ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರಿಂದ ದಾಳಿ.

ಮೆಲ್ಬರ್ನ್: ಆಸ್ಟ್ರೇಲಿಯಾದ ಮೆಲ್ಬರ್ನ್ ನ ಫೆಡರೇಶನ್‌ ಸ್ಕ್ವೇರ್‌ನಲ್ಲಿ ಭಾನುವಾರ ಭಾರತದ ಧ್ವಜ ಹಿಡಿದು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಮೂಲದವರ ಮೇಲೆ ಖಡ್ಗ ಹಿಡಿದ ಸುಮಾರು 40 ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಹೆಚ್ಚುತ್ತಿರುವ ಭಾರತ ವಿರೋಧಿ, ಖಲಿಸ್ತಾನಿ ಪರ ಚಟುವಟಿಕೆಗಳ ವಿರುದ್ಧ ಭಾರತೀಯ ಮೂಲದವರು ನಿಶಸ್ತ್ರರಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ನುಗ್ಗಿದ ಖಡ್ಗ ಸೇರಿದಂತೆ ಹರಿತವಾದ ಆಯುಧಗಳು, ಬೆತ್ತ ಹಿಡಿದ ಸುಮಾರು 40 ಮಂದಿ ಖಲಿಸ್ತಾನಿ ಬೆಂಬಲಿಗರು ಏಕಾಏಕಿ ಭಾರತೀಯ ಮೂಲದವರ ಮೇಲೆ ಎರಗಿ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ, ಗುಂಪುಗಳನ್ನು ಚದುರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದಾಳಿಯನ್ನು ಆಸ್ಟ್ರೇಲಿಯಾದ ಭಾರತೀಯ ಸಮುದಾಯ ತೀವ್ರವಾಗಿ ಖಂಡಿಸಿದೆ. “ದಾಳಿಯನ್ನು ಹಾಗೂ ಆಸ್ಟ್ರೇಲಿಯಾದಲ್ಲಿ ಭಾರತ ವಿರೋಧಿ, ಖಲಿಸ್ತಾನಿ ಪರ ಚಟುವಟಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಭಾರತದ ಶಾಂತಿ ಮತ್ತು ಸೌಹಾರ್ದತೆಯನ್ನು ಹಾಳು ಮಾಡಲು ಸಮಾಜ ವಿರೋಧಿ ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು,’ ಎಂದು ಬಿಜೆಪಿ ವಕ್ತಾರ ಮಂಜಿಂದರ್‌ ಸಿಂಗ್‌ ಸಿರ್ಸಾ ಆಗ್ರಹಿಸಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶ್ರಮಿಕರ ಪರ ಬಜೆಟ್.

Mon Jan 30 , 2023
ಈ ವರ್ಷದ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ, ಜನಪರವಾಗಿರುತ್ತದೆ. ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.ಇಂದು ಶಿಗ್ಗಾಂವನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಶಿಗ್ಗಾಂವ ಸವಣೂರು ಕ್ಷೇತ್ರದ ಜನತೆ ಬಹಳ ದೊಡ್ಡ ಪ್ರಮಾಣದಲ್ಲಿ ಸೇರಿ ನನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡಿ ಹಾರೈಸಿದ್ದಾರೆ. ಅವರ ಆಶೀರ್ವಾದದಿಂದ ನಾನು ಇವತ್ತು ರಾಜ್ಯದಲ್ಲಿ ಬೇರೆ ಬೇರೆ ಹುದ್ದೆಗಳಲ್ಲಿ ಕೆಲಸ […]

Advertisement

Wordpress Social Share Plugin powered by Ultimatelysocial