ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದು ಆನ್‌ಲೈನ್ ಜೂಜಾಟವನ್ನು ರಾಜ್ಯ ಸರ್ಕಾರ ನಿಷೇಧಿಸಿತ್ತು.

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್​ ರದ್ದು ಮಾಡಿದೆ.ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದು ಆನ್‌ಲೈನ್ ಜೂಜಾಟವನ್ನು ರಾಜ್ಯ ಸರ್ಕಾರ ನಿಷೇಧಿಸಿತ್ತು.ಇದನ್ನು ಪ್ರಶ್ನಿಸಿ ಆನ್‌ಲೈನ್ ಗೇಮಿಂಗ್ ಕಂಪನಿಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುತಾರಾಜ್ ಅವಸ್ಥಿ ಮತ್ತು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ 2021ರ ಡಿ. 22ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು(ಸೋಮವಾರ) ತೀರ್ಪು ಪ್ರಕಟಿಸಿದೆ.ಕರ್ನಾಟಕ ಪೊಲೀಸ್   ದ್ದುಪಡಿ  ಕಾಯ್ದೆ- 2021 ಅನ್ನು ರದ್ದು ಪಡಿಸಿದ ಹೈಕೋರ್ಟ್, ಕಾಯ್ದೆಯು ಅಸಂವಿಧಾನಿಕ ಎಂದು ಘೋಷಿಸಿದೆ. ಆದರೆ, ಆನ್‌ಲೈನ್ ಬೆಟ್ಟಿಂಗ್ ನಿಷೇಧಕ್ಕೆ ಸಂವಿಧಾನದ ನಿಯಮಾನುಸಾರ ಹೊಸದಾಗಿ ಕಾಯ್ದೆ ತರಲು ಈ ಆದೇಶ ತಡೆಯೊಡ್ಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಣ್ಣ ನಗರಗಳಲ್ಲಿ ಬಸ್ ಸೇವೆಗಳನ್ನು ಸುಧಾರಿಸಲು ಕೇಂದ್ರವು ಯೋಜನೆಯನ್ನು ಜಾರಿಗೆ ತರಲು ಸಿದ್ಧಪಡಿಸಿದೆ;

Mon Feb 14 , 2022
ದೆಹಲಿ: ಮುಖ್ಯವಾಗಿ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಬಸ್ ಸಾರಿಗೆಯನ್ನು ಹೆಚ್ಚಿಸಲು ಕಳೆದ ವರ್ಷದ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ ₹ 18,000 ಕೋಟಿ ಯೋಜನೆ ಅನುಷ್ಠಾನಕ್ಕೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಯೋಜನೆಯನ್ನು ಸಿದ್ಧಪಡಿಸಿದೆ. ಈ ಯೋಜನೆಯನ್ನು ಮಧ್ಯಂತರ ಸಮಾಲೋಚನೆಗಾಗಿ ಹಂಚಿಕೊಳ್ಳಲಾಗಿದೆ ಎಂದು ಇಬ್ಬರು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಇದನ್ನು ಜಾರಿಗೊಳಿಸಲಾಗುವುದು. ರಾಜ್ಯಗಳು ಬಸ್ ಸೇವೆಗಳಿಗಾಗಿ ಖಾಸಗಿ ರಿಯಾಯಿತಿದಾರರನ್ನು […]

Advertisement

Wordpress Social Share Plugin powered by Ultimatelysocial