ರಾಜಕೀಯಕ್ಕಾಗಿ ಗಡಿಯಾಚೆ ಸಮಸ್ಯೆ ಸೃಷ್ಟಿ

ರಾಜಕೀಯ ಕಾರಣಕ್ಕಾಗಿ ಮಹಾರಾಷ್ಟ್ರದಲ್ಲಿ ಗಡಿ ಸಮಸ್ಯೆ ಸೃಷ್ಟಿ (Kannada Bhavana) ಮಾಡಲಾಗುತ್ತಿದೆ. ಕರ್ನಾಟಕ ಎಂದೂ ಗಡಿ ಸಮಸ್ಯೆ ಸೃಷ್ಟಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ನಗರದ ಕನ್ನಡ ಭವನ ಕ್ಷೇಮಾಭಿವೃದ್ಧಿ ಸಂಘದ ಕನ್ನಡ ಭವನ ರಂಗಮಂದಿರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.ರಾಜಕೀಯವಾಗಿ ಗಡಿಯಾಚೆ ಸಮಸ್ಯೆ ಪ್ರಾರಂಭಿಸಿದ್ದಾರೆ. ಕರ್ನಾಟಕದಲ್ಲಿ ಯಾವತ್ತೂ ಹಾಗೆ ಮಾಡಿಲ್ಲ. ಕನ್ನಡಿಗರ ರಕ್ಷಣೆ ಕಾರ್ಯವನ್ನು ಸದಾ ಕಾಲ ಮಾಡಿಕೊಂಡು ಬಂದಿದ್ದೇವೆ. ಕನ್ನಡ ನಾಡಿನಲ್ಲಿ ಹುಟ್ಟಿದವರು ಕನ್ನಡಿಗರೇ. ಸತ್ಯದ ಮಾರ್ಗ ಅನುಸರಿಸಿದಾಗ ಸ್ವರ್ಗದ ದರ್ಶನವಾಗುತ್ತದೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎನ್ನುವುದನ್ನು ಅಕ್ಷರಶಃ ಪಾಲನೆ ಮಾಡಬೇಕು ಎಂದರು.ಕನ್ನಡದಲ್ಲಿ ಪ್ರಾಮಾಣಿಕತೆ, ಒಳ್ಳೆಯತನ ಇದೆ. ಕನ್ನಡದ ಸಾಕ್ಷಿ ಪ್ರಜ್ಞೆ ಮಾನವೀಯತೆಯಿಂದ ಕೂಡಿರುವಂಥದ್ದು. ಕನ್ನಡದ ಪುರಂದರದಾಸರು, ಅಲ್ಲಮಪ್ರಭು, ಬಸವಣ್ಣ, ಅವರಿಂದ ಹರಿದುಬಂದ ಜ್ಞಾನದ ಭಂಡಾರ ಕನ್ನಡಿಗರನ್ನು ಬೆಳೆಸಿದೆ. ಇದನ್ನು ಇನ್ನಷ್ಟು ಉತ್ಕೃಷ್ಟಗೊಳಿಸುವುದು ನಮ್ಮ ಕರ್ತವ್ಯ. ಹೀಗಾಗಿ ಬೆಳಗಾವಿಯಲ್ಲಿ ಅದ್ಭುತ ರಂಗಮಂದಿರವನ್ನು ನಿರ್ಮಿಸಲಾಗಿದೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಸಹಕಾರಿ ಬ್ಯಾಂಕ್‌ಗಳ ಅಕ್ರಮ ಕೇಸ್‌

Fri Dec 30 , 2022
ಬೆಳಗಾವಿ ಅಧಿವೇಶನದಲ್ಲಿ ಸಹಕಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಸುಳ್ಳು ನೆಪ ಹೇಳುವುದನ್ನು ಬಿಟ್ಟು ಗುರುರಾಘವೇಂದ್ರ ಬ್ಯಾಂಕ್ ಸಹಿತ ವಿವಿಧ ಸಹಕಾರಿ ಬ್ಯಾಂಕ್ ಹಗರಣಗಳ (Bank fraud) ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಶ್ರೀ ಗುರು ರಾಘವೇಂದ್ರ ಕೋ- ಆಪರೇಟಿವ್ ಬ್ಯಾಂಕ್ ಠೇವಣಿದಾರರು ಮತ್ತು ಷೇರುದಾರರ ಹಿತರಕ್ಷಣಾ ವೇದಿಕೆಯ ಮುಖ್ಯ ಪೋಷಕ ಡಾ.ಶಂಕರ ಗುಹಾ ದ್ವಾರಕಾನಾಥ್ ಬೆಳ್ಳೂರು ಆಗ್ರಹಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಹಕಾರಿ ಬ್ಯಾಂಕ್‌ಗಳ ಹಗರಣದ ತನಿಖೆಯನ್ನು […]

Advertisement

Wordpress Social Share Plugin powered by Ultimatelysocial