ಬೃಹತ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಜರುಗಲಿದೆ.

ರಾಜ್ಯದಾದ್ಯಂತ ಪೆಬ್ರುವರಿ 11ರಂದು ನಡೆಯಲಿರುವ ಬೃಹತ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಜರುಗಲಿದೆ.ಇದರ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ತಾಲೂಕ ಕಾನೂನು ಸೇವಾ ಸಮಿತಿ ರಾಮದುರ್ಗ ವತಿಯಿಂದ
ಪೂರ್ವಭಾವಿ ಸಭೆ ಜರುಗಿತು.ಸಭೆಯಲ್ಲಿ ಹಾಜರಿದ್ದ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು JMFC. ಕಾನೂನು ಸೇವಾ ಸಮಿತಿ, ರಾಮದುರ್ಗದ ಅಧ್ಯಕ್ಷರಾದ ಶ್ರೀ ಹನುಮಂತ ಜಿ ಎಚ್ ಹಾಗೂ ದಿವಾಣಿ ನ್ಯಾಯಾಧೀಶರು ಮತ್ತು JMFC ಹಾಗೂ ಸದಸ್ಯ ಕಾರ್ಯದರ್ಶಿಗಳು ಕಾನೂನು ಸೇವಾ ಸಮಿತಿ ರಾಮದುರ್ಗ ಶ್ರೀಮತಿ ಸುಕಿತಾ ಹದ್ಲಿ ಮತ್ತು ನ್ಯಾಯವಾದಿಗಳ ಸಂಘ ರಾಮದುರ್ಗ ಅಧ್ಯಕ್ಷರಾದ ಶ್ರೀ ಆರ್. ಜಿ ವಜ್ರಮಟ್ಟಿ ಇವರು
ರಾಷ್ಟ್ರೀಯ ಲೋಕ ಅದಾಲತ ಕುರಿತು ವಿವರಿಸಿದರು.ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಪ್ರಯೋಜನ ಪಡೆಯವವರ ಕುರಿತು ಮೊದಲೇ ಮಾಹಿತ ಸಂಗ್ರಹಿಸಿ ನೀಡುವಂತೆ ಹಾಗೂ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಸರಿಯಾದ ತಿಳುವಳಿಕೆಯನ್ನು ನೀಡಿ ಲೋಕ ಅದಾಲತ್ ಕಾರ್ಯಕ್ರಮವನ್ನು ಅತ್ಯಂತ ಯಶಸ್ವೀಗೊಳಿಸುವತ್ತ ಕ್ರಮ ಕೈಗೊಳ್ಳಬೇಕು ಎಂದೂ ಕೋರಲಾಯಿತು. ಬ್ಯಾಂಕ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಪ್ರಕರಣಗಳು, ಸಿವಿಲ್ ವ್ಯಾಜ್ಯಗಳು, ಜನನ-ಮರಣ ನೋಂದಣಿಗೆ ಸಂಬಂಧಪಟ್ಟ ಪ್ರಕರಣಗಳು ಇತ್ಯಾದಿಗಳನ್ನು ಹೆಚ್ಚು ಹೆಚ್ಚು ಲೋಕ ಅದಾಲತ್‍ನಲ್ಲಿ ಇಡುವುದಕ್ಕೆ ಕಕ್ಷಿದಾರರಿಗೆ ಮನವರಿಕೆ ಮಾಡಿಕೊಡುವಲ್ಲಿ ಸರಿಯಾದ ಮಾರ್ಗದರ್ಶನ ನೀಡುವಂತೆಯೂ ವಕೀಲರುಗಳಿಗೆ ತಿಳಿಸಲಾಯಿತು ಸಭೆಯಲ್ಲಿ ರಾಮದುರ್ಗ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ, ಕಟ್ಟಡ ಕಾರ್ಮಿಕ ಇಲಾಖೆ ರಾಷ್ಟ್ರಿಯ ಬ್ಯಾಂಕ ಮತ್ತು ಸಹಕಾರಿ ಬ್ಯಾಂಕ. ಪೋಲಿಸ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ರಾಷ್ಟ್ರೀಯ ಲೋಕ ಅದಾಲತ ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಕ್ಕೆ ಬರ್ತಿರುವ ಪ್ರಧಾನಿ ವಿರುದ್ಧ 'ಗೋ ಬ್ಯಾಕ್ ಮೋದಿ​' ಅಭಿಯಾನ.

Thu Jan 12 , 2023
ಹುಬ್ಬಳ್ಳಿ: ಇವತ್ತು 26ನೇ ರಾಷ್ಟ್ರೀಯ ಯುವಜನೋತ್ಸವ ಸಮಾರಂಭ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಆದರೆ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಯಕರ್ತರು ಸೋಷಿಯಲ್​ ಮೀಡಿಯಾದಲ್ಲಿ ‘ಗೋ ಬ್ಯಾಕ್ ಮೋದಿ’ ಅಭಿಯಾನ ಆರಂಭಿಸಿದ್ದಾರೆ. ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರು ಹಾಗೂ ಕೆಲವು ಕಾರ್ಯಕರ್ತರಿಂದ ‘ಗೋ ಬ್ಯಾಕ್ ಮೋದಿ’ ಅಭಿಯಾನ ಪ್ರಾರಂಭವಾಗಿದೆ. ಹಲವಾರು ವಿಚಾರಗಳನ್ನು ಮುಂದಿಟ್ಟುಕೊಂಡಿರುವ ಕಾರ್ಯಕರ್ತರು ಪ್ರಶ್ನೆಗಳ ಮೂಲಕ ಅಭಿಯಾನ ಮಾಡ್ತಿದ್ದಾರೆ.     ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

Advertisement

Wordpress Social Share Plugin powered by Ultimatelysocial