ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಮುಂದಾದ ಪ್ರಮೋದ್ ಮುತಾಲಿಕ್ ವಶಕ್ಕೆ ಪಡೆದು ವಾಪಸ್ ಕಳಿಸಿದ ಪೊಲೀಸರು

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಲು ಮುಂದಾದ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಜಿಲ್ಲೆಯ ಗಡಿಭಾಗವಾದ ಹೆಜಮಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದು ವಾಪಸ್ ಕಳುಹಿಸಿದ್ದಾರೆ.
ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
ಸುಳ್ಯದಲ್ಲಿ ಹತ್ಯೆಯಾಗಿರುವ ಪ್ರವೀಣ್ ಮನೆಗೆ ಭೇಟಿ ನೀಡುವ ಉದ್ದೇಶದಿಂದ ಮತಾಲಿಕ್ ದ.ಕ. ಜಿಲ್ಲೆಗೆ ಆಗಮಿಸುವ ಬಗ್ಗೆ ಗುರುವಾರವೇ ಮಾಹಿತಿಯಿತ್ತು. ಅವರು ಆಗಮಿಸಿದ್ದಲ್ಲಿ ನಗರದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆಗಸ್ಟ್ 3ರವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ದ.ಕ. ಜಿಲ್ಲೆ ಪ್ರವೇಶಿಸುವುದನ್ನು, ಸಾರ್ವಜನಿಕವಾಗಿ ಹೇಳಿಕೆ ನೀಡುವುದಕ್ಕೆ ನಿಷೇಧ ವಿಧಿಸಿ ಆದೇಶ ಹೊರಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಉಡುಪಿ ಜಿಲ್ಲೆಗೆ ಆಗಮಿಸಿದ್ದ ಪ್ರಮೋದ್ ಅಲ್ಲಿಂದ ಸುಳ್ಯದಲ್ಲಿ ಹತ್ಯೆಯಾದ ಪ್ರವೀಣ್ ಮನೆಗೆ ಆಗಮಿಸುವ ಉದ್ದೇಶದಿಂದ ಹೆಜಮಾಡಿ ಮೂಲಕ ಪ್ರವೇಶಿಸಲು ಮುಂದಾಗಿದ್ದಾರೆ. ಈ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದು ವಾಪಸ್ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಂಗಳೂರಲ್ಲಿ ಶಾಸಕ ಯು ಟಿ ಖಾದರ್ ಸುದ್ದಿಗೋಷ್ಠಿ

Fri Jul 29 , 2022
ಕಳೆದ ಹತ್ತು ದಿನಗಳಿಂದ ನಮ್ಮ ಜಿಲ್ಲೆಯಲ್ಲಿ ಮೂರು ಯುವಕರು ಹತ್ಯೆಗೀಡಾಗಿದ್ದಾರೆ ಸಮಾಜ ಘಾತುಕರು ಕೋಮುವಾದಿಗಳಿಂದ ಹತ್ಯೆ ಆಗಿದ್ದಾರೆ ಸಮಾಜದ ಶಕ್ತಿಯಿಂದ ಕೊಲ್ಲಲುಪಟ್ಟ ಮೂರು ಕೊಲೆ ಖಂಡಿಸುತ್ತೇವೆ ಸರಣಿ ಕೊಲೆಯಿಂದ ದಕ್ಷಿಣ ಕನ್ನಡಕ್ಕೆ ಕೆಟ್ಟ ಹೆಸರು ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಮೂರು ಘಟನೆ ಗಂಭೀರವಾಗಿ ಪರಿಗಣಿಸಿ ವಿಶೇಷ ತನಿಖೆ ನಡೆಸಿ ನೈಜ ಆರೋಪಿಗಳು ಯಾರೇ ಇರಲಿ, ಸಂಘಟನೆ ಇರಲಿ ಪೊಲೀಸ್ ಇಲಾಖೆ ಮಟ್ಟ ಹಾಕಬೇಕು ರಾಜಕೀಯಕ್ಕಾಗಿ ನಿರಪರಾಧಿಗಳುಗೆ […]

Advertisement

Wordpress Social Share Plugin powered by Ultimatelysocial