ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ..?

ವಾಹನ ಸವಾರರೇ ಗಮನಿಸಿ; ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ..?

ಇಂದು ಕೂಡ ಪೆಟ್ರೋಲ್​-ಡೀಸೆಲ್​ ಬೆಲೆ ಸ್ಥಿರವಾಗಿದ್ದು, ಯಾವುದೇ ಪ್ರಮುಖ ನಗರಗಳಲ್ಲೂ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಆದರೆ ಅಂತರಾಷ್ಟೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾ ತೈಲದ ಬೆಲೆ ಇಳಿಕೆಯ ಹಾದಿ ಹಿಡಿದಿದೆ. ಕಳೆದ ನವೆಂಬರ್​ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್ ​, ಡೀಸೆಲ್​​ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದೆ.

ಅಂದಿನಿಂದಲೂ ಭಾರತದ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಆದರೆ ಕೆಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್​ ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ.ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.43 ರೂಪಾಯಿ ಇದೆ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ.

ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

BANGLORE : ದಕ್ಷಿಣ ವಲಯದಲ್ಲಿ ಇಂದು & ನಾಳೆ ವಿದ್ಯುತ್ ವ್ಯತ್ಯಯ

Fri Dec 17 , 2021
ಬೆಂಗಳೂರು: ಬೆಂಗಳೂರಿನ ದಕ್ಷಿಣ ವಲಯದಲ್ಲಿ ಇಂದು & ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಲವು ದಿನಗಳಿಂದ ನಿರಂತರವಾಗಿ ಕಾಮಗಾರಿಗಳ ಹೆಸರಿನಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿದ್ದು, ಇದೀಗ ಮತ್ತೆ ಡಿಸೆಂಬರ್ 17 ಹಾಗೂ 18ರಂದು ವಿದ್ಯುತ್ ಸಂಪರ್ಕ ಕಡಿತ ಮಾಡಲು ಬೆಸ್ಕಾಂ ಮುಂದಾಗಿದೆ. ದಕ್ಷಿಣ ಭಾಗದ ವಸಂತ ವಲ್ಲಬ ನಗರ, ಶಾರದಾ ನಗರ, ಬಿಕಿಸಿಪುರ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಜೆಪಿ ನಗರ 6ನೇ […]

Advertisement

Wordpress Social Share Plugin powered by Ultimatelysocial