ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೆಲವೇ ವಾರಗಳ ಹಿಂದಿನ ರಷ್ಯಾ ಹಾಗೂ ಉಕ್ರೇನ್ ಭೇಟಿಯ ನಂತರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಹತ್ವದ ಘೋಷಣೆ ಮಾಡಿದ್ದಾರೆ. ಭಾರತ, ಚೀನಾ ಹಾಗೂ ಬ್ರೇಜಿಲ್ ರಾಷ್ಟ್ರಗಳು ರಷ್ಯಾ-ಉಕ್ರೇನ್ ಯುದ್ಧದಲ್ಲಿ ಸಂಧಾನಕಾರರಾಗಿ ಮಧ್ಯಸ್ಥಿಕೆ ವಹಿಸಬಹುದು ಎಂದು ಗುರುವಾರ ಹೇಳಿದ್ದಾರೆ. ರಾಯಿಟರ್ಸ್ ವರದಿಯ ಪ್ರಕಾರ ಪುಟಿನ್ ರಷ್ಯಾದ ವ್ಲಾಡಿವೋಸ್ಟಾಕ್ ನಗರದಲ್ಲಿ ಈಸ್ಟರ್ನ್ ಎಕನಾಮಿಕ್ ಫೋರಂನಲ್ಲಿನ ಪ್ರಶ್ನೋತ್ತರ ಅವಧಿಯಲ್ಲಿ ಈ ಹೇಳಿಕೆ ನೀಡಿದ್ದಾರೆ.