ಲಾಭಕ್ಕಾಗಿ ಸಿದ್ದರಾಮಯ್ಯ ಅಹಿಂದ ಬಳಸಿಕೊಂಡಿದ್ದಾರೆ: ಎ.ಹೆಚ್.ವಿಶ್ವನಾಥ್

 ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನಗೆ ದ್ರೋಹ ಬಗೆದಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಸಿ.ಎಂ.ಇಬ್ರಾಹಿಂ ಆರೋಪಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಎ.ಎಚ್‌.ವಿಶ್ವನಾಥ್‌ ಅವರು ಕೂಡ ಸಿದ್ದರಾಮಯ್ಯ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ವಿಶ್ವನಾಥ್ ಅವರು, ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಕುರುಬ ಸಮುದಾಯದ ನಾಯಕತ್ವವನ್ನು ಮುಗಿಸಿದ್ದಾರೆಂದು ಕಿಡಿಕಾರಿದ್ದಾರೆ.ಸಿದ್ದರಾಮಯ್ಯ ಅವರು ಅಹಿಂದ(ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಕನ್ನಡ ಸಂಕ್ಷಿಪ್ತ ರೂಪ)ವನ್ನು ಬಳಕೆ ಮಾಡಿಕೊಂಡಿದ್ದು, ಈ ಮೂಲಕ ರಾಜಕೀಯವಾಗಿ ಯಶಸ್ವಿಯಾಗಿದ್ದಾರೆ. ತಮ್ಮನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದವರು ಹಾಗೂ ಈ ಅಹಿಂದ ಹೋರಾಟಕ್ಕೆ ಕಾರಣರಾದ ಎಸ್‌ಎಂ ಕೃಷ್ಣ, ಮಲ್ಲಿಕಾರ್ಜುನ ಖರ್ಗೆ, ಎಚ್‌ಎಂ ರೇವಣ್ಣ, ಸಿಎಂ ಇಬ್ರಾಹಿಂ ಮತ್ತು ವಿಶ್ವನಾಥ್ ಅವರಂತಹ ಹಿರಿಯ ನಾಯಕರಿಗೆ ದ್ರೋಹ ಮಾಡಿದ್ದಾರೆಂದು ಹೇಳಿದ್ದಾರೆ.ಸಿದ್ದರಾಮಯ್ಯ ಅವರಿಗೆ ಈ ನಾಯಕರ ಬಗ್ಗೆ ಕೃತಜ್ಞತೆಯ ಭಾವನೆಯೇ ಇಲ್ಲದಿರುವುದು ದುರದೃಷ್ಟಕರ ಸಂಗತಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿಯಿಂದ ಸಿದ್ದರಾಮಯ್ಯ ಅವರನ್ನು ಗೆಲ್ಲಿಸುವಲ್ಲಿ ಇಬ್ರಾಹಿಂ ಪ್ರಮುಖ ಪಾತ್ರ ವಹಿಸಿದ್ದಾರೆ.ಸಿದ್ದರಾಮಯ್ಯ ತಮ್ಮ ರಾಜಕೀಯ ಲಾಭಕ್ಕಾಗಿ ದಲಿತರು, ಅಲ್ಪಸಂಖ್ಯಾತರು ಮತ್ತು ಕುರುಬರನ್ನು ಬಳಸಿಕೊಂಡಿದ್ದು, ಎಚ್‌ಎಂ ರೇವಣ್ಣ ಮತ್ತು ಬಿಬಿ ಚಿಮ್ಮನಕಟ್ಟಿ, ಡಾ ಜಿ ಪರಮೇಶ್ವರ, ರೋಷನ್ ಬೇಗ್ ಮತ್ತು ಇತರೆ ಮುಖಂಡರ ರಾಜಕೀಯ ವೃತ್ತಿಜೀವನವನ್ನು ಅಂತ್ಯಗೊಳ್ಳಉವಂತೆ ಮಾಡಿದ್ದಾರೆಂದು ತಿಳಿಸಿದ್ದಾರೆ.15 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ತಮ್ಮ ಹಡಗು ಹತ್ತಲು ಎಷ್ಟು ಹಣವನ್ನು ಖರ್ಚು ಮಾಡುತ್ತಿದ್ದಾರೆಂಬುದನ್ನು ತಿಳಿದುಕೊಳ್ಳಲು ನಾನು ಬಯಸುತ್ತೇನೆಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್‌ ಸಂಪರ್ಕದಲ್ಲಿರುವ BJP ನಾಯಕರು | ಈ ಊಹಾಪೋಹ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಸಚಿವ ಆನಂದ್‌ ಸಿಂಗ್‌

Tue Feb 1 , 2022
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸೋಮವಾರ ಬೆಳಗ್ಗೆ ಬಿಜೆಪಿ ಸಚಿವ ಆನಂದ್‌ ಸಿಂಗ್‌ ಅವರು ಖಾಸಗಿಯಾಗಿ ಭೇಟಿ ಮಾಡಿದ್ದು, ರಾಜ್ಯ ಸರ್ಕಾರದ ಇತ್ತೀಚಿನ ಬದಲಾವಣೆಗಳಿಂದ ಹಲವು ಸಚಿವರು ಅತೃಪ್ತರಾಗಿದ್ದಾರಾ ಎಂಬ ಅನುಮಾನ ಹುಟ್ಟುಹಾಕಿದೆ.ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಶಿವಕುಮಾರ್ ಭೇಟಿ ಸೌಜನ್ಯದ ಭೇಟಿ ಎಂದು ಹೇಳಿದ್ದು, “ಮನೆಗೆ ಭೇಟಿ ನೀಡುವುದು ರಾಜಕೀಯವಲ್ಲ.ರಾಜಕೀಯ ಮಾತನಾಡಲು ನಾವು ರೆಸಾರ್ಟ್ ಅಥವಾ ಹೋಟೆಲ್‌ಗೆ ಹೋಗುತ್ತೇವೆ. ಅವರ ಸಹೋದರನ ಕ್ಷೇತ್ರಗಳಲ್ಲಿ ಪ್ರವಾಸಿ […]

Advertisement

Wordpress Social Share Plugin powered by Ultimatelysocial