ಸಿದ್ಧಗಂಗಾ ಶ್ರೀಗಳ ಸ್ಮರಣಾರ್ಥ ಫೆಬ್ರವರಿ ತಿಂಗಳಲ್ಲಿ ಸರ್ಕಾರದಿಂದ ದಾಸೋಹ ಕಾರ್ಯಕ್ರಮ.

ಫೆಬ್ರವರಿ ತಿಂಗಳಲ್ಲಿ ಸರ್ಕಾರ ವತಿಯಿಂದ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ದಾಸೋಹ ಕಾರ್ಯಕ್ರಮ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತುಮಕೂರು: ಫೆಬ್ರವರಿ ತಿಂಗಳಲ್ಲಿ ಸರ್ಕಾರ ವತಿಯಿಂದ ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮೀಜಿಗಳ ಹೆಸರಿನಲ್ಲಿ ದಾಸೋಹ ಕಾರ್ಯಕ್ರಮ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ನಡೆದಾಡಿದ ದೇವರು, ತ್ರಿವಿಧ ದಾಸೋಹಿ ಎಂದು ಭಕ್ತರಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ತುಮಕೂರಿನ ಸಿದ್ಧಗಂಗಾ ಮಠದ ಡಾ ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ. ಸಿದ್ಧಗಂಗಾ ಮಠದಲ್ಲಿ ಬೆಳಗ್ಗೆಯಿಂದಲೇ ಪುಣ್ಯ ಸಂಸ್ಮರಣೆ ಕಾರ್ಯಕ್ರಮ ನಡೆಯುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರದ ನಾಯಕರು, ರಾಜ್ಯದ ನಾಯಕರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಇಂದು ಬೆಳಗ್ಗೆ ತುಮಕೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಸಿದ್ಧಗಂಗಾ ಶ್ರೀಗಳು ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದರು. ಅವರ ಸಂಸ್ಮರಣೆಯಲ್ಲಿ ಪುಣ್ಯಸ್ಮರಣೆ ದಿನವನ್ನು ಕಳೆದ ವರ್ಷ ಸರ್ಕಾರ ದಾಸೋಹ ದಿನ ಎಂದು ಘೋಷಿಸಿದೆ.

ಈ ವರ್ಷ ಮುಂದಿನ ತಿಂಗಳು ಸರ್ಕಾರ ದಾಸೋಹ ದಿನ ಆಚರಿಸಲಿದೆ ಎಂದರು. ದಾಸೋಹ ದಿನ ಇಡೀ ರಾಜ್ಯದಲ್ಲಿ ಆಚರಣೆಯಾಗಬೇಕು: ಶ್ರೀಗಳ ಗದ್ದುಗೆಗೆ ನಮಸ್ಕಾರ ಮಾಡಿರುವುದು ಮನಸ್ಸಿಗೆ ಸಂತೋಷವಾಗಿದೆ. ಅವರ ಆಶೀರ್ವಾದ ಈ ನಾಡಿನ ಜನತೆಯ ಮೇಲೆ ಇರುತ್ತದೆ. ಇವತ್ತು ಶ್ರೀಗಳ ದಾಸೋಹ ದಿನ ಬಹಳ ವಿಶಿಷ್ಟವಾಗಿ ಇಡೀ ರಾಜ್ಯದಲ್ಲಿ ಆಚರಣೆಯಾಗಬೇಕು.

ವಿಶೇಷವಾಗಿ ದೊಡ್ಡ ಪ್ರಮಾಣದಲ್ಲಿ ದಾಸೋಹ ಮಾಡುತ್ತಿರುವ ಮಠಮಾನ್ಯಗಳಲ್ಲಿ ಈ ದಿನವನ್ನು ಆಚರಣೆ ಮಾಡಬೇಕೆಂದು ತೀರ್ಮಾನಿಸಲಾಗುವುದು. ಡಾ.ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ: ಸಿದ್ಧಗಂಗಾ ಮಠದಲ್ಲಿ ಅದ್ದೂರಿ ಕಾರ್ಯಕ್ರಮ, ಸಿಎಂ ಸೇರಿ ಗಣ್ಯರು ಭಾಗಿಸಾರ್ವಜನಿಕ ರಜೆ ಇಲ್ಲ: ಯಾವುದೇ ಆಚರಣೆಗಳಿಗೂ ಇನ್ನು ಮುಂದೆ ಸಾರ್ವಜನಿಕ ರಜೆ ಇರುವುದಿಲ್ಲ. ಆದರೆ ಅವರ ಹೆಸರಿನಲ್ಲಿ ಪುಣ್ಯಸ್ಮರಣೆ ಮಾಡುವುದು. ಆಚರಣೆ ಮಾಡಿ ಗೌರವ ಸಲ್ಲಿಸಲಾಗುವುದು. ಕಾಯಕವೇ ಕೈಲಾಸ ಎಂದು ಬಸವಣ್ಣನವರು ಹೇಳಿರುವ ಮಾತಿನಲ್ಲಿ ನಂಬಿಕೆಯಿದೆ ಎಂದರು. ಶಿವಕುಮಾರ ಸ್ವಾಮಿಗಳ ಹುಟ್ಟೂರಲ್ಲಿ ನಿರ್ಮಾಣವಾಗುತ್ತಿರುವ ಪುತ್ಥಳಿ ನಿರ್ಮಾಣ ಕಾರ್ಯ ಸ್ಥಗಿತವಾಗಿರುವುದರ ಬಗ್ಗೆ ತಾವು ಮೊನ್ನೆ ಹೋಗಿ ಪರಿಶೀಲಿಸಿದ್ದು, ಶೀಘ್ರವೇ ಕೆಲಸ ಪುನಾರಂಭವಾಗಲಿದೆ ಎಂದು ಸಿಎಂ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ದರ್ಶನ್ ಫಾರಂಹೌಸ್ ಗೆ ಅರಣ್ಯಾಧಿಕಾರಿಗಳ ದಾಳಿ.

Sat Jan 21 , 2023
ಮೈಸೂರು : ತಿ.ನರಸೀಪುರ ತಾಲ್ಲೂಕಿನ ನಟ ದರ್ಶನ ಅವರಿಗೆ ಸೇರಿದ ಫಾರಂ ಹೌಸ್‌ನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ನಾಲ್ಕು ಪಕ್ಷಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಸಂಜೆ 7 ಗಂಟೆಯ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರವಾನಿಗಿ ಇಲ್ಲದೇ ಸಾಕಿದ್ದ ಶೆಡ್ಯೂಲ್ ಎರಡರಲ್ಲಿ ಬರುವ ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

Advertisement

Wordpress Social Share Plugin powered by Ultimatelysocial