ಫೋಷಕರ ಎದುರಲ್ಲೇ ಕಂದಮ್ಮಗಳ ದೇಹ ಛಿದ್ರ : ಅವಳಿ ಮಕ್ಕಳು ಸಾವು

ಹಾಸನ: ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮಕ್ಕಳೊಂದಿಗೆ ಇದ್ದ ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವಳಿ ಮಕ್ಕಳಾದ ಮೂರು ವರ್ಷದ ಪ್ರಣವ್ ಮತ್ತು ಪ್ರಣತಿ ಮೃತಪಟ್ಟರೆಂದು ಹೇಳಲಾಗಿದೆ. ಶಿವಾನಂದ್ ಮತ್ತು ಅವರ ಪತ್ನಿ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಹಾಸನದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಲಾರಿ ಚಕ್ರಕ್ಕೆ ಸಿಲುಕಿ ಮಕ್ಕಳ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಪರಾರಿಯಾಗಲೆತ್ನಿಸಿದ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದೆ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಹಾಸನ ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಪನಾಮಾ ಪೇಪರ್ಸ್​ ಲೀಕ್ ಪ್ರಕರಣ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತೆ ಸಂಕಷ್ಟ

Mon Dec 20 , 2021
ಪನಾಮಾ ಪೇಪರ್ಸ್​ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್  ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ  ಸೋಮವಾರ ಸಮನ್ಸ್ ಜಾರಿ ಮಾಡಿದೆ.ಜಾರಿ ನಿರ್ದೇಶಾನಾಲಯ  ಸಂಸ್ಥೆಯು ತನಿಖೆ ನಡೆಸುತ್ತಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ನಟಿ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.ಪನಾಮಾ ಪೇಪರ್ಸ್’ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಈ ಸಮನ್ಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಿದೆ. […]

Advertisement

Wordpress Social Share Plugin powered by Ultimatelysocial