ಮುಖ್ಯಮಂತ್ರಿ ಆಸೆಗೆ ಸಿದ್ಧಾಂತ ಬಿಟ್ಟವರು : ಸಿದ್ದು ವಿರುದ್ಧ ಹೆಚ್‌ಡಿಕೆ ಕಿಡಿ.

ಮುದ್ದೇಬಿಹಾಳ: ಕಾಂಗ್ರೆಸ್-ಜಾ.ದಳ ಮೈತ್ರಿ ಸರ್ಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು, ಜನರು ಕಷ್ಟ ಹೇಳಿಕೊಂಡು ನಮ್ಮ ಬಳಿ ನಿರಂತರವಾಗಿ ಬರುತ್ತಾರೆ. ಅನಗತ್ಯವಾಗಿ ಜಾ.ದಳ ಪಕ್ಷದ ಬಗ್ಗೆ ಮಾತನಾಡಬೇಡಿ ಎಂದು ತರಾಟೆಗೆ ತೆಗೆದುಕೊಂಡರು.
ಮುಖ್ಯಮಂತ್ರಿ ಆಸೆಗಾಗಿ ಪಕ್ಷ ಬಿಟ್ಟು ಹೋಗಿದ್ದು ನೆನಪು ಇದೇಯೇ ನಿಮಗೆ? ನಿಮ್ಮಿಂದ ನಾನು ಪಾಠವನ್ನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ. ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರು ಕಟ್ಟಿದ ಪಕ್ಷವನ್ನು ಉಳಿಸಿಕೊಂಡು ಹೊರಟಿದ್ದೇವೆ. ಅಂಥ ಪಕ್ಷವನ್ನು, ಅವರ ಸಿದ್ದಾಂತವನ್ನು ಗಾಳಿಗೆ ತೂರಿ ಮುಖ್ಯಮಂತ್ರಿ ಕುರ್ಚಿ ಹಿಂದೆ ಓಡಿ ಹೋದವರು ಯಾರು? ನಿಮ್ಮ ಯೋಗ್ಯತೆ ಏನು ಅಂತಾ ಗೊತ್ತಿದೆ ಎಂದು ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಲು ನೀವು ಏನು ಮಾಡಿದಿರಿ ಎನ್ನುವುದು ಗೊತ್ತಿದೆ. ಎಲ್ಲಿ ಕೂತು,ಯಾರ ಜತೆ ಕೂಡಿ ಕುತಂತ್ರ ಮಾಡಿದಿರಿ ಎನ್ನುವುದು ನನಗೆ ತಿಳಿದಿದೆ. ಬಿಜೆಪಿಗೆ ಅಧಿಕಾರ ಹೋಗಬಾರದು ಎಂದು ನಿಮ್ಮ ಪಕ್ಷದ ವರಿಷ್ಠರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು. ಎಐಸಿಸಿದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಇದೆಲ್ಲಾ ಗೊತ್ತಿಲ್ಲವೆ? ಆಗ ನೀವು ಎಲ್ಲಿದ್ದಿರಿ? ಎಂದು ಕಿಡಿಕಾರಿದರು.
ನಾನು ಸದಾ ಜನಗಳ ಮಧ್ಯೆ ಇರುವ ಸಾಮಾನ್ಯ ವ್ಯಕ್ತಿ. ಆದರೆ ನೀವು ಸಂಜೆ 6 ಗಂಟೆಯಾದ ಮೇಲೆ ಯಾರ ಕೈಗೆ ಸಿಗುತ್ತಿದ್ದಿರಿ? ಮಧ್ಯಾಹ್ನ ಊಟಕ್ಕೆಂದು ಹೋದರೆ ನಾಪತ್ತೆ ಆಗಿಬಿಡುತ್ತಿದ್ದಿರಿ. ಈ ಬಗ್ಗೆ ಕೂಡ ನೀವು ಭಾಷಣ ಮಾಡಬೇಕಲ್ಲವೇ ಎಂದು ಪ್ರಶ್ನೆ ಮಾಡಿದರು.
ಪಂಚರತ್ನ ರಥಯಾತ್ರೆ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ ನಿಮ್ಮದು ಪ್ರಜಾಧ್ವನಿ ಅಲ್ಲ. ಅಧಿಕಾರಕ್ಕಾಗಿ ನಡೆಸುತ್ತಿರುವ ಧ್ವನಿ ಎಂದು ಟೀಕಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಟಿಎಂ ಕಳವು ಯತ್ನ ಬಾರ್ ಸಪ್ಲೈಯರ್ ಸೆರೆ.

Sun Jan 22 , 2023
ಎಟಿಎಂ ಕಳವು ಪ್ರಯತ್ನ ಪ್ರಕರಣದ ಖತರ್ನಾಕ್ ಖದೀಮನೊಬ್ಬನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಮಾಕ್ಷಿಪಾಳ್ಯದ ರಂಗನಾಥಪುರದ ಕರಿಚಿತ್ತಪ್ಪ.ಕೆ.(೨೧) ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಕಳೆದ ಜ.೧೪ರಂದು ರಾತ್ರಿ ೧೧.೩೦ ಬೆಳಗ್ಗೆ ೯ ರ ವೇಳೆ ಮಾಗಡಿ ಮುಖ್ಯರಸ್ತೆ ಕಾಮಾಕ್ಷಿಪಾಳ್ಯ ಜಯಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿರುವ ಆಕ್ಸಿಸ್ ಬ್ಯಾಂಕ್ ಎಟಿಎಂನ್ನು ಹೊಡೆದು ಕಳವು ಮಾಡಲು ಪ್ರಯತ್ನಿಸಿದ ಬಗ್ಗೆ ಜಗ್ಗೇಶ್ ನೀಡಿದ ದೂರು ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಲೋಹಿತ್ ಮತ್ತವರ […]

Advertisement

Wordpress Social Share Plugin powered by Ultimatelysocial