ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ “ಪ್ರಾರಂಭ”.

 

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ “ಪ್ರಾರಂಭ” ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ.

ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಯನ್ನು ಮನು ಕಲ್ಯಾಡಿ ಅವರೆ ಬರೆದಿದ್ದಾರೆ.

ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಗದೀಶ್ ಕಲ್ಯಾಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರವಿ ವಡ್ಡೇರಹಳ್ಳಿ ಈ ಚಿತ್ರದ ಸಹ ನಿರ್ಮಾಪಕು. ಪ್ರಜ್ವಲ್ ಪೈ ಸಂಗೀತ ನಿರ್ದೇಶನ, ಸುರೇಶ್ ಬಾಬು ಛಾಯಾಗ್ರಹಣ, ವಿಜಯ್ ಸಂಕಲನ ಹಾಗೂ ಥ್ರಿಲ್ಲರ್ ‌ಮಂಜು, ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಜಿಎಫ್ 2 ದಿನ 8 ಬಾಕ್ಸ್ ಆಫೀಸ್ ಕಲೆಕ್ಷನ್:ಯಶ್ ಅಭಿನಯದ ಚಿತ್ರ ಈಗ 7 ನೇ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಲನಚಿತ್ರವಾಗಿದೆ!

Fri Apr 22 , 2022
ಯಶ್ ಅವರ ಇತ್ತೀಚಿನ ಬಿಡುಗಡೆ ಕೆಜಿಎಫ್ 2 ರೋಲ್‌ನಲ್ಲಿದೆ. ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ 164.20 ಕೋಟಿ ರೂ ಖಾತೆ ತೆರೆಯುವ ಮೂಲಕ ಚಿತ್ರವು ತನ್ನ ಸಂಗ್ರಹದ ಹುಡುಕಾಟವನ್ನು ಪ್ರಾರಂಭಿಸಿತು. ಚಿತ್ರವು ಈಗ 7 ದಿನಗಳ ಥಿಯೇಟರ್ ರನ್ ಅನ್ನು ಪೂರ್ಣಗೊಳಿಸಿದೆ ಮತ್ತು ಈಗಾಗಲೇ ಎರಡನೇ ವಾರಕ್ಕೆ ಪ್ರವೇಶಿಸಿದೆ ಎಂದು ನಿಮಗೆ ತಿಳಿಸೋಣ. ಸರಿ, ಅದರ 7-ದಿನಗಳ ಥಿಯೇಟ್ರಿಕಲ್ ರನ್ನೊಂದಿಗೆ, KGF 2 ವಿಶ್ವಾದ್ಯಂತ ಬಾಕ್ಸ್ ಆಫೀಸ್ನಲ್ಲಿ 719.30 ಕೋಟಿ ರೂ. ಆಕ್ಷನ್‌ನ […]

Advertisement

Wordpress Social Share Plugin powered by Ultimatelysocial