ರಾಜ್ಯದ ನಾಲ್ಕು ದಿಕ್ಕಿನಿಂದಲೂ ರಥ ಯಾತ್ರೆ ಆರಂಭಿಸಲು ಬಿಜೆಪಿ ಸಜ್ಜು.

ಡಳಿತಾರೂಢ ಬಿಜೆಪಿಯು ವಿಧಾನಸಭೆ ಚುನಾವಣೆಗೆ ಮುನ್ನ ಬಜೆಟ್ ಅಧಿವೇಶನದ ನಂತರ ರಾಜ್ಯದಲ್ಲಿ ‘ರಥಯಾತ್ರೆ’ ನಡೆಸಲು ಸಜ್ಜಾಗಿದೆ. ಎಲ್ಲಾ ಜನರನ್ನು ತಲುಪಲು ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆ ಕೈಗೊಳ್ಳಲಾಗುವುದು ಎಂದು ಬಿಜೆಪಿ ತಿಳಿಸಿದೆ. ಬೆಂಗಳೂರು: ಆಡಳಿತಾರೂಢ ಬಿಜೆಪಿಯು ವಿಧಾನಸಭೆ ಚುನಾವಣೆಗೆ ಮುನ್ನ ಬಜೆಟ್ ಅಧಿವೇಶನದ ನಂತರ ರಾಜ್ಯದಲ್ಲಿ ‘ರಥಯಾತ್ರೆ’ ನಡೆಸಲು ಸಜ್ಜಾಗಿದೆ. ಎಲ್ಲಾ ಜನರನ್ನು ತಲುಪಲು ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆ ಕೈಗೊಳ್ಳಲಾಗುವುದು ಎಂದು ಬಿಜೆಪಿ ತಿಳಿಸಿದೆ.
ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ವಿವರಗಳನ್ನು ಅಂತಿಮಗೊಳಿಸಬೇಕಿದೆ ಎಂದು ಹೇಳಿದ್ದರು. ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸುತ್ತಿದ್ದಾರೆ. ಸಭೆಯಲ್ಲಿ ಹಲವು ರಾಜಕೀಯ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೂತ್ ಮಟ್ಟದಿಂದ ಪಕ್ಷ ಸಂಘಟನೆಯವರೆಗೂ ಮಾಹಿತಿ ನೀಡಲಾಗಿತ್ತು ಎಂದು ತಿಳಿಸಿದರು.

ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರಗೆ ಸಂಬಂಧಿಸಿದಂತೆ ಹೈಕಮಾಂಡ್ ಕರೆ ಮಾಡುವ ಸಾಧ್ಯತೆ ಇದೆ. ಇತ್ತೀಚೆಗೆ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಲು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಪಕ್ಷ ಅವರನ್ನು ದೂರವಿಟ್ಟಿತ್ತು.

ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆಯೇ ಬಿಜೆಪಿಗೆ ಒಂದೇ ಗುರಿ, ಅದು ಸಿದ್ದರಾಮಯ್ಯಒಬಿಸಿ ಕೋಟಾದಡಿ ಪಂಚಮಸಾಲಿ ಉಪಪಂಗಡಕ್ಕೆ ಮೀಸಲಾತಿ ನೀಡುವ ಕುರಿತು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಸಂಪುಟದ ಸಚಿವರ ಮೇಲೂ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯಿಂದ ಶಾಸಕ ಯತ್ನಾಳ್ ಅವರನ್ನು ಉಚ್ಚಾಟಿಸಿದರೆ ಪಂಚಮಸಾಲಿ ಸಮಾಜ ಅವರ ಜೊತೆ ನಿಲ್ಲಲಿದೆ ಎಂದೂ ಧರ್ಮಗುರುಗಳು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತು ಹೈಕಮಾಂಡ್ ಗಮನಕ್ಕೆ ತರಲಾಗಿದ್ದು, ರಾಷ್ಟ್ರೀಯ ಕಾರ್ಯಕಾರಿಣಿ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಮರ್ಥಿಸಿಕೊಂಡರು. ಕೇಸರಿ ಪಕ್ಷವು ಹಿಂದುತ್ವದ ಅಜೆಂಡಾ ಮತ್ತು ಪಿಎಂ ಮೋದಿ ಹೆಸರಿನಲ್ಲಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಎಲ್ಲಾ ಪ್ರಯತ್ನಗಳನ್ನು ಗಂಭೀರವಾಗಿ ನಡೆಸುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಗೃಹ ಸಚಿವ ಅಮಿತ್ ಶಾ 10 ಬಾರಿ ಬಂದರೂ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಕುಂದಿಸಲು ಆಗುವುದಿಲ್ಲ.

Tue Jan 17 , 2023
ಕೇಂದ್ರ ಗೃಹ ಸಚಿವ ಅಮಿತ್ ಶಾ 10 ಬಾರಿ ಬಂದರೂ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಕುಂದಿಸಲು ಆಗುವುದಿಲ್ಲ. ಕಳೆದ ಬಾರಿ ಪಡೆದಿದ್ದ ರೀತಿಯಲ್ಲೇ ಈ ಭಾರಿಯೂ ಗೆಲ್ಲುತ್ತೇವೆ ಮಂಡ್ಯ ಎಂದಿಗೂ ದೇವೇಗೌಡರ ಕ್ಷೇತ್ರ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಕೋಲಾರ: ಕೇಂದ್ರ ಗೃಹ ಸಚಿವ ಅಮಿತ್ ಶಾ 10 ಬಾರಿ ಬಂದರೂ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಕುಂದಿಸಲು ಆಗುವುದಿಲ್ಲ. ಕಳೆದ ಬಾರಿ ಪಡೆದಿದ್ದ ರೀತಿಯಲ್ಲೇ ಈ ಭಾರಿಯೂ […]

Advertisement

Wordpress Social Share Plugin powered by Ultimatelysocial