ಕೊರೋನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳ ನೆರವಿಗೆ ಸರ್ಕಾರ ಇದುವರೆಗೂ ಬಂದಿಲ್ಲ. ಇದರಿಂದ ಬೇಸತ್ತು ಶಿಕ್ಷಣ ಇಲಾಖೆ ಧೋರಣೆ ವಿರುದ್ಧ ರಾಜ್ಯದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳ ಪ್ರತಿನಿಧಿಗಳು ಮತ್ತೆ ಬೀದಿಗಿಳಿಯುತ್ತಿದ್ದಾರೆ. ಇಂದು ತಮ್ಮ ಖಾಸಗಿ ಶಾಲೆಗಳನ್ನು ಬಂದ್ ಮಾಡಿ, ಶಿಕ್ಷಣ ಸಚಿವರ ಮನೆ ಮುಂದೆ ಐದು ಸಾವಿರಕ್ಕೂ ಹೆಚ್ಚು ಜನರು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ.

ಕೊರೋನಾ ಕಾರಣದಿಂದ ಈ ಶೈಕ್ಷಣಿಕ ವರ್ಷ ಪೋಷಕರಿಗೂ, ಶಾಲೆಗಳಿಗೂ ಸಂಕಷ್ಟ ಎದುರಾಗಿದೆ. ಈ ಬಗ್ಗೆ ಗಮನಹರಿಸಬೇಕಾದ ಶಿಕ್ಷಣ ಇಲಾಖೆ ಬೇಡಿಕೆ ಈಡೇರಿಸುತ್ತೇನೆ ಎಂದು ಹೇಳಿ ಭರವಸೆ ಮಾತ್ರ ನೀಡುತ್ತಿದೆ. ಆದರೆ ಇವ್ಯಾವುವೂ ಕಾರ್ಯ ರೂಪಕ್ಕೆ ಬರುತ್ತಿಲ್ಲ ಎಂದು ಅನುದಾನರಹಿತ ಖಾಸಗಿ ಶಾಲೆಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿವೆ. ಖಾಸಗಿ ಶಾಲೆಗಳ ಒಕ್ಕೂಟ ಕಳೆದ ವಾರ ರಾಜ್ಯಮಟ್ಟದ ಪದಾಧಿಕಾರಿಗಳ ಸಭೆ ಕರೆದಿತ್ತು. ಸಭೆಯಲ್ಲಿ ಖಾಸಗಿ ಶಾಲೆಗಳ ಸಂಕಷ್ಟ, ಸರ್ಕಾರ ಸ್ಪಂದಿಸದೇ ಇರುವುದರ ಬಗ್ಗೆ ಸುದೀರ್ಘವಾಗಿ ಚರ್ಚೆಯಾಯಿತು. ಈ ಮೊದಲು ಭರವಸೆ ನೀಡಿದಂತೆ ಆರು ಬೇಡಿಕೆಗಳು ಈಗಲೂ ಈಡೇರದೇ ಇರುವ ಹಿನ್ನೆಲೆ ಮತ್ತೆ ರಸ್ತೆಗಿಳಿದು ಹೋರಾಟ ಮಾಡಲು ಖಾಸಗಿ ಶಿಕ್ಷಣ ಸಂಸ್ಥೆಗಳು ನಿರ್ಧರಿಸಿವೆ.
ಬೇಡಿಕೆ…
1) ಈ ವರ್ಷದ ಶೇ.70 ರಷ್ಟು ಬೋಧನಾ ಶುಲ್ಕ ಕಟ್ಟುವಂತೆ ಪೋಷಕರಿಗೆ ಸೂಚನೆ ನೀಡಬೇಕು
2) 1995 ರಿಂದ 2005ರವರೆಗೆ ಕನ್ನಡ ಮಾಧ್ಯಮ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸಬೇಕು
3) ಕಟ್ಟಡ ಸುರಕ್ಷತಾ ಪ್ರಮಾಣ ಪತ್ರದ ವಿಷಯದಲ್ಲಿ ಹತ್ತು ಸಾವಿರ ಶಾಲೆಗಳು ಬಂದ್ ಆಗಲಿವೆ. ಈ ವಿಚಾರದಲ್ಲಿ ಸರ್ಕಾರ ಪರಿಶೀಲಿಸುವುದು4) ಶಿಕ್ಷಕರ ಕಲ್ಯಾಣ ನಿಧಿಯಿಂದ ಖಾಸಗಿ ಶಾಲಾ ಶಿಕ್ಷಕರಿಗೂ ಪರಿಹಾರ ಸಿಗುವಂತೆ ಮಾಡುವುದು
5) ಬಿಸಿಯೂಟ ಕಾರ್ಯಕ್ರಮವನ್ನ ಅನುದಾನರಹಿತ ಶಾಲಾ ಮಕ್ಕಳಿಗೂ ಯೋಜನೆ ವಿಸ್ತರಿಸಬೇಕು
6) ಕರ್ನಾಟಕ ಖಾಸಗಿ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸಬೇಕೆಂದು ಒತ್ತಾಯ
7) ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಖಾಸಗಿ ಶಾಲಾ ಶಿಕ್ಷಕರಿಗೂ ನೀಡಬೇಕು.