ಉಚಿತ ವಿದ್ಯುತ್ ಭರವಸೆಯು ‘ಬೇಜವಾಬ್ದಾರಿ ಮತ್ತು ತರ್ಕಹೀನ’: ಬಸವರಾಜ ಬೊಮ್ಮಾಯಿ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ಮನೆಗಳಿಗೆ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಪ್ರತಿಪಕ್ಷ ಕಾಂಗ್ರೆಸ್ ನೀಡಿದ ಚುನಾವಣಾ ಭರವಸೆಯನ್ನು ‘ಬೇಜವಾಬ್ದಾರಿ ಮತ್ತು ತರ್ಕಹೀನ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದರು. ಹುಬ್ಬಳ್ಳಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ಮನೆಗಳಿಗೆ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಪ್ರತಿಪಕ್ಷ ಕಾಂಗ್ರೆಸ್ ನೀಡಿದ ಚುನಾವಣಾ ಭರವಸೆಯನ್ನು ‘ಬೇಜವಾಬ್ದಾರಿ ಮತ್ತು ತರ್ಕಹೀನ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದರು.
ಚುನಾವಣಾ ಸ್ಪರ್ಧೆಯಲ್ಲಿ ಅವರು ಎಷ್ಟು ಕೆಳಮಟ್ಟದಲ್ಲಿದ್ದಾರೆ ಎಂಬುದನ್ನು ಈ ಭರವಸೆಯು ತೋರಿಸಿದೆ ಎಂದರು. ‘ಇದು ಬೇಜವಾಬ್ದಾರಿ ಮತ್ತು ತರ್ಕಹೀನ ನಿರ್ಧಾರವಾಗಿದೆ. ಅವರು (ಕಾಂಗ್ರೆಸ್) ಹತಾಶರಾಗಿದ್ದಾರೆ. ಅದಕ್ಕಾಗಿಯೇ ಅವರು ಈ ರೀತಿ ಭರವಸೆ ನೀಡುತ್ತಿದ್ದಾರೆ.

ಕಾಂಗ್ರೆಸ್ನಿಂದ ಇಂತಹ ಇನ್ನೂ ಅನೇಕ ಘೋಷಣೆಗಳನ್ನು ನಿರೀಕ್ಷಿಸಲಾಗಿದೆ’ ಎಂದು ಬೊಮ್ಮಾಯಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಬುಧವಾರ ಚಿಕ್ಕೋಡಿಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಣದುಬ್ಬರದಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿಗೆ ಬೆಳಕು ನೀಡಲು ಪ್ರತಿ ಮನೆಗೆ 200 ಯೂನಿಟ್ವರೆಗೆ ಉಚಿತವಾಗಿ ವಿದ್ಯುತ್ ನೀಡಲಿದೆ ಎಂದು ಹೇಳಿದ್ದರು .ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್’ಸುಳ್ಳು ಭರವಸೆ ನೀಡಿ ಚುನಾವಾಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಬಯಸುತ್ತಿದೆ ಎಂದ ಬೊಮ್ಮಾಯಿ, ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಆಡಳಿತ ನಡೆಸಿದ ಪಕ್ಷಕ್ಕೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದು ಸಲ್ಲದು’ ಎಂದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೊಸ (ರಾಜಕೀಯಕ್ಕೆ) ಅದೇ ಹೇಳಿಕೆ ನೀಡಿದ್ದರೆ ಅದು ಸ್ವೀಕಾರಾರ್ಹವಾಗಿರುತ್ತಿತ್ತು. ಕಾಂಗ್ರೆಸ್ ಸರ್ಕಾರವು ಆರು ಗಂಟೆಗಳ ಕಾಲ (ದಿನಕ್ಕೆ) ನಿರಂತರ ವಿದ್ಯುತ್ ಪೂರೈಕೆ ಮಾಡಲು ಕೂಡ ವಿಫಲವಾಗಿರುವಾಗ, ಅವರು ಹೇಗೆ ಉಚಿತ ವಿದ್ಯುತ್ ನೀಡುತ್ತಾರೆ? ಎಂದು ಮುಖ್ಯಮಂತ್ರಿ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ವಿರುದ್ಧ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿದ್ದಾರೆ.

Thu Jan 12 , 2023
ಬಿಜೆಪಿ  ವಿರುದ್ಧ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್  ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿದ್ದಾರೆ. ಸ್ಯಾಂಟ್ರೋ ರವಿ ತಾನು ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡಿದ್ದ ಎಂದು ಮಾಧ್ಯಮವೊಂದರಲ್ಲಿ ಪ್ರಕಟವಾಗಿತ್ತು. ಬೆಂಗಳೂರು: ಬಿಜೆಪಿ (BJP) ವಿರುದ್ಧ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್   ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿದ್ದಾರೆ. ಸ್ಯಾಂಟ್ರೋ ರವಿ ತಾನು ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡಿದ್ದ ಎಂದು ಮಾಧ್ಯಮವೊಂದರಲ್ಲಿ ಪ್ರಕಟವಾಗಿತ್ತು. ಇದನ್ನು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ನಾನು […]

Advertisement

Wordpress Social Share Plugin powered by Ultimatelysocial