದಲ್ಲಿನ ಆತಿಕ್ರಮಣದ ಬಗ್ಗೆ ಮೌನವಾಗಿದ್ದರೆ, ಅದು ಅವರ ಸತ್ಯವಂತನೆಂಬ ಖ್ಯಾತಿಗೆ ಧಕ್ಕೆ ತರುತ್ತದೆ,’ ಎಂದು ಸುಬ್ರಮಣಿಯನ್‌ ಸ್ವಾಮಿ ವ್ಯಂಗ್ಯವಾಡಿದ್ದಾರೆ.ಅಲ್ಲದೆ, ಈ ವಿಚಾರದಲ್ಲಿನ ಮೋದಿ ಮೌನ ಬಿಜೆಪಿಯನ್ನು ಅಂಧಕಾರಕ್ಕೆ ತಳ್ಳುತ್ತದೆ. ವಾಸ್ತವ ಪರೀಕ್ಷಿಸಲು ಇದು ಸಕಾಲ ಎಂದು ಸುಬ್ರಮಣಿಯನ್ ಸ್ವಾಮಿ ‘ಕೂ’ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಹೆಚ್ಚು ಕಾಲ ಬದುಕಿದ್ದರೆ ಗೋವಾ ಪೋರ್ಚುಗೀಸ್ ಆಳ್ವಿಕೆಯಿಂದ ಮುಕ್ತವಾಗುತ್ತಿರಲಿಲ್ಲ:ಪ್ರಧಾನಿ ಮೋದಿ

Tue Dec 21 , 2021
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಹೆಚ್ಚು ಕಾಲ ಬದುಕಿದ್ದರೆ ಗೋವಾ ಪೋರ್ಚುಗೀಸ್ ಆಳ್ವಿಕೆಯಿಂದ ಮುಕ್ತವಾಗುತ್ತಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 1947ರಲ್ಲಿ ನಮಗೆ ಸ್ವಾತಂತ್ರ್ಯ ಸಿಕ್ಕರೂ ಗೋವಾ ಬಹುಕಾಲ ಪೋರ್ಚುಗೀಸರ ಆಳ್ವಿಕೆಯಲ್ಲಿತ್ತು.ಭಾರತೀಯ ಸೇನೆಯು ಆಪರೇಷನ್ ವಿಜಯ್ ಅನ್ನು ಪ್ರಾರಂಭಿಸಿತು ಮತ್ತು ಡಿಸೆಂಬರ್ 19, 1961 ರಂದು ವಸಾಹತುಶಾಹಿ ಆಳ್ವಿಕೆಯಿಂದ ಗೋವಾವನ್ನು ಮುಕ್ತಗೊಳಿಸಿತು. ಗೋವಾ ಭಾರತದ ಭಾಗವಾಯಿತು.ನಡೆದ 60ನೇ ಗೋವಾ ವಿಮೋಚನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೋದಿ, ‘ಸರ್ದಾರ್ […]

Advertisement

Wordpress Social Share Plugin powered by Ultimatelysocial