ಕರ್ನಾಟಕ ವಿಧಾನಸಭೆ ಚುನಾವಣೆ.

 

ಬೆಂಗಳೂರು, ಜನವರಿ 11: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈಗಾಗಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುವಲ್ಲಿ ನಿರತವಾಗಿವೆ. ಜೆಡಿಎಸ್‌ 93 ಅಭ್ಯರ್ಥಿಗಳನ್ನು ಘೋಷಿಸಿದೆ. ಸಂಕ್ರಾಂತಿ ಸಮಯದಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಹೊರತರಲು ಸಿದ್ದತೆ ಮಾಡಿಕೊಂಡಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಫೆಬ್ರವರಿ ಅಂತ್ಯದಲ್ಲಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಬಹುದು. ಆ ಹೊತ್ತಿಗೆ ಕೇಂದ್ರ ಮತ್ತು ರಾಜ್ಯ ಬಜೆಟ್‌ಗಳು ಹೊರಬಂದಿರುತ್ತವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ಕಾರ್ಯತಂತ್ರವೇನು ಎಂಬುದರ ಬಗ್ಗೆ ‘ಡೆಕ್ಕನ್‌ ಹೆರಾಲ್ಡ್‌’ ವರದಿ ಮಾಡಿದೆ ಬಜೆಟ್‌ ತಯಾರಿಕೆಯಲ್ಲಿ ನಿರತರಾಗಿರು ಬೊಮ್ಮಾಯಿ ಬಿಜೆಪಿಯ ಹಿರಿಯ ಮುಖಂಡರ ಪ್ರಕಾರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಕ್ರಾಂತಿ ನಂತರ ಬಜೆಟ್ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಮತದಾರರನ್ನು ಓಲೈಸಲು ಇದು ಅಂತಿಮ ಬಜೆಟ್ ಆಗಿರುವುದರಿಂದ ಪಕ್ಷದ ಸಾಧನೆಯನ್ನು ಎತ್ತಿ ತೋರಿಸುವುದು ಬಹಳ ಮುಖ್ಯ. ಈ ವರ್ಷ ಅಧಿಕಾರವನ್ನು ಉಳಿಸಿಕೊಂಡರೆ ಪಕ್ಷವು ಜನರಿಗೆ ಏನು ಮಾಡಲಿದೆ ಎಂಬುದನ್ನು ಜನರಿಗೆ ತಿಳಿಸಲು ಬೊಮ್ಮಾಯಿ ಕಸರತ್ತು ನಡೆಸಿದ್ದಾರೆ. ಬಿಜೆಪಿ ಹೈಕಮಾಂಡ್‌ ಶಾಸಕರಿಗೆ ಹೇಳಿದ್ದೇನು? ಬಿಜೆಪಿ ಹಲವಾರು ಅಭ್ಯರ್ಥಿಗಳಿಗೆ ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಮೌಖಿಕವಾಗಿ ನಿರ್ದೇಶಿಸಿದೆ. ಮೂಲಗಳ ಪ್ರಕಾರ, ಸುಮಾರು 80-85 ಶೇಕಡಾ ಹಾಲಿ ಶಾಸಕರು ತಮ್ಮ ಟಿಕೆಟ್‌ಗಳನ್ನು ಮರಳಿ ಗಿಟ್ಟಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ‘ರಾಜಾಜಿನಗರ ಶಾಸಕ ಮತ್ತು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು ತಮ್ಮ ಕ್ಷೇತ್ರದಲ್ಲಿ ಒಂದು ಸುತ್ತಿನ ಪ್ರಚಾರವನ್ನು ಪೂರ್ಣಗೊಳಿಸಿದ್ದಾರೆ. ಪ್ರತ್ಯೇಕವಾಗಿ 10,000 ಮನೆಗಳನ್ನು ತಲುಪಿದ್ದಾರೆ. ಅಲ್ಲದೆ, ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಸತಿ ಸಚಿವ ವಿ. ಸೋಮಣ್ಣ ಅವರ ನಿವಾಸಕ್ಕೆ ತಡರಾತ್ರಿ ಭೇಟಿ ನೀಡಿದ್ದಾರೆ. ಪಕ್ಷವು ಗೆಲ್ಲುವ ಅಭ್ಯರ್ಥಿಗಳನ್ನು ಉಳಿಸಿಕೊಳ್ಳುವುದರ ಪರವಾಗಿದೆ. ಅಂತಹ ಯಾವುದೇ ಅಭ್ಯರ್ಥಿಗಳು ಪಕ್ಷ ತೊರೆಯಲು ಅವಕಾಶ ನೀಡುವುದಿಲ್ಲ ಎಂಬುದನ್ನು ಈ ಭೇಟಿ ಸೂಚಿಸುತ್ತದೆ’ ಎಂದು ಮೂಲವು ವಿವರಿಸಿದೆ.

 

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತುಲಾ ರಾಶಿ ಭವಿಷ್ಯ (Wednesday, January 11, 2023)

Wed Jan 11 , 2023
ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ- ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ ಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ ಮೊದಲು ಸತ್ಯಾಸತ್ಯತೆಗಳನ್ನು ಪರಿಶೀಲಿಸಿ. ಪ್ರತಿಯೊಂದು ವಿಷಯದಲ್ಲಿ ಪ್ರೀತಿಯನ್ನು ತೋರಿಸುವುದು ಸರಿಯಿಲ್ಲ. ಇದು ನಿಮ್ಮ ಸಂಬಂಧವನ್ನು ಸುಧಾರಿಸುವ ಬದಲು ಹಾಳುಮಾಡುತ್ತದೆ. ನಿಮ್ಮ ಬಾಸ್ ಗಮನಿಸುವ ಮೊದಲೇ ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಿ. ನೀವು ಸ್ನೇಹಿತರೊಬ್ಬನೊಂದಿಗೆ ಇಂದು ಸಮಯವನ್ನು ಕಳೆಯಬಹುದು […]

Advertisement

Wordpress Social Share Plugin powered by Ultimatelysocial