ಪೃಥ್ವಿ ಅಂಬರ್, ಮಿಲನಾ ನಾಗರಾಜ್ ನಟನೆಯ ಸಿನಿಮಾ ರಿಲೀಸ್‌ಗೆ ರೆಡಿ

ಪೃಥ್ವಿ ಅಂಬರ್  ಹಾಗೂ ಮಿಲನ ನಾಗರಾಜ್  ನಾಯಕ-ನಾಯಕಿಯಾಗಿ ನಟಿಸಿರುವ ‘F0R REGN’ (ಫಾರ್ ರಿಜಿಸ್ಟರೇಷನ್) ಚಿತ್ರ 2023 ರ ಫೆಬ್ರವರಿ 10ರಂದು ಬಿಡುಗಡೆಯಾಗಲಿದೆ.ಕರ್ನಾಟಕ ರಾಜ್ಯೋತ್ಸವದ ಶುಭದಿನದಂದು ಚಿತ್ರದ ಬಿಡುಗಡೆ ದಿನಾಂಕ ಹಾಗೂ ಫಸ್ಟ್ ಲುಕ್ ಅನಾವರಣಗೊಂಡಿದೆ. ನಿರ್ಮಾಪಕ ನವೀನ್ ರಾವ್ ಹಾಗೂ ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಪೋಷಕರು ಫಸ್ಟ್ ಲುಕ್ ಹಾಗೂ ಬಿಡುಗಡೆ ದಿನಾಂಕವನ್ನು ಅನಾವರಣಗೊಳಿಸಿದರು‌.ನಾನು ಹಾಗೂ ನಿರ್ಮಾಪಕ ನವೀನ್ ರಾವ್ ಸಹಪಾಠಿಗಳು. ಕಿರುಚಿತ್ರಗಳನ್ನು ನಿರ್ದೇಶಿಸುತ್ತಿದ್ದ ನನಗೆ ಒಂದು ದಿನ ನನ್ನ ಸ್ನೇಹಿತ ನವೀನ್ ರಾವ್ ಈ ಚಿತ್ರವನ್ನು ನಿರ್ದೇಶಿಸಲು ಪ್ರೇರೇಪಿಸಿದರು. ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿ ಅಂತ ನಿರ್ಧರಿಸಲಾಯಿತು. ಆಗ ಅವರಿಬ್ಬರ ‘ದಿಯಾ’ ಹಾಗೂ ‘ಲವ್ ಮಾಕ್ಟೇಲ್’ ಸಿನಿಮಾಗಳು ಯಶಸ್ವಿಯಾಗಿದ್ದವು. ಹೀಗೆ ಚಿತ್ರ ಆರಂಭವಾಗಿ ಈಗ ಬಿಡುಗಡೆ ಹಂತಕ್ಕೆ ತಲುಪಿದೆ. ಫೆಬ್ರವರಿ ಹತ್ತರಂದು ಚಿತ್ರ ಬಿಡುಗಡೆಯಾಗುತ್ತಿದೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ನವೀನ್ ದ್ವಾರಕನಾಥ್.
“ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದಾಗ ನನಗೆ ಅನಿಸಿದ್ದು, ನಿರ್ಮಾಪಕ ಹಣ ಒದಗಿಸಿಕೊಡತ್ತಾನೆ.‌ ಆದರೆ ಇಡೀ ತಂಡ ಚಿತ್ರಕ್ಕಾಗಿ ಎಷ್ಟು ಕಷ್ಟ ಪಡುತ್ತದೆ ಎಂದು. ಅವರೆಲ್ಲರ ಶ್ರಮದಿಂದ ಉತ್ತಮ ಚಿತ್ರವೊಂದು ನಿರ್ಮಾಣವಾಗಿದೆ. ನೋಡಿ ಹಾರೈಸಿ” ಎಂದರು ನಿರ್ಮಾಪಕ ನವೀನ್ ರಾವ್.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರು ಕೇಂದ್ರ ವಿಭಾಗದ ಸೆನ್ ಪೊಲೀಸರ ಕಾರ್ಯಾಚರಣೆ.

Thu Jan 5 , 2023
ಬಜಾಜ್ ಫೈನಾನ್ಸ್ ಹೆಸರಲ್ಲಿ ವಂಚಿಸ್ತಿದ್ದ ಆರೋಪಿಯ ಬಂಧನ. ವಿಕಾಸ್ ಬಂಧಿತ ಖತರ್ನಾಕ್ ಆರೋಪಿ. ಬಜಾಜ್ ಫೈನಾನ್ಸ್ ನಲ್ಲೇ ಕೆಲಸ ಮಾಡಿಕೊಂಡಿದ್ದ ವಿಕಾಸ್. ಹಳೆಯ ಕಸ್ಟಮರ್ ಗಳ ಕೆವೈಸಿ ಡಾಕ್ಯುಮೆಂಟ್ಸ್ ಇಟ್ಕೊಂಡು ಅಕೌಂಟ್ ತೆರೆಯುತ್ತಿದ್ದ. ನಂತರ ಹೊಸ ಆ ಅಕೌಂಟ್ ಗೆ ಹೊಸ ಸಿಮ್ ಕಾರ್ಡ್ ಬಳಸಿ ಗ್ರಾಹಕರ ಡಾಕ್ಯುಮೆಂಟ್ಸ್ ಗೆ ಲಿಂಕ್ ಮಾಡ್ತಿದ್ದ. ಹೊಸದಾಗಿ ಕ್ರಿಯೇಟ್ ಆದ ಬಜಾಜ್ ಫೈನಾನ್ಸ್ ಕಾರ್ಡ್ ನಿಂದ ಬೆಲೆಬಾಳೋ ವಸ್ತುಗಳನ್ನ ಖರೀದಿಸ್ತಿದ್ದ. ಈ ಬಗ್ಗೆ […]

Advertisement

Wordpress Social Share Plugin powered by Ultimatelysocial