ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ `ಪಬ್ಲಿಕ್ ಪರೀಕ್ಷೆ’!

ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪಾಸ್ ಮಾಡಲಾಗುತ್ತಿತ್ತು. ಹೀಗಾಗಿ ಕಲಿಕೆ ಆಸಕ್ತಿ ಕಡಿಮೆಯಾಗಿದೆ. ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಎದುರಿಸುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ಸಾದ್ಯತೆ ಇರುವ ಹಿನ್ನೆಲೆಯಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತಕ್ಕೆ ಸಹಾಯ ಘೋಷಿಸಿದ ರಷ್ಯಾ!

Tue Dec 13 , 2022
G7 ಮತ್ತು ಅದರ ಮಿತ್ರರಾಷ್ಟ್ರಗಳು ಘೋಷಿಸಿದ ರಷ್ಯಾದ ತೈಲದ ಮೇಲಿನ ಬೆಲೆ ನಿರ್ಬಂಧವನ್ನು ಬೆಂಬಲಿಸದಿರುವ ಭಾರತದ ನಿರ್ಧಾರವನ್ನು ರಷ್ಯಾ ಸ್ವಾಗತಿಸಿದೆ ಮತ್ತು ಯುರೋಪಿಯನ್ ಯೂನಿಯನ್ ಮತ್ತು ಬ್ರಿಟನ್‌ನಲ್ಲಿ ವಿಮಾ ಸೇವೆಗಳು ಮತ್ತು ಟ್ಯಾಂಕರ್ ಚಾರ್ಟರ್ಟಿಂಗ್ ಮೇಲಿನ ನಿಷೇಧವನ್ನು ನಿವಾರಿಸಲು ದೊಡ್ಡ ಸಾಮರ್ಥ್ಯದ ಹಡಗುಗಳನ್ನು ಗುತ್ತಿಗೆ ಮತ್ತು ನಿರ್ಮಾಣಕ್ಕೆ ಮತ್ತು ರಿಯಾಯಿತಿ ದರದಲ್ಲಿ ತೈಲ ಖರೀದಿಗೆ ಭಾರತದೊಂದಿಗೆ ಸಹಕಾರವನ್ನು ಘೋಷಿಸಿದೆ.ರಷ್ಯಾದ ಉಪಪ್ರಧಾನಿ ಅಲೆಕ್ಸಾಂಡರ್ ನೊವಾಕ್ ಅವರು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಪವನ್ […]

Advertisement

Wordpress Social Share Plugin powered by Ultimatelysocial