ಭಾರತಕ್ಕೆ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾರಂತಹ ನಾಯಕರು ಬೇಕು.

ಭಾರತದ ರಾಜಕಾರಣಕ್ಕೆ ಪ್ರಧಾನಿ ಹುದ್ದೆಗೆ ರಾಜಿನಾಮೆ ನೀಡಿದ ಜಸಿಂದಾ ಆರ್ಡೆರ್ನ್ ಅವರಂತಹ ನಾಯಕರ ಅಗತ್ಯವಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ನವದೆಹಲಿ: ಭಾರತದ ರಾಜಕಾರಣಕ್ಕೆ ಪ್ರಧಾನಿ ಹುದ್ದೆಗೆ ರಾಜಿನಾಮೆ ನೀಡಿದ ಜಸಿಂದಾ ಆರ್ಡೆರ್ನ್ ಅವರಂತಹ ನಾಯಕರ ಅಗತ್ಯವಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ನ್ಯೂಜಿಲೆಂಡ್ ಪ್ರಧಾನಿ ಜಸಿಂದಾ ಅರ್ಡೆರ್ನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಫೆಬ್ರುವರಿ 7ರೊಳಗೆ ಉನ್ನತ ಹುದ್ದೆಯಿಂದ ಕೆಳಗಿಳಿಯುವುದಾಗಿ ಪಕ್ಷದ ಸಭೆಯಲ್ಲಿ ಘೋಷಿಸಿದ್ದಾರೆ. ಸ್ಥಾನ ತ್ಯಜಿಸಲು ಇದು ಸೂಕ್ತ ಸಮಯ: ಪ್ರಧಾನಿ ಹುದ್ದೆಗೆ ದಿಢೀರ್ ರಾಜಿನಾಮೆ ಘೋಷಿಸಿದ ನ್ಯೂಜಿಲೆಂಡ್ ಪಿಎಂ ಜಸಿಂಡಾ ಅರ್ಡೆರ್ನ್ಈ ಕುರಿತು ಟ್ವೀಟ್ ಮಾಡಿರುವ ಜೈರಾಮ್ ರಮೇಶ್, ‘ಖ್ಯಾತ ಕ್ರಿಕೆಟ್ ವಿಶ್ಲೇಷಕ, ವಿಜಯ್ ಮರ್ಚೆಂಟ್ ಅವರು ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿ ನಿವೃತ್ತಿ ಹೊಂದುವ ಬಗ್ಗೆ ಒಮ್ಮೆ ಹೇಳಿದ್ದರು. ಆದರೆ, ಅಭಿಮಾನಿಗಳು ವಿಜಯ್ ಅವರನ್ನು ಯಾವಾಗ ನಿವೃತ್ತಿ ಹೊಂದುತ್ತೀರಿ ಎಂದು ಕೇಳಲಿಲ್ಲ. ಬದಲಿಗೆ ಏಕೆ ನಿವೃತ್ತರಾಗುತ್ತಿದ್ದೀರಿ ಎಂದು ಕೇಳಿದ್ದರು.

ಇದೀಗ ಕಿವೀಸ್ ಪ್ರಧಾನಿ ಜಸಿಂದಾ ಅರ್ಡೆರ್ನ್ ಅವರು ಮರ್ಚೆಂಟ್ರ ನಿಯಮವನ್ನು ಅನುಸರಿಸುತ್ತಿರುವುದಾಗಿ ಹೇಳಿದ್ದಾರೆ. ಭಾರತದ ರಾಜಕೀಯಕ್ಕೆ ಜಸಿಂದಾ ಅವರಂತಹವರು ಬೇಕಾಗಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಅಚ್ಚರಿ ತಂದ ಜಸಿಂಡಾ ನಿರ್ಧಾರ ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯುತ್ತಿಲ್ಲ ಎಂದು ಜಸಿಂದಾ ಅವರು ದಿಢೀರ್ ನಿರ್ಧಾರ ಪ್ರಕಟಿಸಿದ್ದು, ಪಕ್ಷದಲ್ಲಿ ಅಚ್ಚರಿಗೆ ಕಾರಣವಾಗಿದೆ. ದೊಡ್ಡ ಜವಾಬ್ದಾರಿ ಇರುವ ಉನ್ನತ ಹುದ್ದೆಯನ್ನು ನಿರ್ವಹಿಸಲು ನನಗೆ ಸಾಧ್ಯವಾಗುತ್ತಿಲ್ಲ.

