ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯೊಂದು ಹೊಸ ಸಂಚಲನ ಮೂಡಿಸಿದೆ.

ಹಾಸನ: ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯೊಂದು ಹೊಸ ಸಂಚಲನ ಮೂಡಿಸಿದೆ. ನಾವು ಅಧಿಕಾರಕ್ಕೆ ಬಂದರೆ 10ಕೆಜಿ ಉಚಿತ ಅಕ್ಕಿ ಕೊಡುತ್ತೆವೆ. ಮಹಿಳೆಯರಿಗೆ 2000 ರೂ. ಹಣ ಕೊಡುತ್ತೇವೆ. ಕೊಟ್ಟ ಮಾತಿಗೆ ತಪ್ಪಿದರೆ ರಾಜಕೀಯದಿಂದಲೇ ನಿವೃತ್ತಿ ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.

ಹಾಸನದಲ್ಲಿ ಮಾತನಡಿದ ಸಿದ್ದರಾಮಯ್ಯ, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡಲಿದೆ ಎಂದು ಹೇಳಿದರು.

ಕುಟುಂಬದ ಮಹಿಳೆಯರಿಗೆ 2000 ರೂಪಾಯಿ ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್ ವಿದ್ಯುತ್ ಕೊಡುತ್ತೇವೆ. ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ. ಮಾತು ತಪ್ಪಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಘೋಷಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜಾತ್ರೆಯಲ್ಲಿ ಚಿನ್ನಾಭರಣ ದೋಚಿದ್ದ ನಾಲ್ವರು ಕಳ್ಳಿಯರ ಬಂಧನ.

Sun Jan 22 , 2023
ಪಟ್ಟಣದಲ್ಲಿ ಇತ್ತೀಚೆಗೆ ಜರುಗಿದ ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಚಿನ್ನಾಭರಣ ದೋಚಿದ್ದ ನಾಲ್ವರು ಕಳ್ಳಿಯರನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ರಾಜ್ಯದ ಔರಂಗಾಬಾದ್ ಜಿಲ್ಲೆಯ ನಾಲ್ವರು ಮಹಿಳೆಯರನ್ನು ಬಂಧಿಸಿ 14 ಬಂಗಾರ ತಾಳಿ, 60 ಗುಂಡುಗಳು ಸೇರಿದಂತೆ 1.5 ಲಕ್ಷ ರೂಪಾಯಿ ಮೌಲ್ಯದ 35 ಗ್ರಾಂ.ಚಿನ್ನಾಭರಣ ಜಪ್ತಿ ಮಾಡಿಕೊಡಿ ಆರೋಪಿ ಮಹಿಳೆಯರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡಿದ್ದ 5-6 ಜನ ಮಹಿಳೆಯರು ಬಂಗಾರದ ಮಾಂಗಲ್ಯ ಕಳವಾದ ಬಗ್ಗೆ ಅಫಜಲಪುರ ಪೊಲೀಸ್ […]

Advertisement

Wordpress Social Share Plugin powered by Ultimatelysocial