ಕೇಂದ್ರ ಗೃಹ ಸಚಿವ ಅಮಿತ್ ಶಾ 10 ಬಾರಿ ಬಂದರೂ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಕುಂದಿಸಲು ಆಗುವುದಿಲ್ಲ.

ಕೇಂದ್ರ ಗೃಹ ಸಚಿವ ಅಮಿತ್ ಶಾ 10 ಬಾರಿ ಬಂದರೂ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಕುಂದಿಸಲು ಆಗುವುದಿಲ್ಲ. ಕಳೆದ ಬಾರಿ ಪಡೆದಿದ್ದ ರೀತಿಯಲ್ಲೇ ಈ ಭಾರಿಯೂ ಗೆಲ್ಲುತ್ತೇವೆ ಮಂಡ್ಯ ಎಂದಿಗೂ ದೇವೇಗೌಡರ ಕ್ಷೇತ್ರ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಕೋಲಾರ: ಕೇಂದ್ರ ಗೃಹ ಸಚಿವ ಅಮಿತ್ ಶಾ 10 ಬಾರಿ ಬಂದರೂ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಶಕ್ತಿ ಕುಂದಿಸಲು ಆಗುವುದಿಲ್ಲ. ಕಳೆದ ಬಾರಿ ಪಡೆದಿದ್ದ ರೀತಿಯಲ್ಲೇ ಈ ಭಾರಿಯೂ ಗೆಲ್ಲುತ್ತೇವೆ ಮಂಡ್ಯ ಎಂದಿಗೂ ದೇವೇಗೌಡರ ಕ್ಷೇತ್ರ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಅಮಿತ್ ಶಾ ಮಂಡ್ಯಕ್ಕೆ ಒಂದು ಬಾರಿ ಬಂದಾಗಲೇ ಬಾಂಬ್ ಒಂದನ್ನು ಹಾಕಿ ಹೋಗಿದ್ದಾರೆ. ಅಮುಲ್ಗೆ ನಂದಿನಿಯನ್ನು ಸೇರಿಸುತ್ತೇವೆ ಎಂದು, ಅದು ಯಾರಪ್ಪನ ಆಸ್ತಿ ಎಂದು ಪ್ರಶ್ನಿಸಿದ್ದಾರೆ.

ನಂದಿನಿ ಎಂಬ ಬಡ ಸಂಸ್ಥೆಯನ್ನು ನಮ್ಮ ರೈತರು, ಸಾರ್ವಜನಿಕರು ಇಷ್ಟು ದೊಡ್ಡ ಮಟ್ಟಕ್ಕೆ ಶಕ್ತಿಯಾಗಿ ಬೆಳೆಸಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನ ಸಚಿವರಿಗೆ ಸಮಾನವಾಗಿದೆ ಕೋಲಾರ ಜಿಲ್ಲೆಯಲ್ಲಿ ಮೊದಲ ಬಾರಿಗೆ ಇಡೀ ರಾಜ್ಯದಲ್ಲಿ ಡೈರಿ ಸ್ಥಾಪನೆಯಾಗಿರುವುದರಿಂದಲೇ ಸಿಲ್ಕ್-ಮಿಲ್ಕ್-ಚಿನ್ನಕ್ಕೆ ಹೆಸರುವಾಸಿಯಾಗಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ: ನಿಖಿಲ್ ಕುಮಾರಸ್ವಾಮಿ‘ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದು ಅವರ ವೈಯಕ್ತಿಕ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಆದರೆ, ಅವರನ್ನು ಇಲ್ಲಿಗೆ ಕರೆ ತಂದು ಹರಕೆ ಕುರಿ ಮಾಡುತ್ತಿದ್ದಾರೆ, ಸಿದ್ದರಾಮಯ್ಯ ಒಬ್ಬ ಹಿರಿಯ ನಾಯಕರು, ಮಾರ್ಗದರ್ಶನ ಕೊಡುವವರಿಗೆ ನಾವು ಮೊದಲಿನಿಂದಲೂ ಗೌರವ ನೀಡುತ್ತಾ ಬಂದಿರುವುದು ನಮ್ಮ ಸಂಪ್ರದಾಯ. ಸಿದ್ದರಾಮಯ್ಯ ಗೆಲ್ಲಬೇಕು, ಸೋಲಬೇಕು ಎನ್ನುವ ವಿಚಾರ ನಮ್ಮ ಬಳಿ ಇಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರ ಹೆಸರನ್ನು ರಾಜಕೀಯಕ್ಕೆ ಬಳಸಿಕೊಂಡಿತ ಕಾಂಗ್ರೆಸ್‌?

Tue Jan 17 , 2023
  ಬೆಂಗಳೂರು: ಹೊಸಪೇಟೆಯಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಕೃಷ್ಣ ಭಟ್‌ ಎನ್ನುವವರು ಸೇರ್ಪಡೆಯಾಗಿದ್ದಾರೆ. ಈ ಕುರಿತು ಈಗ ಗೊಂದಲಗಳು ನಿರ್ಮಾಣವಾಗಿವೆ. ಕೆಪಿಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರು ಭಾಷಣ ಮಾಡಿದ ನಂತರ ಆಗಮಿಸಿದ ಸ್ಥಳೀಯ ಮುಖಂಡರೊಬ್ಬರು, ‘ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಹೋದರನ ಪುತ್ರ ಕೃಷ್ಣ ಭಟ್‌ ಅವರು ಕಾಂಗ್ರೆಸ್‌ನ ತತ್ವ, ಸಿದ್ಧಾಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ’ ಎಂದು ಘೋಷಣೆ ಮಾಡಿದರು. ಈ ವೇಳೆ […]

Advertisement

Wordpress Social Share Plugin powered by Ultimatelysocial