ಅಂಬೇಡ್ಕರ್​ ಮೊಮ್ಮಗನ ಮೊರೆ ಹೋದ ಕುಮಾರಸ್ವಾಮಿ.

ಕೋಲಾರದಲ್ಲಿ ದಲಿತ ಮತಗಳೇ ಹೆಚ್ಚಿದ್ದು, ಈ ಮತಗಳನ್ನು ಜೆಡಿಎಸ್​ನತ್ತ ಸೆಳೆದುಕೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಡಾ. ಬಿ ಆರ್​ ಅಂಬೇಡ್ಕರ್​ ಅವರ ಮೊಮ್ಮಗ ಪ್ರಕಾಶ್​ ಅಂಬೆಡ್ಕರ್​ ಅವರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆಕೋಲಾರ:ಕೋಲಾರದಲ್ಲಿ ಸಿದ್ದರಾಮಯ್ಯ   ಅವರನ್ನು ಶತಾಯಗತಾಯ ಸೋಲಿಸಲು ಜೆಡಿಎಸ್​ ಮಾಸ್ಟರ್​ ಪ್ಲಾನ್​​ ಮಾಡಿಕೊಂಡಿದೆ.

ಕೋಲಾರದಲ್ಲಿ ದಲಿತ ಮತಗಳೇ ಹೆಚ್ಚಿದ್ದು, ಈ ಮತಗಳನ್ನು ಜೆಡಿಎಸ್​ನತ್ತ ಸೆಳೆದುಕೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ  ಡಾ. ಬಿ ಆರ್​ ಅಂಬೇಡ್ಕರ್​  ಅವರ ಮೊಮ್ಮಗ ಪ್ರಕಾಶ್​ ಅಂಬೆಡ್ಕರ್​ ಅವರನ್ನು ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಡೆಕ್ಕನ್​ ಹೆರಾಲ್ಡ್​ ವರದಿ ಮಾಡಿದೆ. ಈ ಸಂಬಂಧ ಕೋಲಾರದಲ್ಲಿ ಶೀಘ್ರದಲ್ಲೇ ಜೆಡಿಎಸ್​ ನಾಯಕರು ಸಭೆ ಸೇರಲಿದ್ದಾರೆ. ಸದ್ಯ ಕುಮಾರಸ್ವಾಮಿ ಪಂಚರತ್ನ ಯಾತ್ರೆಯಲ್ಲಿ ಬ್ಯುಸಿ ಇದ್ದು, ಸಭೆ ಸಂಬಂಧ ಯಾತ್ರೆಯಿಂದ ಬ್ರೆಕ್​ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಅಹಿಂದ ಮತದಾರರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರನ್ನು ಓಲೈಸಲು ಜೆಡಿಎಸ್​ ಪ್ರಕಾಶ್ ಅವರನ್ನು ಚಾರದಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರೊಂದಿಗೆ ಇತ್ತೀಚೆಗೆ ಪ್ರಕಾಶ್ ಅವರನ್ನು ಭೇಟಿ ಮಾಡಿದ್ದರು.

ಕೋಲಾರ ಕ್ಷೇತ್ರ ಸಿದ್ದರಾಮಯ್ಯಗೆ ಸೇಫ್​ ಅಲ್ಲ, ಸ್ಪರ್ಧಿಸಿದರೆ ಹರಕೆಯ ಕುರಿ ಆಗಲಿದ್ದಾರೆ

ಕಲಬುರಗಿ: ವಿಪಕ್ಷನಾಯಕ ಸಿದ್ದರಾಮಯ್ಯ  ಕೋಲಾರ ವಿಧಾನಸಭಾ ಕ್ಷೇತ್ರದಿಂದ   ಸ್ಪರ್ಧಿಸುವುದಾಗಿ ಈಗಾಗಲೆ ಘೋಷಿಸಿದ್ದಾರೆ. ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಮಾಜಿ ಮುಖಮಂತ್ರಿ ಹೆಚ್​ ಡಿ ಕುಮಾರಸ್ವಾಮಿ  ಈ ಹಿಂದೆ ಕೊಂಕು ಮಾತನಾಡಿದ್ದರು. ಈಗ ಮತ್ತೆ ಕಾಲೆಳೆದಿದ್ದು, ಕೋಲಾರ ಕ್ಷೇತ್ರ ಸಿದ್ದರಾಮಯ್ಯಗೆ ಸೇಫ್​ ಅಲ್ಲ. ಕೋಲಾರದಲ್ಲಿ ಸ್ಪರ್ಧಿಸುವಂತೆ ಯಾರು ಒತ್ತಡ ಹಾಕಿದ್ದಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಜಿಲ್ಲೆಯ ಕಡಣಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ದೇವರೇ ಕಾಪಾಡಬೇಕು. ಕಾಂಗ್ರೆಸ್​ ಪಕ್ಷದವರೇ ಹರಕೆಯ ಕುರಿ ಮಾಡಲು ಹೊರಟಿದ್ದಾರೆ. ನಾನು ಕೋಲಾರದಲ್ಲಿ ಸುತ್ತಾಡಿ ಜನರ ಭಾವನೆ ತಿಳಿದುಕೊಂಡಿದ್ದೇನೆ. ಕೋಲಾರ ಜಿಲ್ಲೆಯ ಕಾಂಗ್ರೆಸ್​​​ ನಾಯಕರಿಗೆ ಮತ ಪಡೆಯುವ ಶಕ್ತಿ ಇಲ್ಲ. ಅದಕ್ಕಾಗಿ ಸಿದ್ದರಾಮಯ್ಯರನ್ನು ಬಲವಂತವಾಗಿ ನಿಲ್ಲಿಸಲು ಹೊರಟಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿದರೆ ಹರಕೆಯ ಕುರಿ ಆಗಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ವ್ಯಂಗ್ಯವಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್

Fri Jan 13 , 2023
ಚಿಕ್ಕೋಡಿ, ಜ.11- ಮುಂಬರುವ ಚುನಾವಣೆ ಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದ ಬೆನ್ನಲ್ಲೇ, ಕಾಂಗ್ರೆಸ್ ನಿಂದ ಈ ಹೇಳಿಕೆ ಹೊರಬಿದ್ದಿದೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಇಂದು ಪ್ರಜಾಧ್ವನಿ ಯಾತ್ರೆ ಆರಂಭಿಸಿದೆ. ಈ ಸಂಬಂಧ ಚಿಕ್ಕೋಡಿಯಲ್ಲಿ ನಡೆದ […]

Advertisement

Wordpress Social Share Plugin powered by Ultimatelysocial