ಪಿಯು ಕಾಲೇಜುಗಳಲ್ಲಿ ‘ಸೂರ್ಯ ನಮಸ್ಕಾರ’: ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಜ.

1ರಿಂದ ಫೆ. 7ರವರೆಗೆ ‘ಸೂರ್ಯ ನಮಸ್ಕಾರ’ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. ಅಲ್ಲದೆ, ಜ 26ರಂದು ‘ಸಂಗೀತ ದೊಂದಿಗೆ ಸೂರ್ಯ ನಮಸ್ಕಾರ’ (ಮ್ಯೂಸಿಕಲ್‌ ಪರ್ಫಾರ್ಮೆನ್ಸ್‌ ಆನ್‌ ಸೂರ್ಯ ನಮಸ್ಕಾರ) ಆಯೋಜಿಸ ಬೇಕು ಎಂದೂ ತಿಳಿಸಿದೆ.

75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ‘ಸೂರ್ಯ ನಮಸ್ಕಾರ’ ಕಾರ್ಯಕ್ರಮ ಆಯೋಜಿಸುವಂತೆ ಕೇಂದ್ರ ಶಿಕ್ಷಣ ಸಚಿವಾಲಯ ಎಲ್ಲ ರಾಜ್ಯಗಳ ಶಿಕ್ಷಣ ಇಲಾಖೆಗಳ ಮುಖ್ಯಸ್ಥರಿಗೆ ಡಿ.16 ರಂದು ಪತ್ರ ಬರೆದು ಸೂಚಿಸಿತ್ತು. ಅದರಂತೆ, ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಬಳಿಕ ಕಾರ್ಯಕ್ರಮದ ಕ್ರೋಡೀಕೃತ ಮಾಹಿತಿಯನ್ನು ಇಲಾಖೆಯ ಶೈಕ್ಷಣಿಕ ಶಾಖೆಗೆ ಸಲ್ಲಿಸಬೇಕು ಎಂದು ಎಲ್ಲ ಜಿಲ್ಲಾ ಉಪ ನಿರ್ದೇಶಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು (ಶೈಕ್ಷಣಿಕ) ತಿಳಿಸಿದ್ದಾರೆ.

‘ಸೂರ್ಯ ನಮಸ್ಕಾರವುಯೋಗಾಸನದ 10 ಭಂಗಿಗಳನ್ನು ಒಳಗೊಂಡಿದ್ದು, ವಿದ್ಯಾರ್ಥಿಗಳ ಆರೋಗ್ಯ ವೃದ್ದಿಗೆ ಹಾಗೂ ಮನೋಬಲ ಹೆಚ್ಚಿಸುವುದಕ್ಕೆ ನೆರವಾಗಲಿದೆ. ಕೇಂದ್ರದ ಸೂಚನೆಯಂತೆ ಜ. 1ರಿಂದ ಫೆ. 7ರವರೆಗಿನ ಒಟ್ಟು 38 ದಿನಗಳ ಪೈಕಿ, 21 ದಿನ ಬೆಳಗ್ಗಿನ ಅಸೆಂಬ್ಲಿ ಅವಧಿಯಲ್ಲಿ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಬೇಕಿದೆ. ಪ್ರತಿ ದಿನ 13 ಸೂರ್ಯ ನಮಸ್ಕಾರಗಳಂತೆ ಒಟ್ಟು 273 (21 ದಿನಗಳಲ್ಲಿ) ಸೂರ್ಯ ನಮಸ್ಕಾರಗಳನ್ನು ಮಾಡಿದ ವರಿಗೆ ಇ-ಪ್ರಮಾಣಪತ್ರ ನೀಡುವುದಾಗಿ ರಾಷ್ಟ್ರೀಯ ಯೋಗಾಸನ ಸ್ಪೋರ್ಟ್ಸ್ ಫೆಡರೇಷನ್‌ ತಿಳಿಸಿದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಉಪನ್ಯಾಸಕರ ಅಪಸ್ವರ: ಆದರೆ, ಪದವಿ ಪೂರ್ವ ಕಾಲೇಜುಗಳಲ್ಲಿ ‘ಸೂರ್ಯ ನಮಸ್ಕಾರ’ ಕಾರ್ಯಕ್ರಮಕ್ಕೆ ಉಪನ್ಯಾಸಕರ ವಲಯದಿಂದ ವಿರೋಧ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಎರಡನೇ ಡೋಸ್‌ ಪಡೆದವರಿಗೆ ಬೂಸ್ಟರ್‌ ಲಸಿಕೆಯ ಭಾಗ್ಯ

Mon Dec 27 , 2021
  ಎರಡನೇ ಲಸಿಕೆಯ ನಂತರ 9-12 ತಿಂಗಳು ಮಾತ್ರ ಬೂಸ್ಟರ್ ಡೋಸ್ ನೀಡಲಾಗುತ್ತದೆ.ಸೋಮವಾರದೊಳಗೆ ಕೇಂದ್ರ ಮಾರ್ಗಸೂಚಿ ಬಿಡುಗಡೆಯಾಗಿದ್ದು,ಹೊಸದಿಲ್ಲಿಯಲ್ಲಿ  ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಪ್ರಕ್ರಿಯೆಯು ಜನವರಿ 10 ರಂದು ಪ್ರಾರಂಭವಾಗಲಿದೆ ಆದರೆ ಫಲಾನುಭವಿಗಳು ಎರಡನೇ ಡೋಸ್ ನಂತರ 9-12 ತಿಂಗಳು ಮಾತ್ರ ಅದಕ್ಕೆ ಅರ್ಹರಾಗಬಹುದು ಎಂದು ತಿಳಿಸಿದ್ದು, ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಹಾಗೂ ಅಸ್ವಸ್ಥತೆ ಹೊಂದಿರುವವರಿಗೆ ಮುನ್ನೆಚ್ಚರಿಕಾ ಲಸಿಕೆ […]

Advertisement

Wordpress Social Share Plugin powered by Ultimatelysocial