ಕೊಡಿಶ್ರೀಗಳ ರಾಜಕೀಯ ಭವಿಷ್ಯ.

ಮಖಂಡಿ ಫೆಬ್ರವರಿ 4: ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ತಯಾರಿ ಭರದಿಂದ ಸಾಗುತ್ತಿದೆ.

ಇನ್ನೇನು ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಬಲ ಪಕ್ಷಗಳು ಪ್ರಚಾರ ಕಾರ್ಯಯವನ್ನು ಚುರುಕುಗೊಳಿಸಲಿವೆ. ಈ ನಡುವೆ ರಾಜಕೀಯ ಭವಿಷ್ಯ ನುಡಿಯುವುದರಲ್ಲಿ ಮುಂಚುಣಿಯಲ್ಲಿರುವ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಜಿಗಳು ಮತ್ತೊಂದು ರಾಜಕೀಯ ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ. ಇದಕ್ಕೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವಿತ್ತು. ಆದರೆ ಮೈತ್ರಿ ಸರ್ಕಾರ ಕೆಡವುದರ ಮೂಲಕ ಬಿಜೆಪಿ ಅಧಿಕಾರ ಪಡೆದುಕೊಂಡಿದೆ ಎನ್ನುವ ಕಿಚ್ಚು ಈ ಬಾರಿ ಹೊತ್ತಿ ಉರಿಯುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡೆಎಸ್ ಮೂರು ಪ್ರಬಲ ಪಕ್ಷಗಳ ನಡುವೆ ಭಾರೀ ಪೈಪೋಟಿ ನಡೆಯಲಿದೆ. ಈ ನಡುವೆ ಕೋಡಿಶ್ರೀಗಳು ನುಡಿದ ಭವಿಷ್ಯ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ.

ಕೋಡಿಶ್ರೀಗಳು ಹೇಳಿದ್ದು ಇಷ್ಟು-‘ರಾಜಕೀಯ ಅಸ್ಥಿರತೆ ಇದೆ. ಚುನಾವಣೆವರೆಗೂ ಪಕ್ಷಾಂತರಗಳು ಇರುತ್ತವೆ. ಪಕ್ಷಗಳು ಕೂಡಿ ಹೋಗುವುದು ಕಷ್ಟ. ಚುನಾವಣೆವರೆಗೂ ಏನು ಹೇಳುವುದಕ್ಕೆ ಆಘುವುದಿಲ್ಲ. ಎಲ್ಲ ಡಿವೈಡ್ ಆಗುವ ಲಕ್ಷಣ ಇದೆ. ಆದರೂ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ’ ಎಂದಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ನಿನ್ನೆ ಮಾತನಾಡಿದ ಕೋಡಿ ಶ್ರೀಗಳು, ‘ಯುಗಾದಿ ನಂತರ ಪ್ರಕೃತಿ ವಿಕೋಪ ಆಗುತ್ತದೆ. ಆಗುವುದಿಲ್ಲ ಎಂದು ಹೇಳುವುದಿಲ್ಲ. ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತದೆ. ಯಾರೇ ಆಗಲಿ ತಪ್ಪು ಇರಲಿ ಸರಿ ಇರಲಿ. ಬಿತ್ತಿದ್ದೆ ಬೆಳುಯುವುದು. ನಾವು ಏನ್ ಬಿತ್ತುತ್ತೇವೆ ಅದೆ ಬೆಳೆಯುತ್ತದೆ. ಮಾರಬಾರದು ಮಾಡಿದರೆ ಆರಬಾರದ್ದು ಆಗುತ್ತದೆ’ ಎಂದು ಅವರು ಹೇಳಿದರು.

ಮತ್ತಷ್ಟು ಮಾತನಾಡಿದ ಕೋಡಿ ಶ್ರೀಗಳು,’ ಮುಂದೆ ಎಷ್ಟು ಸುಖವಿದೆಯೋ ಅಷ್ಟೇ ಕಷ್ಟವೂ ಇದೆ. ಒಲೆ ಹತ್ತಿ ಉರಿದರೆ ಆರಬಹುದು. ಆದರೆ ಧರೆ ಹೊತ್ತಿ ಉರಿದರೆ ಆರುವುದಿಲ್ಲ. ನಾನು ಹೇಳಿದ ಮರುದಿನವೇ ಪ್ಲೈಟ್ ಅಪಘಾತವಾಗಿದೆ. ಅದರಲ್ಲಿ ಐವತ್ತು ಜನ ಸತ್ತರು. ಯುಗಾದಿ ಬಂದ ನಂತರ ಎಲ್ಲಾ ಸವಿಸ್ತಾರವಾಗಿ ಹೇಳುತ್ತೇನೆ’ ಎಂದಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಪಂಜಾಬ್ ಶಾಲಾ ಪ್ರಾಚಾರ್ಯರಿಗೆ ಸಿಂಗಾಪುರ ಪ್ರವಾಸ ಭಾಗ್ಯ!

Sat Feb 4 , 2023
ಚಂಡೀಗಢ: ಶಿಕ್ಷಕರಿಗೆ ವಿದೇಶಗಳಲ್ಲಿ ತರಬೇತಿ ನೀಡುವ ಯೋಜನೆ ಅನುಷ್ಠಾನಕ್ಕೆ ಪಂಜಾಬ್ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಈ ಯೋಜನೆಯಡಿ ಶಾಲಾ ಶಿಕ್ಷಣ ಇಲಾಖೆ 2022-23ನೇ ಹಣಕಾಸು ವರ್ಷದಲ್ಲಿ 36 ಮಂದಿ ಪ್ರಾಚಾರ್ಯರ ತಂಡವನ್ನು ಸಿಂಗಾಪುರದ ಪ್ರಿನ್ಸಿಪಾಲ್ಸ್ ಅಕಾಡೆಮಿಗೆ ಹಾಗೂ 30 ಮಂದಿಯನ್ನು ಸಿಂಗಾಪುರದ ನನ್ಯಾಂಗ್ ಟೆಕ್ನಿಕಲ್ ಯೂನಿವರ್ಸಿಟಿಯ ಸ್ವಾಯತ್ತ ಸಂಸ್ಥೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಜ್ಯುಕೇಶನ್‌ಗೆ ಕಳುಹಿಸಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ಹೇಳಿದೆ. “ಈ ತರಬೇತಿಯು ಇಲ್ಲಿನ ಶಿಕ್ಷಕರಿಗೆ […]

Advertisement

Wordpress Social Share Plugin powered by Ultimatelysocial