ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ.

ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸದಾ ಸಿದ್ಧವಾಗಿರುತ್ತದೆ ಮತ್ತು ಜನರ ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿಯೇ ಜಿಲ್ಲಾಧಿಕಾರಿಗಳ ನಡೆಯ ಕಡೆ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಶಾಸಕರಾದ ಎಚ್‍ಪಿ ಮಂಜುನಾಥ್ ತಿಳಿಸಿದರು.
ತಾಲೂಕಿನ ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಲ್ಲಿ ಜನರು ಮುಂದಾಗಬೇಕು. ಕೆಲವು ಸಮಸ್ಯೆಗಳನ್ನು ಈ ಮಟ್ಟದಲ್ಲಿ ಪರಿಹರಿಸಲು ಸಾಧ್ಯವಿಲ್ಲವಾದರೂ ಅವುಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡುತ್ತೇವೆ ಎಂದರು.
ಕೋವಿಡ್ ನಂತರದ ದಿನಗಳಲ್ಲಿ ಸಂಚರಿಸುವ ಬಸ್‍ಗಳ ಸಂಖ್ಯೆ ಶೇ.48 ರಷ್ಟಿದೆ. ಇದರಿಂದ ನಿಜಕ್ಕೂ ಬಹಳ ತೊಂದರೆ ಉಂಟಾಗಿದ್ದು, ಈ ಗ್ರಾಮದಲ್ಲಿಯೂ ಬಸ್‍ನ ಸಮಸ್ಯೆ ಇರುವುದಾಗಿ ಪ್ರೌಢಶಾಲಾ ಮಕ್ಕಳು ತಿಳಿಸಿದ್ದು, ಸಮಸ್ಯೆಯನ್ನು ಪರಿಹರಿಸುವಲ್ಲಿ ಕೆಲಸ ಮಾಡುತ್ತೇವೆ. ಸಲ್ಲಿಸುವ ಅರ್ಜಿಗಳ ಕುರಿತು ನಿಮ್ಮ ನಿಮ್ಮಲ್ಲಿಯೇ ಆಕ್ಷೇಪ, ಗಲಾಟೆಗಳು ಬೇಡ. ನೇರವಾಗಿ ನಿಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಮತ್ತು ಉಪವಿಭಾಗಾಧಿಕಾರಿಗಳ ಮುಂದೆ ತನ್ನಿ ಎಂದು ತಿಳಿಸಿದರು.
ಮಾನ್ಯ ಜಿಲ್ಲಾಧಿಕಾರಿಗಳಾದ ಕೆ ವಿ ರಾಜೇಂದ್ರ ಅವರು ಮಾತನಾಡಿ, ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಈ ಮಹತ್ತರ ಕಾರ್ಯಕ್ರಮದ ಮೂಲಕ, ಬಸ್ ಸಮಸ್ಯೆ ಇರುವ ಇಂತಹ ಹಳ್ಳಿಯಿಂದ ತಮ್ಮ ಸಮಸ್ಯೆಗಳನ್ನು ಹೊತ್ತು ಜಿಲ್ಲಾ ಕಚೇರಿಗಳಿಗೆ ಬರಲು ಎಂದು ತಿಳಿದಿದೆ. ಆದ್ದರಿಂದ ರಾತ್ರಿ 12 ಗಂಟೆಯಾದರೂ ಪರವಾಗಿಲ್ಲ ಎಲ್ಲರ ಸಂಪೂರ್ಣ ಸಮಸ್ಯೆಗಳನ್ನು ಆಲಿಸಿಯೇ ಕಾರ್ಯಕ್ರಮದಿಂದ ತೆರಳುವುದಾಗಿ ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹರಿಪ್ರಸಾದ್ ವಿರುದ್ಧ ಬಿ.ಸಿ.ಪಾಟೀಲ್ ವ್ಯಂಗ್ಯ.

Sun Jan 22 , 2023
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಕಿಲ್ ಇಂಡಿಯಾ ಯೋಜನೆಯನ್ನು ಕಿಲ್ ಇಂಡಿಯಾ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಟೀಕಿಸಿರುವ ವಿಚಾರ ಕುರಿತು ಸಚಿವ ಬಿ ಸಿ ಪಾಟೀಲ್ ಮೈಸೂರಿನಲ್ಲಿ ವ್ಯಂಗ್ಯವಾಡಿದ್ದಾರೆ. ಹರಿಪ್ರಸಾದ್ ಪ್ರಧಾನಮಂತ್ರಿಯನ್ನು ಟೀಕಿಸುವಂತಹ ದೊಡ್ಡ ಮಟ್ಟಕ್ಕೆ ಬೆಳೆದಿರುವ ವ್ಯಕ್ತಿಯಲ್ಲ. ಹಾಗಾಗಿ ಅವರ ಹೇಳಿಕೆಗೆ ಉತ್ತರಿಸುವ ಅವಶ್ಯಕತೆಯಿಲ್ಲ. ಸುಳ್ಳನ್ನು ಒಂದು ಬಾರಿ ಹೇಳಬಹುದು ಎಂದು ಸೂಚ್ಯವಾಗಿ ತಿಳಿಸಿದರು. ನರೇಂದ್ರ ಮೋದಿ ನೇತೃತ್ವದಲ್ಲಿ 2014ರಲ್ಲಿ ಬಿಜೆಪಿ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು. 2019ರ […]

Advertisement

Wordpress Social Share Plugin powered by Ultimatelysocial