ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರು.

ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. ಬೆಂಗಳೂರು: ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ.
ಇದು ಜನಹಿತ ಹೇಳಿಕೆಯಲ್ಲ. ಇದರ ಹಿಂದಿರುವ ಉದ್ದೇಶ ಏನು ಗೊತ್ತೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸುನೀಲ್ ಕುಮಾರ್, ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ. ಉಚಿತ ವಿದ್ಯುತ್ ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗಿಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ ಎಂದು ಆರೋಪಿಸಿದ್ದಾರೆ. ನಿಮ್ಮ ಕಾಲದಲ್ಲಿ ಇಂಧನ ಇಲಾಖೆ ಹೇಗೆ ಕಾರ್ಯ ನಡೆಸಿತ್ತು ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ. ನೀವು ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ೯೦೦೦ ಕೋಟಿ ರೂ.ನ್ನು ಎಸ್ಕಾಂಗಳಿಗೆ ನೀಡಿ ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ ಎಂದು ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannadaz

Please follow and like us:

Leave a Reply

Your email address will not be published. Required fields are marked *

Next Post

ಹೈಕೋರ್ಟ್ ಮೊರೆ ಹೋದ ಅನುಷ್ಕಾ ಶರ್ಮಾ

Fri Jan 13 , 2023
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. 2012-2013 ಮತ್ತು 2013-2014ರ ಬಾಕಿ ತೆರಿಗೆ ಪಾವತಿಸುವಂತೆ ಮಾರಾಟ ತೆರಿಗೆಯ ಉಪ ಆಯುಕ್ತರು ನೀಡಿದ್ದ ಎರಡು ಆದೇಶಗಳನ್ನು ಪ್ರಶ್ನಿಸಿ ನಟಿ ಅನುಷ್ಕಾ ಶರ್ಮಾ ಬಾಂಬೆ ಹೈಕೋರ್ಟ್‌ನ ಮೆಟ್ಟಿಲೇರಿದ್ದಾರೆ. ಅನುಷ್ಕಾ ಶರ್ಮಾ ಸಲ್ಲಿಸಿರುವ ಮನವಿಗೆ ಉತ್ತರ ನೀಡುವಂತೆ ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ಇಂದು (ಗುರುವಾರ, ಜನವರಿ 12) ನಿರ್ದೇಶನ ನೀಡಿದೆ ನ್ಯಾಯಾಧೀಶರಾದ ನಿತಿನ್.ಎಂ.ಜಮ್ದಾರ್ ಮತ್ತು ಅಭಯ್ ಅಹುಜಾ […]

Advertisement

Wordpress Social Share Plugin powered by Ultimatelysocial