ಹೀಗಾಗಿ, ಪ್ರಧಾನಿ ಸ್ಥಾನ ತ್ಯಜಿಸಲು ಇದು ಸೂಕ್ತ ಸಮಯ’ ಎಂದು ಜಸಿಂದಾ ಹೇಳಿದ್ದಾರೆ. ಭಾರತದೊಂದಿಗಿನ ಮೂರು ಯುದ್ಧಗಳಿಂದಾಗಿ…’, ಹಿಂದಿನ ತಪ್ಪುಗಳಿಂದ ಪಾಠ ಕಲಿತಿದ್ದೇವೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ಇದೊಂದು ದೊಡ್ಡ ಮತ್ತು ಅತ್ಯಂತ ಹೆಚ್ಚಿನ ಜವಾಬ್ದಾರಿಯುವ ಹುದ್ದೆಯಾಗಿದೆ. ಅದನ್ನು ನಿರ್ವಹಿಸುವುದು ಕೂಡ ಸುಲಭವಲ್ಲ. ಅಂತಹ ಹುದ್ದೆಗೆ ಸೂಕ್ತ ವ್ಯಕ್ತಿ ಇದ್ದರೆ ಚೆನ್ನ.

ನನಗೆ ಪ್ರಧಾನಿ ಹುದ್ದೆ ನಿಭಾಯಿಸಲು, ಪದವಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಸಿಂದಾ ಹೇಳಿಕೆ ನೀಡಿದ್ದಾರೆ. 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಾಡಹಗಲೇ ಬ್ಯಾಂಕ್ ದರೋಡೆಗೆ ಯತ್ನ.

Thu Jan 19 , 2023
ಪಾಟ್ನಾ: ಬಿಹಾರದ ಹಾಜಿಪುರದ ಬ್ಯಾಂಕ್‌ವೊಂದರಲ್ಲಿ ಬುಧವಾರ ಮೂವರು ಶಸ್ತ್ರಸಜ್ಜಿತ ದರೋಡೆಕೋರರು ಬಲವಂತವಾಗಿ ಬ್ಯಾಂಕ್‌ಗೆ ನುಗ್ಗಲು ಯತ್ನಿಸಿದ ದರೋಡೆಕೋರರ ವಿರುದ್ಧ ಇಬ್ಬರು ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ಗಳು ಹೋರಾಡಿದ ಘಟನೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ಗ್ರಾಹಕರಂತೆ ಮೂವರು ದುಷ್ಕರ್ಮಿಗಳು ಬ್ಯಾಂಕ್‌ ಒಳಗೆ ಪ್ರವೇಶಿಸುತ್ತಿದ್ದಂತೇ, ಭದ್ರತೆಯಲ್ಲಿ ನಿಯೋಜನೆಗೊಂಡಿದ್ದ ಇಬ್ಬರು ಮಹಿಳಾ ಪೇದೆಗಳು ಅವರನ್ನು ತಡೆದು ಪಾಸ್‌ಬುಕ್ ನೀಡುವಂತೆ ಒತ್ತಾಯಿಸಿದ್ದಾರೆ. ಈ ವೇಳೆ, ದುಷ್ಕರ್ಮಿಗಳು ತಮ್ಮ ಬಳಿ ಇದ್ದ ಆಯುಧಗಳಿಂದ […]

Advertisement

Wordpress Social Share Plugin powered by Ultimatelysocial