ನನಗಿರುವುದು ಒಂದೇ ಕನಸು.

ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದಲ್ಲಿ ರ್ಯಾಲಿ ನಡೆದ ಬಳಿಕ ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಪಾಟ್ನ: ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದಲ್ಲಿ ರ್ಯಾಲಿ ನಡೆದ ಬಳಿಕ ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.
ನನಗೆ ಒಂದೇ ಒಂದು ಕನಸಿದೆ, ಅದು ತನಗಾಗಿ ಅಲ್ಲ, ಬದಲಾಗಿ ವಿಪಕ್ಷಗಳ ನಾಯಕರು ಒಗ್ಗಟ್ಟಾಗಿ ಮುನ್ನಡೆಯುವುದೇ ನನ್ನ ಕನಸಾಗಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ತೆಲಂಗಾಣದ ಖಮ್ಮಮ್ ನಲ್ಲಿ ಕೆಸಿಆರ್ ನೇತೃತ್ವದಲ್ಲಿ ಪ್ರಮುಖ ವಿಪಕ್ಷಗಳ ನಾಯಕರು ಭಾಗವಹಿಸಿದ್ದರ ಬೆನ್ನಲ್ಲೇ ನಿತೀಶ್ ಕುಮಾರ್ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಈ ರ್ಯಾಲಿಗೆ ನೀವೇ ಹೋಗಿರಲಿಲ್ವಲ್ಲಾ? ಎಂಬ ಪ್ರಶ್ನೆಗೆ ಉತ್ತರಿಸಿರುವ ನಿತೀಶ್ ಕುಮಾರ್, ನನಗೆ ಕೆಸಿಆರ್ ಅವರ ರ್ಯಾಲಿ ಬಗ್ಗೆ ತಿಳಿದಿರಲಿಲ್ಲ.

ನಾನು ಬೇರೆ ಕೆಲಸಗಳಲ್ಲಿ ವ್ಯಸ್ತನಾಗಿದ್ದೆ. ಆ ರ್ಯಾಲಿಗೆ ಆಹ್ವಾನವಿದ್ದವರು ಹೋಗಿದ್ದಿರಬಹುದು ಎಂದು ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆ: ಬಿಜೆಪಿ, ಕಾಂಗ್ರೆಸ್ ಗೆ ಪರ್ಯಾಯ ವಿರೋಧ ಪಕ್ಷಗಳನ್ನು ಒಗ್ಗೂಡಿಸುತ್ತದೆಯೇ ಬಿಆರ್ ಎಸ್?ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಹಾಗೂ ಎಡಪಕ್ಷಗಳ ನಾಯಕರಾದ ಪಿಣರಾಯಿ ವಿಜಯನ್, ಡಿ ರಾಜ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಕಾಂಗ್ರೆಸ್ ನಾಯಕರ್ಯಾರೂ ಈ ಸಭೆಯಲ್ಲಿ ಭಾಗಿಯಾಗಿರಲಿಲ್ಲ. ಕೆಸಿಆರ್ ನೇತೃತ್ವದ ಈ ರ್ಯಾಲಿಯನ್ನು 2024 ರ ರಾಷ್ಟ್ರೀಯ ಚುನಾವಣೆಗೆ ಕಾಂಗ್ರೆಸ್ಸೇತರ ವಿಪಕ್ಷಗಳ ಒಕ್ಕೂಟದ ಕಾರ್ಯಕ್ರಮವೆಂದೇ ವಿಶ್ಲೇಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆದ್ಮಿ ಪಕ್ಷ ಚುನಾವಣೆ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

Thu Jan 19 , 2023
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಚುನಾವಣೆ ಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಬಾಬುರೆಡ್ಡಿ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ದೇಶದ ಜನತೆ ಬದಲಾವಣೆ ಬಯಸುತ್ತಿದ್ದಾರೆ ದೆಹಲಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ರವರ ನೇತೃತ್ವದ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಮೊದಲಿಗೆ ದೆಹಲಿಯಲ್ಲಿ ಅಧಿಕಾರ ಹಿಡಿದಿದ್ದು ದೆಹಲಿಯ ಸರ್ಕಾರಿ ಆಸ್ಪತ್ರೆಗಳು ಹಾಗೂ ಸರ್ಕಾರಿ ಶಾಲೆಗಳು ಯಾವುದೇ […]

Advertisement

Wordpress Social Share Plugin powered by Ultimatelysocial