ಸರಕಾರಿ ಜಾಗ ಉಳಿವಿಗೆ ರೈತ ಸಂಘ, ಹಸಿರು ಸೇನೆ, ಪ್ರಜಾವಿಮೋಚಾನಾ ಚಳುವಳಿ ಸಂಘಟನೆ ಪ್ರತಿಭಟನೆ

ದೇವನಹಳ್ಳಿ ತಾಲೂಕಿನ ಚಿಕ್ಕೋಬದೇನಹಳ್ಳಿ ಗ್ರಾಮದ ಗ್ರಾಮ ಠಾಣಾ ೮ ಎಕರೆ ೪ ಗುಂಟೆ ಜಮೀನಿಗೆ ಸಂಬಂಧಿಸಿದಂತೆ ಅಕ್ರಮ ಖಾತೆಗಳನ್ನು ಸೃಷ್ಠಿ ಮಾಡಿರುವವರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ಆವರಣದ ಮುಂಭಾಗದಲ್ಲಿ ರೈತ ಸಂಘ, ಹಸಿರು ಸೇನೆ, ಪ್ರಜಾವಿಮೋಚಾನಾ ಚಳುವಳಿ ಸಂಘಟನೆ ವತಿಯಿಂದ ಗ್ರಾಮಸ್ಥರೊಡನೆ ಪ್ರತಿಭಟನೆ ನಡೆಸಿದರು.

ಇತ್ತೀಚೆಗೆ ಭೂಗಳ್ಳರ ಆವಳಿ ಹೆಚ್ಚಾಗುತ್ತಿದ್ದು, ನಕಲಿ ದಾಖಲೆಗಳ ಸೃಷ್ಠಿಕೋರರು ಸಹ ಹೆಚ್ಚಾಗುತ್ತಿದ್ದಾರೆ. ಸರಕಾರದಡಿಯಲ್ಲಿ ಸೇವೆ ಸಲ್ಲಿಸುವ ಅಧಿಕಾರಿಗಳು ಸಹ ಶಾಮೀಲಾಗಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಜಮೀನುಗಳನ್ನು ಲಪಟಾಯಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಇದೀಗ ಅಕ್ರಮ ಎಸಗಿರುವವರ ವಿರುದ್ಧ ಮೇಲಾಧಿಕಾರಿಗಳು ಕ್ರಮ ಜರುಗಿಸದೆ ಹಾಗೆಯೇ ಬಿಟ್ಟುಕೊಂಡು ಬರುತ್ತಿರುವುದನ್ನು ಖಂಡಿಸುತ್ತೇವೆ. ಕೂಡಲೇ ಮೇಲಾಧಿಕಾರಿಗಳು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿಗಳ ಮೇಲೆ ಮತ್ತು ನಕಲಿ ಖಾತೆ ಸೃಷ್ಠಿ ಮಾಡಿರುವ ವ್ಯಕ್ತಿಗಳ ಮೇಲೆ ಶಿಸ್ತುಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದರು.

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯಾಧ್ಯಕ್ಷ ಮುನಿಆಂಜಿನಪ್ಪ ಮಾತನಾಡಿ, ಸ್ವಾಭಿಮಾನ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟಿಸಲಾಗುತ್ತಿದೆ. ವಿಶ್ವನಾಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೋಬದೇನಹಳ್ಳಿ ಗ್ರಾಮದಲ್ಲಿರುವ ಗ್ರಾಮಠಾಣ ಜಮೀನು ಸುಮಾರು ೧೭ಕೋಟಿ ರೂ.ಗಳ ಬೆಲೆ ಬಾಳುವಂತಹದ್ದು, ಇಂತಹ ಜಮೀನನ್ನು ಭೂ ಕಬಳಿಕೆದಾರರು ಅಧಿಕಾರಿಗಳ ಜೊತೆಗೂಡಿ ನಕಲಿ ದಾಖಲೆಗಳನ್ನು ಸೃಷ್ಠಿ ಮಾಡಿಕೊಂಡಿರುವುದನ್ನು ಕೂಡಲೇ ವಜಾಗೊಳಿಸಿ, ಅಕ್ರಮದಾರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ರು.

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ:ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ:ಸಿಎಂ ಬೊಮ್ಮಾಯಿ

Sat Dec 18 , 2021
ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ  ತಿಳಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ. ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದ್ದು, ಹಲವರ ಬಂಧನವೂ ಆಗಿದೆ. ಕಲ್ಲು ತೂರಾಟ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವುದು ಕಾನೂನುಬಾಹಿರ. ಇಂತಹ ಘಟನೆ […]

Advertisement

Wordpress Social Share Plugin powered by Ultimatelysocial