PSI ಪರೀಕ್ಷೆ ಅಕ್ರಮದಲ್ಲಿ ರಾಜಕೀಯ ಲಾಭ ಪಡೆಯಲು ಪ್ರಿಯಾಂಕ್​ ಖರ್ಗೆ

 

ಶಿವಮೊಗ್ಗ: ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಸತ್ಯ ಅರ್ಥ ಮಾಡಿಕೊಂಡು ಮಾತನಾಡಬೇಕು. ಪಿಎಸ್‌ಐ ಪರೀಕ್ಷಾ ಅಕ್ರಮದಲ್ಲಿ ರಾಜಕಾರಣದ ಲಾಭ ಮಾಡಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಮೂರನೇ ಸಿಎಂ ಅಧಿಕಾರಕ್ಕೆ ಬರುತ್ತಾರೆ ಎಂಬ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಪರೀಕ್ಷಾ ಅಕ್ರಮದ ಬಗ್ಗೆ ವ್ಯಾಪಕ ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ. ಸರ್ಕಾರ ಇದಕ್ಕೆ ತಾರ್ಕಿಕ ಅಂತ್ಯ ನೀಡಲಿದೆ. ಈ ಹಂತದಲ್ಲಿ ಸರ್ಕಾರದಲ್ಲಿ ಇರುವವರು ಒಬ್ಬೊಬ್ಬರು ಒಂದೊಂದು ಮಾತನಾಡುವುದು ಸರಿಯಲ್ಲ ಎಂದರು.

ಬಿಜೆಪಿಯಿಂದ ಹಲವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸುಧಾಕರ್, ನಾವೂ ಅದನ್ನು ಹೇಳುವುದಿಲ್ಲ. ಮಾಡಿ ತೋರಿಸುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕರ್ನಾಟಕದ ಗಡಿಯಲ್ಲಿ ಮರಾಠಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ತಮ್ಮ ಸರಕಾರ ಬೆಂಬಲ ನೀಡುತ್ತದೆ

Mon May 2 , 2022
  ಬೆಂಗಳೂರು, ಮೇ 2: ಕರ್ನಾಟಕದ ಗಡಿಯಲ್ಲಿ ಮರಾಠಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ತಮ್ಮ ಸರಕಾರ ಬೆಂಬಲ ನೀಡುತ್ತದೆ ಎಂದು ಹೇಳಿಕೆ ನೀಡಿರುವ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಪುಣೆಯಲ್ಲಿಂದು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅಜಿತ್‌ ಪವಾರ್‌ ಈ ಅಸಂಬದ್ಧ ಹೇಳಿಕೆ ನೀಡಿದ್ದು, ಆ ಬಗ್ಗೆ ಕುಮಾರಸ್ವಾಮಿ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.   “ಅಜಿತ್‌ ಪವಾರ್‌ ಅವರು ಚೀನಾ ಮನಃಸ್ಥಿತಿಯ […]

Advertisement

Wordpress Social Share Plugin powered by Ultimatelysocial