ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಝಣ ಝಣ ಕಾಂಚಾಣದ ಸದ್ದು.

ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್‌ ಜಾರಕಿಹೊಳಿ ವರ್ಸಸ್‌ ಲಕ್ಷ್ಮೀ ಹೆಬ್ಬಾಳ್ಕರ್‌ ನಡುವೆ ಬಿಗ್‌ ಫೈಟ್‌ ಶುರುವಾಗಿದೆ. ಗಿಫ್ಟ್‌ ಪಾಲಿಟಿಕ್ಸ್‌ ಆಯ್ತು ಇದೀಗ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಝಣ ಝಣ ಕಾಂಚಾಣ ಸದ್ದು ಕೇಳಿಬಂದಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಮಾವೇಶಕ್ಕೆ ಜನರನ್ನು ಕರೆದುಕೊಂಡು ಬಂದಿದ್ದ ವಾಹನ ಚಾಲಕರಿಗೆ ಜನರ ಪ್ರಯಾಣದ ಚಾರ್ಚ್​ ಸಮೇತ ಕಂತೆ ಕಂತೆ ಹಣದ ನೋಟುಗಳನ್ನು ನೀಡುತ್ತಿದ್ದಾರೆ. ಇದೀಗ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕೈಯಲ್ಲಿ ಬುಕ್ ಹಿಡಿದು ಪಟ್ಟಿ ಮಾಡಿ ಬೆಂಬಲಿಗರು ವಾಹನ ಚಾಲಕರಿಗೆ ಹಣ ನೀಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಹಾಡುತ್ತಿದೆ.

ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಮಾವೇಶದ ಎರಡು ಕಿಮೀ ಅಂತರದಲ್ಲೇ ಮಿಕ್ಸರ್ ಹಂಚಿಕೆ ಮಾಡಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಹರ್ಷಾ ಶುಗರ್ಸ್ ವತಿಯಿಂದ ಗ್ರಾಮೀಣ ಉತ್ಸವ ಹೆಸರಲ್ಲಿ ಮಿಕ್ಸರ್, ಪಾತ್ರೆ ಹಂಚಿಕೆ ಮಾಡಲಾಗಿದೆ.
ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದಾರೆ. ಅಲ್ಲದೆ ಗಿಫ್ಟ್‌ಗೆ ಪ್ರತಿಯಾಗಿ ಹಣ ನೀಡೋದಾಗಿ ಗೋಕಾಕ್ ಸಾಹುಕಾರ್ ಬಹಿರಂಗ ಘೋಷಣೆ‌ ಮಾಡಿದ್ದಾರೆ.ಟಿಫಿನ್ ಬಾಕ್ಸ್, ಮಿಕ್ಸಿ ಸೇರಿದಂತೆ ಎಲ್ಲಾ 3 ಸಾವಿರದ ಐಟಮ್​ಗಳನ್ನು ಲಕ್ಷ್ಮೀ ಹೆಬ್ಬಾಳ್ಕರ್ ನೀಡುತ್ತಿದ್ದಾರೆ. ಆದ್ರೆ ನಾವು ಆರು ಸಾವಿರ ರೂಪಾಯಿ ನೀಡುತ್ತೇವೆ ವೋಟ್ ಹಾಕಿ ಎಂದು ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ. ಅವರು ಖರ್ಚು ಮಾಡಿದ್ದಕ್ಕಿಂತ ಹತ್ತು ಕೋಟಿ ಹೆಚ್ಚು ಖರ್ಚು ಮಾಡ್ತೀನಿ ಎಂದು ಸಮಾವೇಶದಲ್ಲಿ ರಮೇಶ್ ಜಾರಕಿಹೊಳಿ ಘೋಷಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

Sat Jan 21 , 2023
ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರೀ ವೆಡ್ಡಿಂಗ್ ಶೂಟಿಂಗ್‌ಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಮಹಬೂಬಾಬಾದ್‌ಗೆ ತೆರಳುತ್ತಿದ್ದ ವೇಳೆ ಕೋಟಿಲಿಂಗಲ ಬಳಿ ಕಾರು ಮತ್ತು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಇನ್ನಿಬ್ಬರು ಗಂಭೀರವಾಗಿ […]

Advertisement

Wordpress Social Share Plugin powered by Ultimatelysocial