ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆ “ದೇಶದಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಬೇಕು,

ನವದೆಹಲಿ, ಫೆಬ್ರವರಿ 9: ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆ “ದೇಶದಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಬೇಕು,” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.ಭಾರತದಲ್ಲಿ ಸಂವಿಧಾನವು ಹೆಣ್ಣುಮಕ್ಕಳಿಗೂ ಸಮಾನ ಹಕ್ಕನ್ನು ನೀಡಿದೆ.ಮಹಿಳೆಯರು ಯಾವ ಬಟ್ಟೆಯನ್ನು ಹಾಕಿಕೊಳ್ಳಬೇಕು ಎಂಬುದನ್ನು ನಿರ್ಧರಿಸುವುದು ಅವರ ವೈಯಕ್ತಿಕ ಹಕ್ಕು ಎನ್ನುವುದರ ಮೂಲಕ ಹಿಜಾಬ್ ಧರಿಸುವುದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.ಸಿಧು ರನ್ನು ಹೊಗಳುವ ಭರದಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆ ಫುಲ್ ಟ್ರೋಲ್  “ಹೆಣ್ಣುಮಕ್ಕಳು ಬಿಕಿನಿಯಾದರೂ ಹಾಕಲಿ, ಮುಸುಕಾದರೂ ಧರಿಸಲಿ. ಜೀನ್ಸ್ ಬಟ್ಟೆಯೇ ಆಗಿರಲಿ ಅಥವಾ ಹಿಜಾಬ್ ಆದರೂ ಆಗಿರಲಿ. ತಾನು ಏನು ಧರಿಸಬೇಕು ಎಂಬುದನ್ನು ನಿರ್ಧರಿಸುವುದು ಮಹಿಳೆಯ ಹಕ್ಕು. ಭಾರತೀಯ ಸಂವಿಧಾನವೇ ಮಹಿಳೆಯರಿಗೆ ಈ ಹಕ್ಕನ್ನು ನೀಡಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಿ,” ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.ಹಿಜಾಬ್ ವಿವಾದದ ಬಗ್ಗೆ ಮಲಾಲ ಟ್ವೀಟ್:”ಶಿಕ್ಷಣ ಮತ್ತು ಹಿಜಾಬ್ ನಡುವೆ ಯಾವುದು ಬೇಕು ಎಂಬ ಬಗ್ಗೆ ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜುಗಳು ನಮ್ಮನ್ನು ಒತ್ತಾಯಿಸುತ್ತಿವೆ. ಹೆಣ್ಣುಮಕ್ಕಳು ಹಿಜಾಬ್‌ನಲ್ಲಿ ಶಾಲೆಗೆ ಬರಬಾರದು ಎಂದು ನಿರಾಕರಿಸುತ್ತಿರುವ ಬೆಳವಣಿಗೆಯು ತೀರಾ ಭಯಾನಕವಾಗಿದೆ. ಮಹಿಳೆಯರು ಧರಿಸುವ ಬಟ್ಟೆಯು ಹೆಚ್ಚಾಗಿರಬೇಕು ಅಥವಾ ಕಡಿಮೆ ಆಗಿರುವುದಕ್ಕೆ ಸಂಬಂಧಿಸಿದಂತೆ ಆಕ್ಷೇಪಗಳು ಮುಂದುವರಿಯುತ್ತಿವೆ. ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು,” ಎಂದು ಮಲಾಲ ಟ್ವೀಟ್ ಮಾಡಿದ್ದಾರೆ.ಕರ್ನಾಟಕದಲ್ಲಿ ತಾರಕ್ಕೇರಿದ ಹಿಜಾಬ್ ವಿವಾದ:ಕರ್ನಾಟಕದಲ್ಲಿ ಹೊತ್ತಿಕೊಂಡಿರುವ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದದ ಕಿಡಿ ರಾಜ್ಯ-ರಾಷ್ಟ್ರದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಯನ್ನು ಹುಟ್ಟು ಹಾಕುತ್ತಿದೆ. ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ತಿಳಿಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ಮೂರು ದಿನಗಳವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿದ ಘಟನೆ ನಂತರ ರಾಜ್ಯದಲ್ಲಿ ವಿವಾದ ಹುಟ್ಟಿಕೊಂಡಿತು. ಕಳೆದ ತಿಂಗಳು ಹುಟ್ಟಿಕೊಂಡ ವಿವಾದ ಮಂಗಳವಾರದ ಹೊತ್ತಿಗೆ ರಾಜ್ಯಾದ್ಯಂತ ಪ್ರತಿಭಟನೆ ಮತ್ತು ಆಕ್ರೋಶದ ಕಿಡಿಯನ್ನು ಹೊತ್ತಿಸಿತು. ಕೆಲವು ಬಲಪಂಥೀಯ ಸಂಘಟನೆಗಳು ಶಾಲಾ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂಡಿಯಾ-ಪಾಕಿಸ್ತಾನ ಟಿ-20 ಮ್ಯಾಚ್: ಟಿಕೆಟ್‌ಗಳು ಒಂದೇ ಗಂಟೆಯಲ್ಲಿ ಮಾರಾಟ!

Wed Feb 9 , 2022
  ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಲೀಗ್‌ನ ಭಾರತ- ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್‌ಗಳು ಒಂದೇ ಗಂಟೆಯಲ್ಲಿ ಮಾರಾಟಗೊಂಡಿವೆ.ಸಾಂಪ್ರದಾಯಿಕ ಎದುರಾಳಿಗಳ ಹೈ ವೋಲ್ಟೇಜ್ ಪಂದ್ಯ ನೋಡೋದಕ್ಕೆ ಅಭಿಮಾನಿಗಳು ಕಾತರರಾಗಿದ್ದು, ಪಂದ್ಯಕ್ಕೆ ಟಿಕೆಟ್ ಬಿಡುಗಡೆಯಾದ ಗಂಟೆಯಲ್ಲೇ ಎಲ್ಲ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿಬಿಟ್ಟಿವೆ.ಮೆಲ್ಬರ್ನ್‌ನ ಎಂಸಿಜಿ ಮೈದಾನದಲ್ಲಿ ಭಾರತ-ಪಾಕಿಸ್ತಾನ ನಡುವೆ ಅ.23ರಂದು ಪಂದ್ಯ ನಡೆಯಲಿದೆ. ವಿಶ್ವದ ದೊಡ್ಡ ಮೈದಾನಗಳಲ್ಲಿ ಇದೂ ಒಂದಾಗಿದ್ದು, ಲಕ್ಷ ಮಂದಿ ಕುಳಿತು ಪಂದ್ಯ ನೋಡಬಹುದಾಗಿದೆ. 60 ಸಾವಿರ […]

Advertisement

Wordpress Social Share Plugin powered by Ultimatelysocial