ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ನಾಳೆ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.

ಇಂದು ರಾತ್ರಿ ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ತಂಗಲಿದ್ದಾರೆ. ಫೆಬ್ರವರಿ 13 ರ ಸೋಮವಾರ ಬೆಳಗ್ಗೆ 9.30 ಕ್ಕೆ ಐದು ದಿನಗಳ ಕಾಲ ನಡೆಯುವ ಏರೋ ಇಂಡಿಯಾ-2023ರ 14 ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.

ಪ್ರಧಾನಿ ಮೋದಿ ಇಂದು ರಾಜಸ್ಥಾನದ ಪ್ರವಾಸ ಮುಗಿಸಿ ಜೈಪುರ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ರಾತ್ರಿ 7.40 ಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 9.30 ಕ್ಕೆ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೊಳಕಾಲ್ಮೂರಿನಿಂದ ಸ್ಪರ್ಧಿಸಲಾರೆ: ಸಚಿವ ಶ್ರೀರಾಮುಲು ಹೇಳಿಕೆ

Sun Feb 12 , 2023
    ಮೊಳಕಾಲ್ಮೂರು: ಸಾರಿಗೆ-ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಈ ಬಾರಿ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಕ್ಷೇತ್ರಕ್ಕೆ ಬರಲು ದೂರ ಮತ್ತು ಕಷ್ಟವಾಗುತ್ತಿದೆ. ಹಾಗಾಗಿ ಬಳ್ಳಾರಿ ಜಿಲ್ಲೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು. ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಈ ಕ್ಷೇತ್ರದ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ. ಆದರೆ ಬಳ್ಳಾರಿ ಜಿಲ್ಲೆಯಲ್ಲೇ […]

Advertisement

Wordpress Social Share Plugin powered by Ultimatelysocial