ಅಕ್ರಮ ‘PSI’ ನೇಮಕಾತಿ ಪ್ರಕರಣ

ಅಕ್ರಮ ಪಿಎಸ್‌ಐ ನೇಮಕಾತಿ ಪರೀಕ್ಷೆ ( PSI Recruitment Scam ) ಪ್ರಕರಣಕ್ಕೆ ಸಂಬಂಧಿಸಿದಂತೆ 26 ಆರೋಪಿಗಳಿಗೆ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.ಕಲಬುರಗಿ ಸೆಷನ್ಸ್ ಕೋರ್ಟ್ ಈ ಕುರಿತು ಆದೇಶ ಹೊರಡಿಸಿದ್ದು, ಕಿಂಗ್ ಪಿನ್ ದಿವ್ಯಾ ಹಾಗರಗಿ, ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿದಂತೆ ಒಟ್ಟು 26 ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.ಈ ಮೂಲಕ ಇದುವರೆಗೆ 36 ಜನರಿಗೆ ಜಾಮೀನು ಸಿಕ್ಕಂತಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಅಕ್ರಮ ಪಿಎಸ್‌ಐ ನೇಮಕಾತಿ ಪರೀಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಂಡಿದೆ. ಅಕ್ರಮ ಪಿಎಸ್‌ಐ ನೇಮಕಾತಿ ಪರೀಕ್ಷೆ ಸಂಬಂಧ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಅಕ್ರಮ ನಡೆಸಿದ ಆರೋಪ ಹೊತ್ತಿದ್ದಂತ ನೇಮಕಾತಿ ವಿಭಾಗದ ಹೊಣೆ ಹೊತ್ತಿದ್ದ ಆರೋಪಿತ ಅಧಿಕಾರಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿತ್ತು. ಅವರೀಗ ಕಾನೂನು ಬಂಧನದಲ್ಲಿದ್ದಾರೆ. ಇಂತಹ ಆರೋಪಿತ ಅಧಿಕಾರಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.ಪಿಎಸ್‌ಐ ನೇಮಕಾತಿ ಅಕ್ರಮ ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಆರೋಪಿತ ಅಧಿಕಾರಿ ಅಮೃತ್ ಪಾಲ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ಬೆಂಗಳೂರಿನ 24ನೇ ಸಿಸಿ ಹೆಚ್ ಕೋರ್ಟ್, ಜಾಮೀನು ಅರ್ಜಿಯನ್ನು ಮತ್ತೆ ವಜಾಗೊಳಿಸಿದೆ. ತನಿಖೆ ಸಂಪೂರ್ಣವಾಗಿಲ್ಲ, ಕೆಲ ಆಯಾಮಗಳ ತನಿಖೆ ಮಾತ್ರ ಮುಂದುವರೆದಿದೆ, ಜಾಮೀನು ನೀಡದಂತೆ ವಕೀಲ ಪ್ರಸನ್ನ ಕುಮಾರ್ ಭಟ್ ವಾದ ಮಂಡಿಸಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಅಪ್ಪು ನಿಧನ ಹೊಂದಿದಾಗ ದರ್ಶನ್ 15 ದಿನ ಕ್ರಾಂತಿ ಶೂಟಿಂಗ್ ನಿಲ್ಲಿಸಿದ್ದ ವಿಷಯ ಗೊತ್ತಾ

Thu Jan 5 , 2023
  ಚಂದನವನದಲ್ಲಿ ಫ್ಯಾನ್ ವಾರ್ ಈಗ ಸಿಕ್ಕಾಪಟ್ಟೆ ಹೆಚ್ಚಿದೆ. ಹೆಚ್ಚಾಗಿದೆ ಎನ್ನುವುದಕ್ಕಿಂತ ಮಿತಿ ಮೀರಿದೆ ಎನ್ನಬಹುದು. ಸಾಮಾಜಿಕ ಜಾಲತಾಣಕ್ಕೆ ಸೀಮಿತವಾಗಿದ್ದ ಈ ಫ್ಯಾನ್ ವಾರ್ ಇದೀಗ ಹೊರಗೂ ಸಹ ಹಬ್ಬಿದೆ. ಅದರಲ್ಲಿಯೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ನಡುವಿನ ಫ್ಯಾನ್ ವಾರ್ ಇದಕ್ಕೆ ತಾಜಾ ಉದಾಹರಣೆ ಎನ್ನಬಹುದು.ಇನ್ನು ಈ ಫ್ಯಾನ್ ವಾರ್ ವಿಷಯವನ್ನು ಸದುಪಯೋಗಪಡಿಸಿಕೊಂಡ ಮೂರನೇ ವ್ಯಕ್ತಿಗಳು ಹೊಸಪೇಟೆಯಲ್ಲಿ ನಡೆದ ಕ್ರಾಂತಿ ಚಿತ್ರದ […]

Advertisement

Wordpress Social Share Plugin powered by Ultimatelysocial