ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್​ ಸಿಂಹ ಕಿಡಿಕಾರಿದ್ದಾರೆ.

ಮೈಸೂರು: ದನಗಳ್ಳರಿಗೆ ಎರಡೇಟು ಬಿದ್ದರೆ ಆಕಾಶ-ಭೂಮಿ ಒಂದಾಗುವ ರೀತಿ ಬೊಬ್ಬೆ ಹಾಕುವವರು ಈಗ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ? ಬ್ರದರ್ ಬ್ರದರ್ ಎಂದು ಹೇಳುವ ಕಾಂಗ್ರೆಸ್ ನಾಯಕ ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಟ್ವೀಟ್ ಮಾಡಿ ಮನೆಯೊಳಗೆ ಕುಳಿತರೆ ಮುಗೀತಾ ನಿಮ್ಮ ಕೆಲಸ?

ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್​ ಸಿಂಹ ಕಿಡಿಕಾರಿದ್ದಾರೆ.

ಪ್ರವಾದಿ ಮುಹಮ್ಮದ್​ ವಿರುದ್ಧ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಬಿಜೆಪಿ ನಾಯಕಿ ನೂಪುರ್​ ಶರ್ಮಾರನ್ನು ಬೆಂಬಲಿಸಿ, ಪೋಸ್ಟ್​ ಹಾಕಿದ್ದ ಹಿಂದು ವ್ಯಕ್ತಿ ಕನ್ಹಯ್ಯ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದು, ಇಡೀ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಹಿಂದು ವ್ಯಕ್ತಿ ಹತ್ಯೆಯಾದರೂ ರಾಜ್ಯ ಕಾಂಗ್ರೆಸ್​ ನಾಯಕರು ಸುಮ್ಮನಿದ್ದಾರೆ ಎಂದು ಆಕ್ರೋಶ ಹೊರಹಾಕಿದ ಪ್ರತಾಪ್​ ಸಿಂಹ, ಕರ್ನಾಟಕದಲ್ಲೂ ಕಾಂಗ್ರೆಸ್​ಗೆ ಅಧಿಕಾರ ಕೊಟ್ಟರೆ ರಾಜಸ್ಥಾನದ ಘಟನೆ ಇಲ್ಲಿಯೂ ಆಗುತ್ತೆ. ಇದು ಕರ್ನಾಟಕದ ಜನರಿಗೆ ಎಚ್ಚರಿಕೆ ಗಂಟೆ. ಟಿಪ್ಪು ಸಂತತಿಗಳ ಬಗ್ಗೆ ಮತದಾರರು ಜಾಗೃತರಾಗಿರಬೇಕು. ರಾಜಸ್ಥಾನ ಸರ್ಕಾರದ ಮೇಲೆ ನನಗೆ ವಿಶ್ವಾಸವಿಲ್ಲ. ಹಿಂದುಗಳ ಧ್ವನಿ ಅಡಗಿಸಲು ಈ ಕೃತ್ಯ ನಡೆದಿದೆ. ಇದರ ಹಿಂದೆ ಕಾಂಗ್ರೆಸ್ ಇದೆ. ಕಾಂಗ್ರೆಸ್​ನವರ ಮುಸ್ಲಿಂ ಓಲೈಕೆಯಿಂದ ಈ ರೀತಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

‘ಸಿದ್ದರಾಮಯ್ಯ ಸರ್, ರಾಜಸ್ಥಾನ ಸರ್ಕಾರಕ್ಕೆ ಸ್ವಲ್ಪ ಬುದ್ಧಿ ಹೇಳುತ್ತೀರಾ? ಮುಸ್ಲಿಮರೆಲ್ಲರೂ ಭಯೋತ್ಪಾದಕರಲ್ಲ. ಆದರೆ, ಭಯೋತ್ಪಾದಕರೆಲ್ಲಾ ಮುಸ್ಲಿಮರು. ಒಳ್ಳೆಯ ಮುಸ್ಲಿಮರು ಯಾಕೆ ಈಗ ಮಾತಾಡ್ತಿಲ್ಲ? ಒಳ್ಳೆಯ ಮುಸ್ಲಿಮರು ಮೌನವಾಗಿ ಇದಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರಾ? ಇನ್ನೂ ನೀವು ಧ್ವನಿ ಎತ್ತದಿದ್ದರೆ ನಿಮ್ಮ ಮೇಲೂ ಅನುಮಾನ ಮೂಡುತ್ತೆ. ಈಗ ಮೌಲಿಗಳು, ಮುಲ್ಲಾಗಳು ಎಲ್ಲಿ ಹೋಗಿದ್ದಾರೆ? ಈ ಕೊಲೆ ತಪ್ಪು ಅಂತಾ ಆರೋಪಿಗಳ ವಿರುದ್ಧ ಫತ್ವಾ ಹೊರಡಿಸಲಿ ನೋಡೋಣಾ? ಶುಕ್ರವಾರ ಪ್ರಾರ್ಥನೆಯಾದ ನಂತರ ಕಲ್ಲು ತೂರುವಂತೆ ಹೇಳುವುದು ನಿಮ್ಮ ಕೆಲಸವಾ? ಎಂದು ಪ್ರತಾಪ್​ ಸಿಂಹ ಕಿಡಿಕಾರಿದ್ದಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ತ್ರಿವಿಕ್ರಮ' ಸಿನಿಮಾ ಪ್ರದರ್ಶನದ ಕುರಿತು ವಿಕ್ರಮ್ ರವಿಚಂದ್ರನ್ ಮಾತು

Wed Jun 29 , 2022
ರವಿಚಂದ್ರನ್ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಚಿತ್ರ ತ್ರಿವಿಕ್ರಮ ಚಿತ್ರಕ್ಕೆ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಸಹನಮೂರ್ತಿ ನಿರ್ದೇಶನದ ರೊಮ್ಯಾಂಟಿಕ್ ಸಿನಿಮಾ ಜೂನ್ 10 ರಂದು ಬಿಡುಗಡೆಯಾಗಿತ್ತು. ಕರ್ನಾಟಕದ ಕೆಲವು ಭಾಗಗಳಲ್ಲಿ ಪಾಸಿಟಿವ್ ರೆಸ್ಪಾನ್ಸ್ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಕ್ರೀನ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಹೊಸಬರಿಗೆ ಇದೊಂದು ಉತ್ತಮ ಆರಂಭ ಎಂದು ಸಂತಸ ವ್ಯಕ್ತಪಡಿಸಿರುವ ವಿಕ್ರಂ, ಕುಟುಂಬ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುವುದನ್ನು ನೋಡುವುದು ಅಪಾರ ಖುಷಿ ತಂದಿದೆ ಎಂದಿದ್ದಾರೆ. ನಾನು ವಿವಿಧ […]

Advertisement

Wordpress Social Share Plugin powered by Ultimatelysocial